ಮಂಡ್ಯ, (ಡಿ.22): ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರದಿಂದ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್ ಅವರು ಈಗ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯಾರಿಗೆ ಬೆಂಬಲ ಕೊಡುತ್ತಿದ್ದಾರೆ ಎನ್ನುವ ಚರ್ಚೆಗಳು ಜೋರಾಗಿವೆ.

ಒಬ್ಬರು ಕಾಂಗ್ರೆಸ್ ಅಂದ್ರೆ, ಮತ್ತೋಬ್ಬರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಬೆಂಬಲಿಸಿದ್ದಾರೆ ಎನ್ನುವ ಮಾತುಗಳ ಸಹ ಕೇಳಿಬರುತ್ತಿವೆ. ಇದೀಗ ಈ ಬಗ್ಗೆ ಸ್ವತಃ ಇದ್ಕೆ ಸುಮಲತಾ ಅಂಬರೀಶ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. 

ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆತ್ಮಹತ್ಯೆ 

ಸಮೀಪದ ದೊಡ್ಡರಸಿನಕೆರೆ ಗ್ರಾಮದಲ್ಲಿ ಗ್ರಾಪಂ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲರಿಗೂ ಮತ ಹಾಕಲು ಸಾಧ್ಯವಿಲ್ಲ. ನಮ್ಮ ಬೆಂಬಲಿಗರೇ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳಾಗಿರುವಾಗ ಯಾರನ್ನು ಬೆಂಬಲಿಸುವುದು ಎಂಬ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ. ಅದಕ್ಕಾಗಿ ಚುನಾವಣೆಯಲ್ಲಿ ತಟಸ್ಥವಾಗಿ ಉಳಿದೆ ಎಂದು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಎಲ್ಲ ಪಕ್ಷದವರೂ ಬೆಂಬಲಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾನು ಅವರ ಬೆಂಬಲಕ್ಕೆ ನಿಲ್ಲಬೇಕೆಂಬ ಆಸೆ ಇತ್ತು. ಕಾರ್ಯಕರ್ತರೇ ಒಬ್ಬರಿಗೊಬ್ಬರು ಎದುರಾಳಿಯಾಗಿ ನಿಂತಾಗ ನಾನು ಯಾರನ್ನು ಬೆಂಬಲಿಸಲಿ. ಒಬ್ಬರ ಪರ ನಿಂತರೆ ಇನ್ನೊಬ್ಬರಿಗೆ ನಿಷ್ಠುರವಾಗುವ ಪರಿಸ್ಥಿತಿ ಬರುತ್ತದೆ. ಅದಕ್ಕಾಗಿಯೇ ತಟಸ್ಥವಾಗಿ ಉಳಿದಿರುವೆ ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅವರವರಿಗೆ ಬಿಟ್ಟಿದ್ದು. ಅದಕ್ಕೆ ನಾನು ಪ್ರತಿಕ್ರಿಯಿಸುವುದು ಸರಿಯಾಗಿರುವುದಿಲ್ಲ. ಸದ್ಯದ ರಾಜಕೀಯ ಬೆಳವಣಿಗೆ ಆಗುತ್ತಿರೋದು ಅಧಿಕೃತವಾಗಿಲ್ಲ. ಹೀಗಾಗಿ ಎಲ್ಲವನ್ನೂ ಕಾದು ನೋಡಬೇಕು ಎಂದ ಸುಮಲತಾ ಅಂಬರೀಶ್ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ವಾಗ್ವಾದಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.