2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮತ್ತು 2029ರಲ್ಲಿ ರಾಹುಲ್ ಗಾಂಧಿ(Rahul gandhi)ಅವರನ್ನು ದೇಶದ ಪ್ರಧಾನ ಮಂತ್ರಿ ಮಾಡಲು ಎಲ್ಲರೂ ಪಣ ತೊಡಬೇಕು ಎಂದು ನೂತನ ಸಚಿವ ಪಿ.ಎಂ.ನರೇಂದ್ರಸ್ವಾಮಿ(PM Narendraswamy) ಕಾರ್ಯಕರ್ತರಿಗೆ ಹೇಳಿದರು.

ಮಂಡ್ಯ (ಆ.9): 2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮತ್ತು 2029ರಲ್ಲಿ ರಾಹುಲ್ ಗಾಂಧಿ(Rahul gandhi)ಅವರನ್ನು ದೇಶದ ಪ್ರಧಾನ ಮಂತ್ರಿ ಮಾಡಲು ಎಲ್ಲರೂ ಪಣ ತೊಡಬೇಕು ಎಂದು ನೂತನ ಸಚಿವ ಪಿ.ಎಂ.ನರೇಂದ್ರಸ್ವಾಮಿ(PM Narendraswamy) ಕಾರ್ಯಕರ್ತರಿಗೆ ಹೇಳಿದರು.

ಯಾರನ್ನೂ ಟೀಕೆ ಮಾಡಲ್ಲ

ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಆಯೋಜಿಸಿದ್ದ ನೂತನ ಸಚಿವರಾದ ಎನ್.ಚಲುವರಾಯಸ್ವಾಮಿ ಮತ್ತು ಪಿ.ಎಂ.ನರೇಂದ್ರಸ್ವಾಮಿ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಯಾರನ್ನೂ ಟೀಕೆ ಮಾಡುವುದಿಲ್ಲ. ಪ್ರಚೋದನೆಗೂ ಒಳಗಾಗುವುದಿಲ್ಲ. ಜನರ ಸೇವೆ ಮಾಡುವುದಷ್ಟೇ ನಮ್ಮ ಕೆಲಸ ಎಂದು ಶಪಥ ಮಾಡಿದರು.

2029ಕ್ಕೆ ರಾಹುಲ್ ಗಾಂಧಿ ಪ್ರಧಾನಿ ಮಾಡಲು ಪಣ

ನಾವು ನೆಪಮಾತ್ರಕ್ಕಷ್ಟೇ ಮಂತ್ರಿಗಳು. ನಿಮ್ಮಂತೆಯೇ ನಾವೂ ಕಾರ್ಯಕರ್ತರೇ. ಜಿಲ್ಲೆಯ ಅಭಿವೃದ್ಧಿ ಮಾಡುವುದಕ್ಕಷ್ಟೇ ನಮ್ಮ ಆದ್ಯತೆ. ವೀರಾವೇಷದ ಮಾತುಗಳ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ೨೦೨೮ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ತರಲು ಮತ್ತು ೨೦೨೯ಕ್ಕೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಲು ಒಟ್ಟಾಗಿ ಶ್ರಮಿಸೋಣ ಎಂದರು.