ಮಂಗಳೂರು, (ಜುಲೈ.17): ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಮಿಥುನ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನನಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಸದ್ಯ ನಾನೀಗ ಬೆಂಗಳೂರಿನಲ್ಲಿ ಕ್ವಾರೆಂಟೈನ್ ಆಗಿದ್ದೇನೆ. ನನ್ನ ಜೊತೆ ಕಳೆದ ಕೆಲ ದಿನಗಳಿಂದ ಹತ್ತಿರದ ಸಂಪರ್ಕದಲ್ಲಿದ್ದವರು ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ.

ಕೊರೋನಾ ವೈರಸ್‌ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇದೇ ಜಿಲ್ಲೆಯ ಶಾಸಕರಾದ ಭರತ್ ಶೆಟ್ಟಿ ಹಾಗೂ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರಿಗೂ ಕೋವಿಡ್ -19 ವಕ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.