ಪ್ರಿಯಾಂಕ್ ಖರ್ಗೆ ತಾನೇ ಮುಂದಿನ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ: ಶಾಸಕ ಭರತ್ ಶೆಟ್ಟಿ ವಾಗ್ದಾಳಿ

ಉಚಿತ ಯೋಜನೆಗಳಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಕೇವಲ ಆದೇಶಗಳು ಮಾತ್ರ ಬರ್ತಿದೆ ಎಂದು ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿ ವಾಗ್ದಾಳಿ ನಡೆಸಿದರು.

Mangaluru north MLA Bharat shetty outraged against congress government at mangaluru rav

ಮಂಗಳೂರು (ಮಾ.22): ಉಚಿತ ಯೋಜನೆಗಳಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಕೇವಲ ಆದೇಶಗಳು ಮಾತ್ರ ಬರ್ತಿದೆ ಎಂದು ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿ ವಾಗ್ದಾಳಿ ನಡೆಸಿದರು.

ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ, ಮೈನಾರಿಟಿ ಫಂಡ್ ಮಾತ್ರ ಸ್ವಲ್ಪ ರಿಲೀಸ್ ಮಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅನುದಾನ ನೀಡಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ. ರಾಜ್ಯಾದ್ಯಂತ ವಿದ್ಯುತ್ ಕೊರತೆ ಉಂಟಾಗಿದೆ ನಗರಗಳಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿದೆ. ಆಡಳಿತ, ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ಪ್ರಚಾರ ಕಾರ್ಯಕ್ಕೆ ಸಂಸದ ಪ್ರತಾಪ್ ಸಿಂಹ ಗೈರು! ಬಿಜೆಪಿ ಅಭ್ಯರ್ಥಿ ಯದುವೀರ ಒಡೆಯರ್ ಹೇಳಿದ್ದೇನು?

ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಳವಾಗಿವೆ. ರಾಜ್ಯ ಸರ್ಕಾರದ ಪ್ರಾಯೋಜಿತ ಜಿಹಾದಿಸಂ ರಾಜ್ಯದಲ್ಲಿ ಅವ್ಯಹತವಾಗಿ ನಡೆಯುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಮಾಡುವ ಕೆಲಸ ಆಗ್ತಿದೆ. ದೇಶದ್ರೋಹಿಗಳಾಗಿದ್ದರೂ ನಮಗೆ ವೋಟ್ ಹಾಕಿದ್ರೆ ಸಾಕು ಎಂಬ ಮನಸ್ಥಿತಿ ಕಾಂಗ್ರೆಸ್ ಸರ್ಕಾರಕ್ಕಿದೆ. ಹೀಗಾಗಿ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿರುವವರ ಮೇಲೆ ಕ್ರಮ ಕೈಗೊಳ್ಳದೇ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ ಇದು ರಾಜ್ಯ ಮತ್ತು ದೇಶಕ್ಕೆ ಅಪಾಯಕಾರಿಯಾಗಿದೆ. ಗೋಕಳ್ಳರನ್ನು ಹಿಡಿದವರ ಮೇಲೆಯೇ ಗೂಂಡಾ ಕಾಯ್ದೆ ಹಾಕುತ್ತಿದ್ದಾರೆ. ಸರ್ಕಾರದ ಅನ್ಯಾಯದ ವಿರುದ್ಧ ಧ್ವನಿಯೆತ್ತಿದವರ ಮೇಲೆ ಕೇಸ್ ಹಾಕುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.

 

ಒಂದು ಕೇಸ್, ಮೂರು ಎಫ್‌ಐಆರ್!, ಗೂಂಡಾ ಕಾಯ್ದೆಯಡಿ ಮಂಗಳೂರು ಹಿಂದೂ ಕಾರ್ಯಕರ್ತನ ಬಂಧನ!

ಇನ್ನು ಸಚಿವ ಪ್ರಿಯಾಂಕ್ ಖರ್ಗೆ ತಾನೇ ಮುಂದಿನ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಮಗ ಶ್ಯಾಡೋ ಸಿಎಂ ರೀತಿ ಅಧಿಕಾರ ಚಲಾಯಿಸುತ್ತಿದ್ದಾರೆ. ಯಾವುದೇ ಜಿಲ್ಲಾ ಮಂತ್ರಿಗಳು ಜನ ಸಂಪರ್ಕ ಮಾಡ್ತಿಲ್ಲ ಒಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

Latest Videos
Follow Us:
Download App:
  • android
  • ios