ಅನೇಕ ಅತೃಪ್ತ ಬಿಜೆಪಿಗರು ನನ್ನ ಜತೆ ಸಂಪರ್ಕದಲ್ಲಿ: ಜಗದೀಶ್ ಶೆಟ್ಟರ್
ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದ್ದು ಮಾತ್ರವಲ್ಲ, ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗಿಲ್ಲ. ಎಷ್ಟೋ ಜನ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಒಟ್ಟಾರೆ ಬಿಜೆಪಿಯಲ್ಲಿ ಅನೇಕ ಸಮಸ್ಯೆಗಳಿವೆ. ದಿನದಿಂದ ದಿನಕ್ಕೆ ಬಿಜೆಪಿ ಅಧೋಗತಿಗೆ ಇಳಿಯುತ್ತಿದೆ: ಜಗದೀಶ್ ಶೆಟ್ಟರ್

ಬೆಂಗಳೂರು(ಸೆ.06): ‘ಬಿಜೆಪಿಯ ಅನೇಕ ಲಿಂಗಾಯತ ನಾಯಕರಲ್ಲಿ ಆಕ್ರೋಶವಿದೆ, ಬಹಳಷ್ಟು ಮುಖಂಡರು ತಮ್ಮ ಜೊತೆ ಮಾತನಾಡಿದ್ದಾರೆ. ಮಾಜಿ ಸಚಿವರು ಚರ್ಚಿಸಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದ್ದು ಮಾತ್ರವಲ್ಲ, ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗಿಲ್ಲ. ಎಷ್ಟೋ ಜನ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಒಟ್ಟಾರೆ ಬಿಜೆಪಿಯಲ್ಲಿ ಅನೇಕ ಸಮಸ್ಯೆಗಳಿವೆ. ದಿನದಿಂದ ದಿನಕ್ಕೆ ಬಿಜೆಪಿ ಅಧೋಗತಿಗೆ ಇಳಿಯುತ್ತಿದೆ ಎಂದರು. ಜಿಲ್ಲೆಗಳಲ್ಲಿ ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ವಿವಿಧ ಕಾರ್ಯಕ್ರಮಗಳನ್ನು ಸ್ವಾಗತಿಸುತ್ತಿದ್ದಾರೆ. ಪ್ರಸ್ತುತ ಪರಿಸ್ಥಿತಿ ನೋಡಿದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 15-20 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.
Karnataka politics: 'ಬಿಜೆಪಿ ಲೀಡರ್‌ಲೆಸ್ ಪಾರ್ಟಿ' - ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯ
ಶಾಸಕ ಬಸವರಾಜ ರಾಯರೆಡ್ಡಿ ಅವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದಲ್ಲಿ ರಾಜ್ಯಾಧ್ಯಕ್ಷರು ನಿರ್ಧಾರ ಮಾಡುತ್ತಾರೆ. ತಾವಲ್ಲ ಎಂದು ಉತ್ತರಿಸಿದರು.