ಸುಮಾರು 40 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ತಿಗಳ ಕ್ಷತ್ರಿಯ ಸಮುದಾಯವನ್ನು ಕಡೆಗಣಿಸಲಾಗಿದೆ. ಆದ್ದರಿಂದ ಮಾ.14ರಂದು ತಿಗಳ ಸಮುದಾಯದ ನಡೆ ಕಾಂಗ್ರೆಸ್‌ ಕಡೆ ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಬೆಂಗಳೂರು (ಮಾ.12): ರಾಜ್ಯ ಸರ್ಕಾರ ಎಲ್ಲ ಸಮುದಾಯಗಳಿಗೂ ಅಭಿವೃದ್ಧಿ ನಿಗಮ ಮಂಡಳಿಗಳನ್ನು ಸ್ಥಾಪನೆ ಮಾಡಿದೆ. ಆದರೆ, ಸುಮಾರು 40 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ತಿಗಳ ಕ್ಷತ್ರಿಯ ಸಮುದಾಯವನ್ನು ಕಡೆಗಣಿಸಲಾಗಿದೆ. ಆದ್ದರಿಂದ ಮಾ.14ರಂದು ತಿಗಳ ಸಮುದಾಯದ ನಡೆ ಕಾಂಗ್ರೆಸ್‌ ಕಡೆ ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ನಗರದ ಖಾಸಗಿ ಹೊಟೆಲ್ ನಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ರಾಜ್ಯಾದ್ಯಂತ ಇರುವ ತಿಗಳ ಕ್ಷತಿಯ ಜನಾಂಗವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಈಗಾಗಲೇ ಸರ್ಕಾರದಿಂದ ರಾಜ್ಯದಲ್ಲಿರುವ ಎಲ್ಲಾ ಜಾತಿಗಳು ಹಾಗೂ ಸಮುದಾಯಗಳನ್ನು ಅಭಿವೃದ್ಧಿ ಮಾಡಲು ನಿಗಮ ಮಂಡಳಿ ಮಾಡಲಾಗಿದೆ. ಆದರೆ, ಈವರೆಗೆ ತಿಗಳ ಕ್ಷತಿಯ ಸಮುದಾಯಕ್ಕೆ ಯಾವುದೇ ನಿಗಮ ಮಂಡಳಿಯನ್ನು ಸ್ಥಾಪನೆ ಮಾಡಿಕೊಡದೇ ಕಡೆಗಣಿಸಲಾಗಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು - ಮೈಸೂರು ದಶಪಥ ಹೆದ್ದಾರಿ ಬಿಜೆಪಿ ಸರ್ಕಾರದ ಕೊಡುಗೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ನಿಗಮ ಮಂಡಳಿ ಸಿಬ್ಬಂದಿಗೆ ವೇತನ ಸಿಗುತ್ತಿಲ್ಲ: ಇನ್ನು ಈಗಾಗಲೇ ವಿವಿಧ ಸಮುದಾಯಗಳ ಅಭಿವೃದ್ಧಿಗೆ ಸ್ಥಾಪಿಸಲಾಗಿರುವ ನಿಗಮ ಮಂಡಳಿಗಳಿಗೆ ಸಮರ್ಪಕವಾಗಿ ಹಣವನ್ನು ಸಂದಾಯ ಮಾಡುತ್ತಿಲ್ಲ. ಜೊತೆಗೆ ಈಗಿರುವ ನಿಗಮ ಮಂಡಳಿಯಲ್ಲಿ ಕೆಲಸ ಮಾಡುವವರಿಗೆ ಸರಿಯಾಗಿ ಸಂಬಳವನ್ನೂ ಕೂಡ ನೀಡುತ್ತಿಲ್ಲ. ಕಳೆದ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಗಳ ಸಮುದಾಯದ ಅಭಿವೃದ್ಧಿಗಾಗಿ ಬರೋಬ್ಬರಿ 400 ಕೋಟಿ ರೂ. ಇಟ್ಟಿದೇವೆ ಎಂದು ಹೇಳಿದ್ದರು. ಆದರೆ, ಈವರೆಗೆ ಕೇವಲ ಒಂದು ರೂಪಾಯಿ ಖರ್ಚು ಮಾಡಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಪಿ.ಆರ್. ರಮೇಶ್‌ ಹೇಳಿದರು.

ಮಾ.14ರಂದು ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಸಮಾವೇಶ: ಇದೇ ಮಾರ್ಚ್‌ 14 ರಂದು ತಿಗಳ ಸಮುದಾಯದ ಜಾಗೃತಿ ಸಭೆಯನ್ನು ಮಾಡುತ್ತಿದ್ದೇವೆ. ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಈ ತಿಗಳ ಕ್ಷತ್ರಿಯ ಸಮುದಾಯದ ಜಾಗೃತಿ ಸಮಾವೇಶಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಗಮಿಸಲಿದ್ದಾರೆ. ರಾಜ್ಯದಲ್ಲಿರುವ ತಿಗಳ ಕ್ಷತಿಯ ಸಮುದಾಯವನ್ನು ಸರ್ಕಾರ ಕಡೆಗಣಿಸಿದ್ದ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಪಾಠವನ್ನು ಮುಂಬರುವ ಚುನಾವಣೆಯಲ್ಲಿ ಕಲಿಸಬೇಕಾದ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ "ತಿಗಳ ಕ್ಷತ್ರಿಯ ಸಮುದಾಯದ ನಡೆ ಕಾಂಗ್ರೆಸ್ ಕಡೆ" ಎಂದು ನಾವು ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಮತಾಂತರ ಕಾಯ್ದೆ ಹಿಂಪಡೆಯುತ್ತೇವೆಂದು ಪ್ರಣಾಳಿಕೆಯಲ್ಲಿ ತಿಳಿಸಿ: ಡಿಕೆಶಿ, ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲು

ಸಿದ್ದು ಸರ್ಕಾರದಲ್ಲಿ ತಿಗಳ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಿದ್ದರು: ಈಗಾಗಲೇ ಕಾಂಗ್ರೆಸ್‌ ಹಾಗೂ ಇತರೆ ಸಮ್ಮಿಶ್ರ ಸರ್ಕಾರಗಳಿಂದ ಕೊಡಲಾಗಿದ್ದ ತಿಗಳ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಈಗಿರುವ ಬಿಜೆಪಿ ಸರ್ಕಾರ ರದ್ದು ಮಾಡಿದೆ. ಅದಕ್ಕಾಗಿ ತಿಗಳ ಕ್ಷತಿಯ ಸಮುದಾಯದ ನಡೆ ಕಾಂಗ್ರೆಸ್ ಕಡೆ ಎಂದು ಹೇಳುತ್ತಿದ್ದೇವೆ. ರಾಜ್ಯದಲ್ಲಿ ನಮ್ಮ ಸಮುದಾಯದ ಜನರು 40 ಲಕ್ಷಕ್ಕಿಂತ ಅಧಿಕ ಸಂಖ್ಯೆಯಲ್ಲಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ತಿಗಳ ಜನಾಂಗದ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಿ ಓದಿದ್ದರು. ಆದರೆ, ಈಗಿನ ಸರ್ಕಾರದ ಈ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಹೇಳಿದರು.