ಮುಖ್ಯಮಂತ್ರಿಗಳ ಡಿನ್ನರ್ ಸಭೆ ವಿಚಾರವಾಗಿ ಮುಖ್ಯಮಂತ್ರಿ ಕರೆದರೂ ಹೋಗುತ್ತೇವೆ. ಉಪಮುಖ್ಯಮಂತ್ರಿ ಕರೆದರೂ ಹೋಗುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಳಗಾವಿ (ಮಾ.06): ಮುಖ್ಯಮಂತ್ರಿಗಳ ಡಿನ್ನರ್ ಸಭೆ ವಿಚಾರವಾಗಿ ಮುಖ್ಯಮಂತ್ರಿ ಕರೆದರೂ ಹೋಗುತ್ತೇವೆ. ಉಪಮುಖ್ಯಮಂತ್ರಿ ಕರೆದರೂ ಹೋಗುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳಲ್ಲಿ ಮಾತ್ರ ನಡೆಯುತ್ತಿದೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ನಿರ್ಧಾರಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಒಪ್ಪಿದ್ದಾರೆ. ಆದ್ದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Add Asianetnews Kannada as a Preferred SourcegooglePreferred

ಪ್ರಭಾವಿ ಸ್ವಾಮೀಜಿಯ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಯಾವುದೇ ಸ್ವಾಮೀಜಿ ತಮ್ಮನ್ನು ಸಂಪರ್ಕ ಮಾಡಿಲ್ಲ ಎಂದು ಹೇಳಿದರು. ಎಡಗೈ, ಬಲಗೈ ಮೀಸಲಾತಿ ವಿಚಾರವನ್ನು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಾಗುವುದು. ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅಕ್ರಮ ಆರೋಪದ ಕುರಿತು ತನಿಖೆ ನಡೆಸಲಾಗುವುದು. ಫೋನ್ ಟ್ಯಾಪಿಂಗ್ ಆರೋಪ ಸಂಪೂರ್ಣವಾಗಿ ಭೋಗಸ್. ಅಂತಹ ಯಾವುದೇ ಘಟನೆ ನಡೆಯುತ್ತಿಲ್ಲ ಎಂದರು.

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ವಿಚಾರದಲ್ಲಿ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ವಿರೋಧಿಸುವುದು ಸ್ವಾಭಾವಿಕ. ಇಲ್ಲಿನ ಸಂಸದರು ಗೆಜೆಟ್ ಅಧಿಸೂಚನೆ ಮಾಡಿಸಬೇಕು. ಆದರೆ ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡುತ್ತಿಲ್ಲ. ಅವರು ಪ್ರಧಾನಮಂತ್ರಿ ಮುಂದೆ ಹೋಗಲು ಹೆದರುತ್ತಾರೆ. ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ಸಂಬಂಧ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ವಿವರಿಸಿದರು.

ರಾಜ್ಯ ಸರ್ಕಾರವನ್ನು ವಿಜಯೇಂದ್ರ ನಾಲಾಯಕ ಎಂದು ಆರೋಪಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷದಲ್ಲಿಯೇ ವಿಜಯೇಂದ್ರ ಅವರನ್ನು ಎಲ್ಲರೂ ಒಪ್ಪುತ್ತಿಲ್ಲ. ಮೊದಲ ಬಾರಿಗೆ ಶಾಸಕರಾದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದನ್ನು ಹಲವರು ಒಪ್ಪುತ್ತಿಲ್ಲ. ಪುತ್ರ ವ್ಯಾಮೋಹದಿಂದ ಅವರಿಗೆ ಆ ಸ್ಥಾನ ಸಿಕ್ಕಿದೆ. ಆರ್.ಅಶೋಕ ಮತ್ತು ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಅವರನ್ನು ಒಪ್ಪುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರವೇ ನಾಲಾಯಕ ಸರ್ಕಾರ ಎಂದು ತಿರುಗೇಟು ನೀಡಿದರು.

ತೈಲ ಬೆಲೆ ಏರಿಕೆ

ರುಪಾಯಿ ಮೌಲ್ಯ ಕುಸಿತ ವಿಚಾರವಾಗಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಿದೇಶಾಂಗ ನೀತಿ ಅರ್ಥವಾಗುತ್ತಿಲ್ಲ ಎಂದ ಅವರು, ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳಿಂದ ನಿರಪರಾಧಿಗಳು ಸಾವನ್ನಪ್ಪುತ್ತಿದ್ದಾರೆ. ಯುದ್ಧದ ಪರಿಣಾಮವಾಗಿ ತೈಲ ಬೆಲೆ ಏರಿಕೆ ಆಗುತ್ತಿದೆ. ಪ್ರಧಾನಮಂತ್ರಿ ಮೋದಿ ಆಡಳಿತದಲ್ಲಿಯೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನೂರು ರುಪಾಯಿಗೆ ತಲುಪಿದೆ ಎಂದು ಹೇಳಿದರು. ಯುದ್ಧದ ಪರಿಣಾಮ ರಾಜ್ಯದ ಕೈಗಾರಿಕೆಗಳ ಮೇಲೂ ಜಾಗತಿಕವಾಗಿ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಉದ್ಯಮಿಗಳೊಂದಿಗೆ ನಿರಂತರ ಸಭೆಗಳನ್ನು ನಡೆಲಾಗುವುದು ಎಂದರು.