Asianet Suvarna News Asianet Suvarna News

ಅಗತ್ಯ ಬಿದ್ದರೆ ಸುಮಲತಾ ಜತೆಗೂ ಭೇಟಿ: ಕುಮಾರಸ್ವಾಮಿ

ನಾನು ಸ್ಪರ್ಧಿಸುವ ತೀರ್ಮಾನ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ ಅಷ್ಟೇ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದು ಮಾರ್ಮಿಕವಾಗಿ ಹೇಳಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ 

Meet with Mandya MP Sumalatha Ambareesh if necessary Says Former CM HD Kumaraswamy grg
Author
First Published Jan 8, 2024, 4:38 AM IST | Last Updated Jan 8, 2024, 4:37 AM IST

ಬೆಂಗಳೂರು(ಜ.08):  ಅಗತ್ಯ ಬಂದರೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರನ್ನೂ ಭೇಟಿ ಮಾಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೇಟಿ ಮಾಡುವ ಅವಶ್ಯಕತೆ ಬಂದರೆ ಸುಮಲತಾ ಅವರನ್ನು ಕೂಡಾ ಭೇಟಿ ಆಗುತ್ತೇನೆ. ತಪ್ಪೇನಿದೆ ಎಂದರು.

ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ನಾವೇನು‌ ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೀವಾ? ಇಂತಹವರಿಗೆ ತೊಂದರೆ ಕೊಟ್ಟು ನಿಲ್ಲಬೇಕು ಅಂತ ಖಂಡಿತ ಇಲ್ಲ. ಈ ಬಗ್ಗೆ ಇನ್ನೂ ಚರ್ಚೆಯೇ ಆಗಿಲ್ಲ. ಇವೆಲ್ಲ ಪ್ರಾರಂಭಿಕ ಹಂತದಲ್ಲಿ ‌ಇದೆ. ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡೋಕೆ ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

ಮಂಡ್ಯ ಲೋಕಸಭಾ ಕಣದಲ್ಲಿ ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿಗಳೇ ಇಲ್ಲ! ಜೆಡಿಎಸ್ ಸಜ್ಜು, ಸುಮಲತಾ ನಡೆ ಏನು?

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಸ್ಪರ್ಧಿಸುವ ತೀರ್ಮಾನ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ ಅಷ್ಟೇ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದು ಮಾರ್ಮಿಕವಾಗಿ ಹೇಳಿದರು.

Latest Videos
Follow Us:
Download App:
  • android
  • ios