ಕಾವೇರಿ ನೀರಿನ ಸಮಸ್ಯೆಗೆ ಮೇಕೆದಾಟು ಪರಿಹಾರ: ಸಂಸದ ಡಿ.ಕೆ.ಸುರೇಶ್
ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಹಿಂದೆ ಕಾಂಗ್ರೆಸ್ ಮೇಕೆದಾಟು ಯೋಜನೆಗಾಗಿ ಹೋರಾಟ ನಡೆಸಿದ್ದು, ಈ ಯೋಜನೆ ಜಾರಿಯಾಗಬೇಕು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ಚನ್ನಪಟ್ಟಣ (ಅ.01): ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಹಿಂದೆ ಕಾಂಗ್ರೆಸ್ ಮೇಕೆದಾಟು ಯೋಜನೆಗಾಗಿ ಹೋರಾಟ ನಡೆಸಿದ್ದು, ಈ ಯೋಜನೆ ಜಾರಿಯಾಗಬೇಕು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ನಗರದಲ್ಲಿರುವ ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಕಾವೇರಿ ಸಂಕಷ್ಟಕ್ಕೆ ನ್ಯಾಯಾಧೀಕರಣದ ತೀರ್ಪು ಕಾರಣ. ಇದು ಸುಪ್ರಿಂ ಕೋರ್ಟ್ ಮಾಡಿರುವ ನ್ಯಾಯಾಧೀಕರಣ. ಕಾಂಗ್ರೆಸ್‌ನವರು ಮಾಡಿರುವ ನ್ಯಾಯಾಧೀಕರಣ ಅಲ್ಲ.
ಬಿಜೆಪಿ ನೇತೃತ್ವದ ಬೋರ್ಡ್ ತೀರ್ಮಾನ ನೀಡಿದೆ. ಇವತ್ತು ಬೋರ್ಡ್‌ಗೆ ಸಂಪೂರ್ಣ ಅಧಿಕಾರ ಇದೆ. ಸಂಪೂರ್ಣ ನೀರಾವರಿ ಜವಾಬ್ದಾರಿ ಅವರಿಗೆ ನೀಡಲಾಗಿದೆ. ನಮ್ಮ ಸರ್ಕಾರದ ಪರವಾಗಿ ಅಧಿಕಾರಿಗಳು ವಾದ ಮಾಡುತ್ತಿದ್ದಾರೆ. ಆದರೆ, ರಾಜ್ಯ ರೈತರ ಹಿತಕ್ಕೆ ಧಕ್ಕೆಯುಂಟಾಗುತ್ತಿದೆ. ರಾಜ್ಯದ ಸಮಸ್ತರೂ ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದರು. ಹೋರಾಟದ ಮೂಲಕ ಕೇಂದ್ರ ಹಾಗೂ ನ್ಯಾಯಾಧಿಕರಣದ ಗಮನ ಸೆಳೆಯಬೇಕು. ಆ ನಿಟ್ಟಿನಲ್ಲಿ ಹೋರಾಟಕ್ಕೆ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲವಿದೆ. ಸುಪ್ರಿಂಕೋರ್ಟ್ ಆದೇಶ ಉಲ್ಲಂಘನೆ ಬಗ್ಗೆ ಗೊಂದಲ ಇದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರ ಬಲವಾದ ನಿರ್ಣಾಯ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ಮೇಕೆದಾಟು ಯೋಜನೆ ಕುರಿತು ಈಗಾಗಲೆ ಕೇಂದ್ರ ಮಂತ್ರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚೆ ಮಾಡಿದ್ದಾರೆ. ನ್ಯಾಯಾಲಯದಲ್ಲಿ ಮೇಕೆದಾಟು ವಿಚಾರ ಬೇಗ ಇತ್ಯರ್ಥ ಆಗಬೇಕು. ತಮಿಳುನಾಡು ಮೇಕೆದಾಟು ಯೋಜನೆಗೆ ಖ್ಯಾತೆ ತೆಗೆದಿದೆ. ಕೇಂದ್ರ ಸರ್ಕಾರ ಮನಸ್ಸು ಮಾಡಬೇಕು ಎಂದು ತಿಳಿಸಿದರು. ಕಾವೇರಿ ತೀರ್ಪು ಸಂದರ್ಭದಲ್ಲಿ ಮೇಕೆದಾಟು ವಿಚಾರ ಪ್ರಸ್ತಾಪಿಸಲಾಗಿದೆ.
ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಾಗಲಿ: ಕೆ.ಎಸ್.ಈಶ್ವರಪ್ಪ
ಕೇಂದ್ರ ಸರ್ಕಾರ ಒತ್ತು ನೀಡಿದರೆ ಅನುಕೂಲವಾಗಲಿದೆ. ಇದು ಕೇಂದ್ರದ ಕೈಯಲ್ಲಿದೆ. ಯೋಜನೆಗೆ ಪರಿಸರ ಇಲಾಖೆ ಅನುಮತಿ ಕೊಡಿಸಬೇಕು. ನಮ್ಮ ನೀರನ್ನು ನಾವು ಹೆಚ್ಚು ಬಳಕೆ ಮಾಡಿಕೊಡಲು ಒಂದು ನಿರ್ಧಾರ ಮಾಡಬೇಕು. ಕೇಂದ್ರ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು. ನೀರು ನಿಲ್ಲಿಸಿ ನಂತರ ಸುಪ್ರಿಂ ಕೋರ್ಟ್ ಗೆ ಅರ್ಜಿ ಹಾಕುವಂತೆ ರೈತರ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಒಬ್ಬೊಬ್ಬರ ಅಭಿಪ್ರಾಯ ಒಂದೊಂದು ತರ ಇರುತ್ತೆ. ನ್ಯಾಯಾಧೀಕರಣದ ಆದೇಶದ ಬಗ್ಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುತ್ತೆ. ಕಾನೂನಿನ ಹೋರಾಟ ನಡೆಯಲಿದೆ ಎಂದು ತಿಳಿಸಿದರು.