ನಾ ನಾಯಕಿ ಸಮಾವೇಶದಲ್ಲಿ ತಮ್ಮನ್ನೂ ಸೇರಿದಂತೆ ಪುರುಷ ನಾಯಕರೂ ವೇದಿಕೆಯ ಮೇಲೆ ಕೂರುವುದಿಲ್ಲ. ವೇದಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಮಹಿಳೆಯರಿಗೆ ಮೀಸಲಿಟ್ಟು ನಾವು ವೇದಿಕೆ ಮುಂಭಾಗದಲ್ಲಿ ಕೂರಲು ನಿರ್ಧರಿಸಿದ್ದೇವೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಜ.15):  ‘ಬೆಂಗಳೂರು ಅರಮನೆ ಮೈದಾನದಲ್ಲಿ ಜ.16ರಂದು ನಡೆಯಲಿರುವ ‘ನಾ ನಾಯಕಿ’ ಸಮಾವೇಶ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರಿಗೆ ಸೀಮಿತವಾಗಿದ್ದು, ಪುರುಷ ಕಾರ್ಯಕರ್ತರಿಗೆ ಅವಕಾಶವಿಲ್ಲ. ಪುರುಷ ಕಾರ್ಯಕರ್ತರು ಬಂದು ಸಮಯ ವ್ಯರ್ಥ ಮಾಡಿಕೊಳ್ಳಬೇಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟಸೂಚನೆ ನೀಡಿದ್ದಾರೆ. 

ಅಲ್ಲದೆ, ನಾ ನಾಯಕಿ ಸಮಾವೇಶದಲ್ಲಿ ತಮ್ಮನ್ನೂ ಸೇರಿದಂತೆ ಪುರುಷ ನಾಯಕರೂ ವೇದಿಕೆಯ ಮೇಲೆ ಕೂರುವುದಿಲ್ಲ. ವೇದಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಮಹಿಳೆಯರಿಗೆ ಮೀಸಲಿಟ್ಟು ನಾವು ವೇದಿಕೆ ಮುಂಭಾಗದಲ್ಲಿ ಕೂರಲು ನಿರ್ಧರಿಸಿದ್ದೇವೆ ಎಂದೂ ಹೇಳಿದರು. 

ಈ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚು ಟಿಕೆಟ್‌ ನೀಡಲು ಮನವಿ ಇಡ್ತೇವೆ: ಉಮಾಶ್ರೀ

ನಾ ನಾಯಕಿ ಸಮಾವೇಶಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಗಮಿಸಲಿದ್ದಾರೆ. ಮಹಿಳಾ ನಾಯಕಿಯರು, ಕಾರ್ಯಕರ್ತರು ಅವರ ಬೇಡಿಕೆಗಳನ್ನು ಮಂಡಿಸಲಿದ್ದಾರೆ. ಹೀಗಾಗಿ ಇದು ಮಹಿಳೆಯರಿಗೆ ಮೀಸಲಾದ ಕಾರ್ಯಕ್ರಮ. ಪುರುಷರು ಬಂದರೆ ಅವಕಾಶ ಸಿಗದೆ ಸಮಯ ವ್ಯರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದರು.