ಬೆಂಗಳೂರು, (ಸೆ.05): ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌ಗೂ ಇಂದು (ಶನಿವಾರ) ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಶಿವರಾಮ್ ಹೆಬ್ಬಾರ್‌ ಅವರ ಹೆಂಡತಿಗೂ ಕೊರೋನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೂ ಕೊರೋನಾ: ಆಸ್ಪತ್ರೆಗೆ ದಾಖಲು

ಈ ಬಗ್ಗೆ ಸ್ವತಃ ಸಚಿವ ಶಿವರಾಮ್ ಹೆಬ್ಬಾರ್ ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದು,  ಇಂದು ನಾನು ಹಾಗೂ ನನ್ನ ಧರ್ಮಪತ್ನಿ  ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು,ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಸಹ ಪಾಸಿಟಿವ್ ಎಂದು ಬಂದಿದೆ. ಯಾವುದೇ ಹಿಚ್ಚಿನ ರೋಗಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ನಲ್ಲಿದ್ದುಚಿಕಿತ್ಸೆ ತೆಗೆದುಕೊಳ್ಳಲಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ,ಹಾರೈಕೆಯಿಂದ ಶೀಘ್ರ ಗುಣಮುಖವಾಗಿ ವಿಶ್ವಾಸವಿದೆ ಎಂದಿದ್ದಾರೆ.