ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ್ ಲಿಂಬಾವಳಿ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ತಮ್ಮ ರಾಜ್ಯಾಧ್ಯಕ್ಷರಿಗೆ ರವಾನಿಸಿದ್ದಾರೆ.

ಬೆಂಗಳೂರು, (ಫೆ. 23): ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಇಂದು (ಮಂಗಳವಾರ) ಅರವಿಂದ ಲಿಂಬಾವಳಿ ರಾಜೀನಾಮೆ ಸಲ್ಲಿಸಿದರು.

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಪಕ್ಷದ 'ಒಬ್ಬ ವ್ಯಕ್ತಿ, ಒಂದು ಹುದ್ದೆ ಎಂಬ ನಿಯಮದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವ ಕಾರಣ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಲಿಂಬಾವಳಿ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು ಇತ್ತೀಚೆಗಷ್ಟೇ ಸಿಟಿ ರವಿ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗುತ್ತು. ಆ ವೇಳೆ ಸಿಟಿ ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.