ಬೆಂಗಳೂರು, (ಅ.21): ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾದ ಹಿನ್ನೆಲೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಿಎಂ ಬಿ.ಎಸ್​ ಯಡಿಯೂರಪ್ಪ  ಸ್ಥಗಿತಗೊಳಿಸಿದ್ದಾರೆ. 

ಈ ಹಿನ್ನೆಲೆ ತೆರೆಮರೆಯಲ್ಲಿ ಬಿಜೆಪಿಯಲ್ಲಿ ಅಸಮಾಧಾನದ ಕಿಡಿ ಹೊತ್ತಿದ್ದು,  ಸಂಪುಟ ಸೇರ್ಪಡೆಯಾಗಬೇಕೆಂದು ಕನಸು ಕಾಣುತ್ತಿರುವ ಆಕಾಂಕ್ಷಿಗಳು ಯಡಿಯೂರಪ್ಪ ನಡೆಯಿಂದ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದರೆ, ಇಷ್ಟರಲ್ಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಬೇಕಿತ್ತು. ಅದ್ರೆ, ಆರ್​.ಆರ್​ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಉಪ-ಚುನಾವಣೆ ಎದುರಾದ ಹಿನ್ನೆಲೆ ಅದಕ್ಕೆ ಬ್ರೇಕ್ ಬಿದ್ದಿದೆ. ಕೊರೋನಾ, ಮಳೆ ಹಾನಿ ಮತ್ತು ಪ್ರವಾಹ ಪರಿಸ್ಥಿತಿ, ಸರ್ಕಾರ ಒಂದು ವರ್ಷ ಪೂರೈಕೆಯಾದ ಕಾರಣ ಸಂಪುಟ ವಿಸ್ತರಣೆ ಹಲವು ಬಾರಿ ಮುಂದೂಡಿಕೆಯಾಗಿತ್ತು. 

3 ವರ್ಷ ಬಿಎಸ್‌ವೈ ರಾಜ್ಯದ ಸಿಎಂ, ಬದಲಾವಣೆ ಮಾತೇ ಇಲ್ಲ: ಗುಡುಗಿದ ಬಿಜೆಪಿ ಸಾರಥಿ! 

ಇನ್ನೇನು ಎಲ್ಲವೂ ಸರಿ ಹೋಯಿತು ಎಂದುಕೊಳ್ಳುವಷ್ಟರಲ್ಲಿ, ಉಪ-ಚುನಾವಣೆ ಘೋಷಣೆಯಾಗಿದೆ. ಈಗ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಅನುಮತಿ ಕಷ್ಟ. ಈ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸದ್ಯಕ್ಕೆ ಅಸಾಧ್ಯ.

ಅಸಮಾಧಾನ ಸ್ಫೋಟ
ಹೌದು...ಸಂಪುಟ ವಿಸ್ತರಣೆ/ಪುನರಚನೆ ಆಗದಿದ್ದಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳು ಅಸಮಾಧಾನೊಂಡಿದ್ದಾರೆ ಎನ್ನಲಾಗಿದೆ.  ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ  ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಲಿಂಬಾವಳಿ, ಎಸ್.ಎ.ರಾಮದಾಸ್, ಸುನಿಲ್‌ಕುಮಾರ್ ಸೇರಿದಂತೆ ಹಲವರಲ್ಲಿ ನಿರಾಸೆ ಮೂಡಿದ್ದು, ಅಸಮಾಧಾನ ಸ್ಫೋಟಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಅಲ್ಲದೇ .ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ವಿರುದ್ಧ ಬಹಿಂರಗವಾಗಿಯೇ ಹೇಳಿಕೆ ಕೊಟ್ಟಿದ್ದು, ಇದೇ ಕಾರಣ ಇರಬಹುದು ಎನ್ನಲಾಗುತ್ತಿದೆ.

ಬೈ ಎಲೆಕ್ಷನ್ ಬಳಿಕ ಪ್ರಕ್ರಿಯೆ ಶುರು
ಹೌದು...ಆರ್.ಆರ್.ನಗರ ಹಾಗೂ ಶಿರಾ ಉಪಚುನಾವಣೆ ನವೆಂಬರ್‌ನಲ್ಲಿ ಮುಗಿಯಲಿದ್ದು, ಫಲಿತಾಂಶ ಬಂದ ಬಳಿಕ ಸಂಪುಟ ವಿಸ್ತರಣೆಯೋ ಅಥವಾ ಸಂಪುಟ ಪುನರಚನೆ ಪ್ರಕ್ರಿಯೆ ಶುರುವಾಗಲಿದೆ. ಒಂದು ವೇಳೆ ಮುನಿರತ್ನ ಅವರು ಗೆದ್ದರೇ ಅವರಿಗೂ ಸಹ ಸಚಿವ ಸ್ಥಾನ ಕೊಡಬೇಕಾಗುತ್ತದೆ. ಯಾಕಂದ್ರೆ ಮೊದಲೇ ಮಾತುಕತೆ ಮಾಡಿ ಅವರು ಕಾಂಗ್ರೆಸ್ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಎಸ್‌ವೈ ಕೊಟ್ಟ ಮಾತು ಉಳಿಸಿಕೊಳ್ಳಬೇಕಿದೆ.