Asianet Suvarna News Asianet Suvarna News

Karnataka Politics: ಸಿದ್ದು ವಿರುದ್ಧ ಅಚ್ಚರಿಯ ಅಭ್ಯರ್ಥಿ ಕಣಕ್ಕೆ: ಸಚಿವ ಶ್ರೀರಾಮುಲು

 B Sriramulu on Siddaramaiah: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಅವರಿಗೆ ಸೋಲು ಖಚಿತ ಎಂದು ಭವಿಷ್ಯ ನುಡಿದಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ಅವರ ವಿರುದ್ಧ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಅವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದೆ ಎಂದು ತಿಳಿಸಿದ್ದಾರೆ. 

Minister B Sriramulu Reacts On Congress Leader Siddarmaiah kolar visit gvd
Author
First Published Nov 14, 2022, 10:10 AM IST

ಗಂಗಾವತಿ (ನ.14): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಅವರಿಗೆ ಸೋಲು ಖಚಿತ ಎಂದು ಭವಿಷ್ಯ ನುಡಿದಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ಅವರ ವಿರುದ್ಧ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಅವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ, ಸಿದ್ದರಾಮಯ್ಯ ಅವರನ್ನು ಬಾದಾಮಿಯ ಜನ ಯಾವ ಕಾರಣಕ್ಕೂ ಕ್ಷಮಿಸಲ್ಲ. 

ಚುನಾಯಿತರಾದ ನಂತರ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿಲ್ಲ. ಚುನಾವಣಾ ಗಿಮಿಕ್‌ಗಾಗಿ ಅವರು ಕೋಲಾರ ಯಾತ್ರೆ ಮಾಡುತ್ತಿದ್ದಾರೆ. ಅವರಿಗೆ ಅಲ್ಲಿಯೂ ಭವಿಷ್ಯ ಇಲ್ಲ. ರಾಜಕಿಯ ಪುನರ್ಜನ್ಮ ನೀಡಿದ ಬಾದಾಮಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ. ಇದರಿಂದಾಗಿ ಸಿದ್ದರಾಮಯ್ಯನವರ ನಾಟಕ ಎಲ್ಲರಿಗೂ ಗೊತ್ತಾಗಿದೆ. ಸಿದ್ದರಾಮಯ್ಯ ಅವರು ವರುಣಾದಲ್ಲಿ ಸ್ಪರ್ಧಿಸಿದರೂ ಈ ಬಾರಿ ಗೆಲ್ಲುವುದು ಕಷ್ಟ ಎಂದರು.

ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಪರದೇಶಿ ಗಿರಾಕಿ: ಸಚಿವ ಶ್ರೀರಾಮುಲು

ಸಿದ್ದುಗೆ ಚುನಾವಣೆ ಸ್ಪರ್ಧಿಸಲು ಭಯ: ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಸಿದ್ದರಾಮಯ್ಯಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಹೆದರಿಕೆ ಇದೆ. ಅಂದರೆ ಅದು ಅವರ ವ್ಯಕ್ತಿತ್ವ ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಲೇವಡಿ ಮಾಡಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿಯಲ್ಲಿ ಜನರು ಸಿದ್ದರಾಮಯ್ಯರನ್ನು ತಿರಸ್ಕರಿಸಿದರು. ಬಾದಾಮಿಯಲ್ಲಿ ಕನಿಷ್ಠ ಮತಗಳ ಅಂತರದಿಂದ ಗೆದ್ದಿದ್ದರು. ಗೆದ್ದೂ ಸೋತಂತೆಯೇ ಆಗಿದ್ದರು. ಈಗ ಕೋಲಾರದಲ್ಲಿ ಅಥವಾ ಬಾದಾಮಿಯಲ್ಲಿ ನಿಲ್ಲಲಿ. ಅದು ಅವರಿಗೆ ಬಿಟ್ಟಿದ್ದು. ಕೋಲಾರದಲ್ಲಿ ಪಕ್ಷದ ಸ್ಥಿತಿ ಏನಿದೆ ಎಂಬುದನ್ನು ಅವರು ಮೊದಲು ಅರ್ಥಮಾಡಿಕೊಳ್ಳಬೇಕು. 

ದೇಶದಲ್ಲಿ ಕಾಂಗ್ರೆಸ್‌ ಅಧೋಗತಿಗೆ ತಲುಪಿದೆ. ಕರ್ನಾಟಕದಲ್ಲೂ ಕಾಂಗ್ರೆಸ್‌ ಅಸ್ತಿತ್ವ ಕಳೆದುಕೊಳ್ಳಲಿದೆ. ಏನೇ ಆದರೂ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೊದಲು ಕಾಂಗ್ರೆಸ್‌ನಲ್ಲಿ ಎರಡು ಪವರ್‌ ಸೆಂಟರ್‌ ಇದ್ದವು. ಅದರೆ ಈಗ ಸಂಖ್ಯೆ ಮೂರಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಲ್ಲಿಕಾರ್ಜುನ ಖರ್ಗೆ ಮನೆಗೆ ಹೋಗುತ್ತಿದ್ದಾರೆ. ಇದು ಮತ್ತೊಂದು ಪವರ್‌ ಸೆಂಟರ್‌ನ ಮಹತ್ವವಾಗಿದೆ. ಈ ಪವರ್‌ ಸೆಂಟರ್‌ಗಳಿಂದಲೇ ಕಾಂಗ್ರೆಸ್‌ ಇನ್ನಷ್ಟುಅಧೋಗತಿಗೆ ಹೋಗಲಿದೆ. ಚುನಾವಣೆ ಬರುವ ಮುನ್ನ ಸಿದ್ದರಾಮಯ್ಯ ಎಲ್ಲಿ ಕ್ಷೇತ್ರವನ್ನು ಆಯ್ಕೆ ಮಾಡುತ್ತಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಅಹಿಂದ ನಾಯಕನ ಅರ್ಹತೆ ಸಿದ್ದರಾಮಯ್ಯಗೆ ಇಲ್ಲ: ಸಚಿವ ಶ್ರೀರಾಮುಲು

ಕ್ಷೇತ್ರ ಬದಲಿಸಿಕೊಂಡೇ ಸಿದು ರಾಜಕಾರಣ: ತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕ್ಷೇತ್ರ ಅದಲು ಬದಲು ಮಾಡಿಕೊಂಡೇ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕುಟುಕಿದರು. ರಾಜಕಾರಣದಲ್ಲಿ ಒಂದು ಕ್ಷೇತ್ರ ಗಟ್ಟಿಯಾಗಿ ಹಿಡಿದುಕೊಂಡು ಜನರ ಮನಸ್ಸು ಗೆದ್ದು ನಾಯಕರಾಗಬೇಕು. ಆದರೆ ಸಿದ್ದರಾಮಯ್ಯ ಅನೇಕ ಕ್ಷೇತ್ರವನ್ನು ಬದಲಾವಣೆ ಮಾಡಿದ್ದಾರೆ. ಇದೀಗ ಅದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಹಿರಿಯ ನಾಯಕರು, ನಾನು ಅವರ ಬಗ್ಗೆ ಮಾತನಾಡಲ್ಲ. ಅವರು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ ಮೇಲೆ ಮಾತನಾಡೋಣ ಎಂದರು.

Follow Us:
Download App:
  • android
  • ios