Belagavi Riot: ಗಲಭೆ ಮಾಡಿದವರು ಕಾಂಗ್ರೆಸ್ ಚೇಲಾಗಳು: ಸಚಿವ ರಾಮುಲು
* ಮಹಾನ್ ನಾಯಕರಿಗೆ ಅಗೌರವ ತೋರಿದವರಿಗೆ ಅರೆಸ್ಟ್ ಮಾಡುವ ತೀರ್ಮಾನ
* ಅಧಿವೇಶನ ನಡೆಯಲು ಕಾಂಗ್ರೆಸ್ ನಾಯಕರು ಬಿಡುತ್ತಿಲ್ಲ
* ರಾಜಕಾರಣದಲ್ಲಿ ಜೋರಾದ ಕಾಂಗ್ರೆಸ್ ನಾಟಕ
ಗದಗ(ಡಿ.20): ಮಹಾರಾಷ್ಟ್ರದಲ್ಲಿ(Maharashtra) ಗಲಾಟೆ ಮಾಡಿದವರೆಲ್ಲ ಕಾಂಗ್ರೆಸ್ಸಿಗರಾಗಿದ್ದಾರೆ(Congress). ಗಲಭೆ ಮಾಡಿದವರಲ್ಲಿ ಕೆಲವು ಕಿಡಿಗೇಡಿಗಳು ಕಾಂಗ್ರೆಸ್ ಪಕ್ಷದ ಚೇಲಾಗಳಿದ್ದಾರೆ. ಎಂಇಎಸ್(MES) ಸೇರಿ ಯಾವುದೇ ಪಕ್ಷದಲ್ಲಿದ್ರೂ ಅಂತಹ ಕಿಡಿಗೇಡಿಗಳನ್ನ ಅರೆಸ್ಟ್ ಮಾಡುವ ಕೆಲಸ ಆಗುತ್ತದೆ ಅಂತ ಸಚಿವ ಬಿ ಶ್ರೀರಾಮುಲು(B Sriramulu) ಹೇಳಿದ್ದಾರೆ.
ಇಂದು(ಸೋಮವಾರ) ನಗರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಕನ್ನಡಪರ ಸಂಘಟನೆಗಳ(Kannada Organizations) ಕಾರ್ಯಕರ್ತರ ಮೇಲೆ ದಾಳಿಗಳಾಗಿವೆ(Attack). ನನಗೆ ಗೊತ್ತಿರುವಂತೆ ಇದರಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ. ಕರ್ನಾಟಕದಲ್ಲಿ(Karnataka) ಇರುವ ಕೆಲವು ಪುಂಡರು ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕಾಂಗ್ರೆಸ್, ಎಂಇಎಸ್ ಯಾರೇ ಇದ್ದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.
Belagavi Violence ಮರಾಠಿ ಗೂಂಡಾಗಿರಿ ವಿರೋಧಿಸಿ ವ್ಯಾಪಕ ಪ್ರತಿಭಟನೆ, MES ನಿಷೇಧಕ್ಕೆ ಆಗ್ರಹ!
ಶಿವಾಜಿ(Chhatrapati Shivaji Maharaj), ರಾಯಣ್ಣ(Sangolli Rayanna) ನಮಗಾಗಿ ಪ್ರಾಣತ್ಯಾಗ ಮಾಡಿದವರು. ಮಹಾನ್ ನಾಯಕರಿಗೆ ಅಗೌರವ ತೋರಿದವರಿಗೆ ಅರೆಸ್ಟ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಯಾವುದೇ ವ್ಯಕ್ತಿ, ಸಂಘಟನೆ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳತ್ತೇವೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ(Uddhav Thackeray) ದುಷ್ಕೃತ್ಯಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ. ಟ್ವೀಟ್(Tweet) ಮಾಡುವ ಮೂಲಕ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಅಂತ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಅಧಿವೇಶನ(Belagavi Assembly Session) ನಡೆಯುವ ಸಂದರ್ಭದಲ್ಲಿ ಇಂಥ ಘಟನೆಗಳು ನಡೆಯುತ್ತಿವೆ. ಗಲಾಟೆ(Riot) ಮಾಡುವ ಸಂಪ್ರದಾಯವನ್ನ ಎಂಇಎಸ್ ಮೈಗೂಡಿಸಿಕೊಂಡಿದೆ. ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಸದನ ನಡೆಯುತ್ತಿದ್ದು ಗಲಾಟೆ ಸಂಪ್ರದಾಯವನ್ನ ಕನ್ನಡಿಗರು(Kannadigas) ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಅಂತ ಹೇಳಿದ್ದಾರೆ.
ಕಾಂಗ್ರೆಸ್ ರ‍್ಯಾಲಿ ವಿಚಾರದ ಬಗ್ಗೆ ಮಾತನಾಡಿದ ಸಚಿವ ಶ್ರೀರಾಮುಲು ಅವರು, ಅಧಿವೇಶನ ನಡೆಯಲು ಕಾಂಗ್ರೆಸ್ ನಾಯಕರು ಬಿಡುತ್ತಿಲ್ಲ. ರಾಜಕಾರಣದಲ್ಲಿ ಕಾಂಗ್ರೆಸ್ ನಾಟಕ ಜೋರಾಗಿದೆ. ಅಧಿವೇಶನ ನಡೆಸಲು ಕಾಂಗ್ರೆಸ್ ನಾಯಕರು ಅನುವು ಮಾಡಿಕೊಡಬೇಕು. ಉತ್ತರ ಕರ್ನಾಕದ(North Karnataka) ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಜನರಿಗೆ ತೋರಿಸುವ ಸಲುವಾಗಿ ಟ್ರ್ಯಾಕ್ಟರ್, ಎತ್ತಿನ ಬಂಡಿ ತರುವ ನಾಟಕ ಮಾಡುತ್ತಿದ್ದೀರಿ ಅಂತ ಕೈ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ಎಂಇಎಸ್ ಬ್ಯಾನ್‌ಗೆ(MES Ban) ಕನ್ನಡ ಪರ ಸಂಘಟನೆಗಳ ಆಗ್ರಹ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ರಾಮುಲು ಅವರು, ಎಂಇಎಸ್ ಬ್ಯಾನ್ ಮಾಡುವ ವಿಚಾರಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ಬ್ಯಾನ್ ಮಾಡೋದ್ರಿಂದ ಅನುಕೂಲ ಆಗುತ್ತದೆ. ಸಾಕಷ್ಟು ವರದಿಯನ್ನೂ ಕೇಂದ್ರಕ್ಕೆ ನೀಡಿದ್ದೇವೆ ಅಂತ ತಿಳಿಸಿದ್ದಾರೆ.
ಸಿಎಂ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರವನ್ನ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಇಂತಹ ಯಾವುದೇ ಬದಲಾವಣೆ ಇಲ್ಲ. ಕೇವಲ ಊಹಾಪೋಹವಷ್ಟೇ, ಯಾರೋ ಮಾತಾಡ್ತಾರೆ ಅಂತ ಅದಕ್ಕೆ ಉತ್ತರ ನೀಡುವ ಅಗತ್ಯತೆ ಇಲ್ಲ. ನಮ್ಮ ರಾಷ್ಟ್ರೀಯ ನಾಯಕರಾದ ಅಮಿತ್ ಶಾ(Amit Shah) ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ(Basavaraj Bommai) ನೇತೃತ್ವದಲ್ಲಿ 2023ರ ಚುನಾವಣೆಯಲ್ಲಿ ನಡೆಯಲಿದೆ ಎಂದಿದ್ದಾರೆ. ಬಿಜೆಪಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ ಅಂತ ಹೇಳಿದ್ದಾರೆ.
Belagavi Violence: ಸರ್ಕಾರಕ್ಕೆ 2 ದಿನ ಟೈಮ್ ಕೊಟ್ಟ ವಾಟಾಳ್ ನಾಗರಾಜ್
ಉದ್ಧವ್ ದೇವ್ರಲ್ಲ, ಡಿಕೆ ಶಿವಕುಮಾರ್ ಸಾಚ ಅಲ್ಲ, ಗುಡುಗಿದ ಈಶ್ವರಪ್ಪ
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ (Sangolli Rayanna Statue) ಭಗ್ನ ಹಾಗೂ ನಂತರದ ರಾಜಕೀಯ ಪ್ರೇರಿತ ಹೇಳಿಕೆಗಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಕಿಡಿಕಾರಿದ್ದರು.
ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಏನು ದೇವರಲ್ಲ, ಕಾಂಗ್ರೆಸ್‌ನವರು ಈಗ ಉತ್ತರ ಕೊಡಬೇಕು. ಶಿವಸೇನೆ ಹಾಗೂ ಕಾಂಗ್ರೆಸಿನ ಜಂಟಿ ಸರ್ಕಾರ ಮಹಾರಾಷ್ಟ್ರದಲ್ಲಿದೆ ಎಂದು ಹೇಳಿದ್ದರು. ಡಿಕೆ ಶಿವಕುಮಾರ್ ಬಗ್ಗೆ ಏನು ಹೇಳಬೇಕೋ ನನಗೆ ಗೊತ್ತಾಗ್ತಿಲ್ಲ. ಡಿಕೆ ಶಿವಕುಮಾರ್ ಸಾಚ ಅಲ್ಲ. ಸಿಟಿ ರವಿ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯದರ್ಶಿ. ಅವರ ಮೇಲೆ ಒಂದೇ ಒಂದು ಪ್ರಕರಣ ಇಲ್ಲ. ಅವರೇನು ಡಿಕೆ ಶಿವಕುಮಾರ್ ರಂತೆ ತಿಹಾರ್ ಜೈಲಿಗೆ ಹೋಗಿ ಬಂದವರಲ್ಲ. ಅಂಥವರ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡುವ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದ್ದರು.