ಸರ್ಕಾರದಿಂದ ಹೊರಬರುವ ಎಚ್ಚರಿಕೆ ಕೊಟ್ಟ ಶ್ರೀರಾಮುಲು: ಕಾರಣ..?

ಆರೋಗ್ಯ ಸಚಿವ ಶ್ರೀರಾಮುಲು ಅವರು ಬಿ.ಎಸ್.ಯಡಿಯೂರಪ್ಪ ಅವರ ಮುಂದೆ ಪ್ರಮುಖ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಈ ಬೇಡಿಕೆ ಈಡೇರದಿದ್ದರೆ ರಾಜಕೀಯ ನಿವೃತ್ತಿ ಹೇಳಿವುದಾಗಿ ತಮ್ಮ ಬೆಂಬಲಿಗರಿಗೆ ಹೇಳಿದ್ದ ರಾಮುಲು ಇಂದು ಸರ್ಕಾರದಿಂದ ಹೊರಬರುವ ಎಚ್ಚರಿಕೆ ನೀಡಿದ್ದಾರೆ. ಏನದು ಬೇಡಿಕೆ..? ಮುಂದೆ ಓದಿ

Minister B Sriramulu Warns BSY Govt Over reservation For ST community

ದಾವಣಗೆರೆ, [ನ.03]: ಇನ್ನೆರಡು ತಿಂಗಳಲ್ಲಿ ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5 ಮೀಸಲಾತಿ ನೀಡಿ. ಮೀಸಲಾತಿ ಸಿಗಲ್ಲ ಅಂದ್ರೆ ನನಗೆ ಏನೂ ಬೇಡ ಎಂದು  ಸಚಿವ ಶ್ರೀರಾಮಲು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಮಠದಲ್ಲಿ ಇಂದು [ಭಾನುವಾರ] ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲಿ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡಬೇಕು. ಇನ್ನೆರಡು ತಿಂಗಳಲ್ಲಿ ಮೀಸಲಾತಿ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಸಿಎಂ ಮುಂದೆ ಹೊಸ ಬೇಡಿಕೆ: ಈಡೇರದಿದ್ದರೇ ರಾಜಕೀಯ ನಿವೃತ್ತಿ ಎಂದ ಶ್ರೀರಾಮುಲು

ವಾಲ್ಮೀಕಿ ಸಮಾಜದ ಸ್ವಾಮೀಜಿಗಳು ಬೆಂಗಳೂರಿನವರೆಗೂ ಪಾದಯಾತ್ರೆ ‌ಮಾಡಿದ್ದಾರೆ. ಹಿಂದಿನ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ಮಾಡಿದೆ. ಬಿಜೆಪಿ ಸರ್ಕಾರ ಬಂದ ಬಳಿಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಗೆ ಒಪ್ಪಿಗೆ ನೀಡಿದೆ. ಜೊತೆಗೆ ಎರಡು ತಿಂಗಳಲ್ಲಿ ವರದಿ ಬರಲಿದೆ. ವರದಿ ಬಂದ ತಕ್ಷಣಕ್ಕೆ ರಾಜ್ಯ ಸರ್ಕಾರ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಬೇಕು ಎಂದರು.

ಮೊನ್ನೆ ಅಕ್ಟೋಬರ್ 13ರಂದು ಚಿತ್ರದುರ್ಗದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರೀರಾಮುಲು, ಎಸ್​ಟಿ ಸಮುದಾಯಕ್ಕೆ ಶೇ 7.5 ರಷ್ಟು ಮೀಸಲಾತಿ ಕೊಡಿಸುವ ಜವಾಬ್ದಾರಿಯನ್ನು ನನಗೆ ಬಿಟ್ಟುಬಿಡಿ, ಕೊಟ್ಟ ಮಾತು ಉಳಿಸಿಕೊಳ್ಳದಿದ್ದಾರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.

Latest Videos
Follow Us:
Download App:
  • android
  • ios