ದೀಪಾವಳಿ ಹಬ್ಬದ ಶುಭಾಶಯ ಕೋರವ ನೆಪದಲ್ಲಿ ಸಿಎಂ ಮುಂದೆ ಮಹತ್ವದ ಬೇಡಿಕೆ ಇಟ್ಟ ಕೌರವ..!
ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ದೀಪಾವಳಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ಮಹತ್ವದ ಬೇಡಿಕೆ ಇಟ್ಟಿದ್ದಾರೆ.
ಬೆಂಗಳೂರು, (ನ.16): ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಯ ಜೊತೆಗೆ ಸಮುದಾಯಕ್ಕೆ ಹಿಂದುಳಿದ ವರ್ಗದ ಮೀಸಲಾತಿ ಒದಗಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಆಗ್ರಹಿಸಿದ್ದಾರೆ.
ಈ ಸಂಬಂಧ ಇಂದು (ಸೋಮವಾರ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಬಿ.ಸಿ.ಪಾಟೀಲ್, ದೀಪಾವಳಿ ಹಬ್ಬದ ಶುಭಾಶಯ ಕೋರಿದರು.
ಸರ್ಕಾರದ ಮುಂದೆ ಮಾಜಿ ಸಚಿವ ಎಂಬಿ ಪಾಟೀಲ್ ಇಟ್ಟ ಮಹಾರಾಷ್ಟ್ರ ಮಾದರಿ ಬೇಡಿಕೆ
ಬಳಿಕ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನಗೆ ಸರ್ಕಾರ ಆದೇಶ ಮಾಡಿದೆ. ಅದೇ ರೀತಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಹಿಂದುಳಿದ ಬಡವರು ಹೆಚ್ಚಿದ್ದು ವೀರಶೈವ ಲಿಂಗಾಯತರ ಏಳಿಗೆಗೆ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಜೊತೆಗೆ ಹಿಂದುಳಿದ ವರ್ಗದ ಪ್ರವರ್ಗ-2ಎ ಸ್ಥಾನಮಾನ ನೀಡುವಂತೆಯೂ ಯಡಿಯೂರಪ್ಪಗೆ ಮನವಿ ಮಾಡಿದರು.
ಬಸವಕಲ್ಯಾಣ ಚುನಾವಣೆ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ 50 ಕೋಟಿ ರೂಪಾಯಿಗಳನ್ನು ಪ್ರಾಧಿಕಾರಕ್ಕೆ ಒದಗಿಸುವಂತೆ ಸಿಎಂ ಯಡಿಯೂರಪ್ಪ ಅವರು ಆದೇಶ ಮಾಡಿದ್ದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಮರಾಠ ಪ್ರಾಧಿಕಾರ ರಚನೆಗೆ ಆದೇಶ ಮಾಡಿದ ಬೆನ್ನಲ್ಲೇ ಲಿಂಗಾಯತ ಸಮುದಾಯದ ಮುಖಂಡರು ತಮ್ಮ ಸಮುದಾಯಕ್ಕೆ ಮೀಸಲಾತಿ ಒದಗಿಸುವಂತೆ ಒತ್ತಾಯಿಸುತ್ತಿದ್ದಾರೆ.