Asianet Suvarna News Asianet Suvarna News

ರೈತರ ಆತ್ಮಹತ್ಯೆ ಬಗ್ಗೆ ಮತ್ತೊಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಸಚಿವ

ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Minister BC Patil Once again Gives controversy Statement on on farmers suicide rbj
Author
Bengaluru, First Published Jan 19, 2021, 3:04 PM IST

ಮೈಸೂರು, (ಜ.19): ಇತ್ತೀಚೆಗಷ್ಟೇ ರೈತರ ಆತ್ಮಹತ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್, ಇದೀಗ ಹೊಸ ವಿವಾದ ಸೃಷ್ಟಿಸಿಕೊಂಡಿದ್ದಾರೆ..

"

ಇಂದು (ಮಂಗಳವಾರ) ಮೈಸೂರಿನಲ್ಲಿ ಮಾತನಾಡಿರುವ ಬಿ.ಸಿ.ಪಾಟೀಲ್,  ರೈತರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳಲು ಸರ್ಕಾರದ ನೀತಿಗಳು ಕಾರಣವಲ್ಲ. ಬದಲಾಗಿ ರೈತರ ವೀಕ್ ಮೈಂಡ್ ಕಾರಣ ಎಂದು ಹೇಳುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ರೈತರ ಮನಸ್ಸು ದುರ್ಬಲವಾದಾಗ ಆತ್ಮಹತ್ಯೆಯಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ತಮ್ಮ ವೀಕ್ ಮೈಂಡ್ ನಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದರು.

'ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು'  ಪಾಟೀಲರ ಬಿಸಿ ಹೇಳಿಕೆ!

ಕೇವಲ ರೈತರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ. ಉದ್ಯಮಿಗಳು, ಅಧಿಕಾರಿಗಳು, ಇತರೇ ಕ್ಷೇತ್ರದವರು ಸೇರಿ ಎಲ್ಲಾ ವಲಯದ ಜನರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಸರ್ಕಾರದ ನೀತಿ ಕಾರಣವಲ್ಲ ಆತ್ಮಹತ್ಯೆಗೆ ಕಾರಣವನ್ನು ತಜ್ಞರು ಹುಡುಕಬೇಕಾಗಿದೆ. ತಜ್ಞರ ವರದಿಯಂತೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದರು.

ಈ ಹಿಂದೆಯೂ ಸಚಿವ ಬಿ.ಸಿ. ಪಾಟೀಲ್ ಅವರು ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ರೈತರ ಆಕ್ರೋಶಕ್ಕೆ ಕಾರಣರಾಗಿದ್ದರು. ಸಮಸ್ಯೆಗಳಲ್ಲಿ ಸಿಲುಕಿರುವ ರೈತರು ಶ್ರಮವಹಿಸಿ ಸಮಸ್ಯೆಗಳ ಸುಳಿಯಿಂದ ಹೊರಬರುವಂತಾಗಬೇಕು. ಅದು ಬಿಟ್ಟು ಹೇಡಿಗಳಂತೆ ಸಾವಿಗೆ ಶರಣಾಗಬಾರದು. ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಾತ ಹೇಡಿ ಎಂದು ಹೇಳಿದ್ದರು.

Follow Us:
Download App:
  • android
  • ios