ನಿರುದ್ಯೋಗಿ ಕಾಂಗ್ರೆಸ್ ನಾಯಕರಿಂದ ತೋರಿಕೆಗಾಗಿ ಬಂದ್: ಸಚಿವ ಬಿ.ಸಿ.ಪಾಟೀಲ್
ಕಾಂಗ್ರೆಸ್ ಪಕ್ಷದ ನಾಯಕರುಗಳು ನಿರುದ್ಯೋಗಿಗಳಾಗಿದ್ದು, ಅವರಿಗೆ ಮಾಡಲು ಬೇರೆ ಕೆಲಸವೇ ಇಲ್ಲ. ಆದುದರಿಂದ ತೋರಿಕೆಗಾಗಿ ಮಾಚ್‌ರ್ 9 ರಂದು ರಾಜ್ಯ ಬಂದ್‌ಗೆ ಕರೆ ಕೊಟ್ಟಿದ್ದಾರೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ.
ಚಿತ್ರದುರ್ಗ (ಮಾ.07): ಕಾಂಗ್ರೆಸ್ ಪಕ್ಷದ ನಾಯಕರುಗಳು ನಿರುದ್ಯೋಗಿಗಳಾಗಿದ್ದು, ಅವರಿಗೆ ಮಾಡಲು ಬೇರೆ ಕೆಲಸವೇ ಇಲ್ಲ. ಆದುದರಿಂದ ತೋರಿಕೆಗಾಗಿ ಮಾಚ್‌ರ್ 9 ರಂದು ರಾಜ್ಯ ಬಂದ್‌ಗೆ ಕರೆ ಕೊಟ್ಟಿದ್ದಾರೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರುಗಳಿಗೆ ತಾವು ಜೀವಂತವಾಗಿದ್ದೇವೆಂಬುದನ್ನು ತೋರಿಸಿಕೊಳ್ಳಬೇಕಾಗಿದೆ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲೆಕ್ಷನ್ ಮಾಡುತ್ತಿದ್ದಾರೆಂಬ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾತಿಗೆ ಹರಿಹಾಯ್ದ ಬಿ.ಸಿ. ಪಾಟೀಲ್, ಇದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿಸಿದಂತೆ ಇದೆ.
ಕಲೆಕ್ಷನ್ ಮಾಡುವುದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶೂರರು. ಹಾಗಾಗಿ ಅವರಿಗೆ ಇಂತಹ ವಿಚಾರಗಳಲ್ಲಿಯೇ ಆಸಕ್ತಿ ಹೆಚ್ಚು ಎಂದರು. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ 17 ಜನರಲ್ಲಿ ಯಾರೂ ಮರಳಿ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಸಚಿವ ನಾರಾಯಣಗೌಡರು ಕಾಂಗ್ರೆಸ್ ಸೇರಬಹುದು ಎಂದು ಹೇಳಲಾಗುತ್ತಿದೆ. ಇನ್ನೂ ಖಾತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರಲ್ಲದೆ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಟ್ಟು ಹಲವರು ಸದ್ಯದಲ್ಲಿಯೇ ಬಿಜೆಪಿಗೆ ಬರಲಿದ್ದಾರೆ ಎಂದರು.
ದೇಶದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ತಬ್ಬಲಿ: ಬಿ.ಎಸ್.ಯಡಿಯೂರಪ್ಪ
ಬಿಎಸ್‌ವೈ ಬೆಂಬಲಿಗರಿಗೆ ಟಿಕೆಟ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಭೀಷ್ಮ ಇದ್ದಂತೆ. ಅವರನ್ನು ಯಾರೂ ಕಡೆಗಣಿಸಲಾಗದು. ಅವರ ಬೆಂಬಲಿಗರಿಗೆ ಟಿಕೆಟ್ ತಪ್ಪುವ ವಿಚಾರ ಸತ್ಯಕ್ಕೆ ದೂರವಾದುದು ಎಂದು ಪಾಟೀಲ್ ಹೇಳಿದರು.
ಮಾಡಾಳು ರಕ್ಷಣೆ ಇಲ್ಲ: ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ರಕ್ಷಣೆ ಮಾಡುವ ಉದ್ದೇಶ ಪಕ್ಷಕ್ಕೆ ಇದ್ದಿದ್ದರೆ ಮಾಡಬಹುದಿತ್ತು. ಅಂತಹ ಉದ್ದೇಶ ಬಿಜೆಪಿಗೆ ಇಲ್ಲ. ಈಗಾಗಲೇ ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧ ತನಿಖೆ ಮಾಡಲು ಲೋಕಾಯುಕ್ತರಿಗೆ ಅಧಿಕಾರ ನೀಡಲಾಗಿದೆ. ಜೊತೆಗೆ ಮಾಡಾಳು ಅವರಿಗೆ ಲುಕ್‌ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು.
ಚಪ್ಪಾಳೆಗಾಗಿ ಖರ್ಗೆ ಭಾಷಣ: ವಿಪಕ್ಷ ನಾಯಕ ಸಿದ್ದರಾಮಯ್ಯ ಸಮಾವೇಶಕ್ಕೆ ತಲಾ ಐದು ನೂರು ರು.ಕೊಟ್ಟು ಜನರನ್ನು ಕರೆತನ್ನಿ ಎಂದಿರುವ ವಿಚಾರ ಹೊರಗೆ ಬಂದಿದೆ, ಇಂತಹ ಜನರಿಂದ ಚಪ್ಪಾಳೆ ತಟ್ಟಿಸಿಕೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡುತ್ತಾರೆ. ಇಂತಹ ನಾಯಕರು ಭಷ್ಟಾಚಾರದ ಛತ್ರಿಯ ಕೆಳಗೆ ಪ್ರಧಾನಿ ಮೋದಿ ನಿಂತಿದ್ದಾರೆಂದು ಹೇಳುತ್ತಿದ್ದಾರೆ ಎಂದು ತಿವಿದರು.
ಬೆಳೆ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ: ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ಹಣ, ಬೆಳೆವಿಮೆ ಹಾಗೂ ಬೆಳೆ ನಷ್ಟಪರಿಹಾರ, ಕೃಷಿ ಸಮ್ಮಾನ್ ಸೇರಿದಂತೆ ವಿವಿಧ ಯೋಜನೆಯ ಮೊತ್ತವನ್ನು ಬ್ಯಾಂಕುಗಳು ಯಾವುದೇ ಕಾರಣಕ್ಕೂ ರೈತರ ಇತರೆ ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕೆಲವಡೆ ಸಾಮಾಜಿಕ ಭದ್ರತಾ ಯೋಜನೆಯ ವೃದ್ಧಾಪ್ಯ ವೇತನ, ವಿಧವಾ ವೇತನ ಮತ್ತಿತರ ಪಿಂಚಣಿ ಹಣವನ್ನು ಬ್ಯಾಂಕುಗಳು ಆಯಾ ಫಲಾನುಭವಿಗಳ ಹಳೆಯ ಸಾಲಕ್ಕೆ ಕಡಿತಗೊಳಿಸಿರುವುದು ಗಮನಕ್ಕೆ ಬಂದಿದೆ.
ಬಿಜೆಪಿ, ಕಾಂಗ್ರೆಸ್ ಅಣ್ಣ ತಮ್ಮ ಇದ್ದಂತೆ: ಸಿ.ಎಂ.ಇಬ್ರಾಹಿಂ
ಹಾಗಾಗಿ ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ಹಣ ಸೇರಿದಂತೆ ರೈತರ ಪರಿಹಾರಧನದ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು. ಅದೇ ರೀತಿ ಕೈಗಾರಿಕೆ ಇಲಾಖೆ ಹಾಗೂ ವಿವಿಧ ಇಲಾಖೆಗಳಿಂದ ನಾನಾ ಯೋಜನೆಗಳಡಿ ಸಾಲ ಮಂಜೂರಾಗಿರುವ ಫಲಾನುಭವಿಗಳಿಗೆ ಬ್ಯಾಂಕುಗಳು ಸಾಲ ನೀಡದೆ ಅಲೆದಾಡಿಸುತ್ತಿವೆ. ಕೂಡಲೆ ಸಂಬಂಧಪಟ್ಟಫಲಾನುಭವಿಗಳಿಗೆ ಬ್ಯಾಂಕ್ ಸಾಲ ವಿತರಣೆಯಾಗಬೇಕು. ಈ ಕುರಿತು ಬ್ಯಾಂಕುಗಳಿಗೆ ಸೂಕ್ತ ನಿರ್ದೇಶನ ನೀಡಿ, ಮೂರು ದಿನದೊಳಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸಚಿವರು ಸೂಚನೆ ನೀಡಿದರು.