ಬೆಂಗಳೂರು, (ಡಿ.21): ಈ ಸಮಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಮಾಡುವ ಅವಶ್ಯಕತೆ ಬಿಜೆಪಿಗಿಲ್ಲ. ಇಲ್ಲಿ ಜೆಡಿಎಸ್ ಏನೋ ಗಿಮಿಕ್ ಮಾಡುತ್ತಿದೆ. ಅದನ್ನೆಲ್ಲಾ ನನ್ನ ಕಡೆಯಿಂದ ಹೇಳಿಸಬೇಡಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ವಿಧಾನಸೌಧದಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಯಾವ ಚುನಾವಣೆಗಳೂ ಇಲ್ಲ. ಗ್ರಾಮ ಪಂಚಾಯತಿ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡೆಯಲ್ಲ, ಹೀಗಾಗಿ ಈ ಸಮಯದಲ್ಲಿ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಮಾಡುವ ಅವಶ್ಯಕತೆ ಬಿಜೆಪಿಗಿಲ್ಲ ಎಂದರು.

ಗಪ್ ಚುಪ್ ಇರುವಂತೆ ಬಿಜೆಪಿ ನಾಯಕರಿಗೆ ಸಿಎಂ ಬಿಎಸ್‌ವೈ ಖಡಕ್ ಸೂಚನೆ..!

ಬಿಜೆಪಿ ಜೊತೆ ಜೆಡಿಎಸ್ ವಿಲೀನ ಎನ್ನುವ ಸುದ್ದಿ ರಾಜ್ಯ ರಾಜಕಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟಿದ್ದು, ಯಾವುದೇ ವಿಲೀನ ಇಲ್ಲ, ಇದು ಸುಳ್ಳು ಎಂದು ಹೇಳಿಕೆ ಕೊಟ್ಟಿದ್ದಾರೆ.

ಇನ್ನು ಈ ವಿಲೀನ ಬಗ್ಗೆ ಯಾರು ಮಾಧ್ಯಮಗಳಿಗೆ ಹೇಳಿಕೆ ಕೊಡಬಾರದು ಎಂದು ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ನಾಯಕರುಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಸಿ. ಪಾಟೀಲ್  ನನ್ನ ಕಡೆಯಿಂದ ಹೇಳಿಸಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ ಮಾಡಿ ಹೋದರು.