Asianet Suvarna News Asianet Suvarna News

'ರಾಮಮಂದಿರ ಶಿಲಾನ್ಯಾಸ ಸಹಿಸದೇ ಬೆಂಗಳೂರಲ್ಲಿ ಗಲಭೆ ಸೃಷ್ಟಿ'

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಬಿಸಿ ಪಾಟೀಲ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

minister bc patil reacts on Bengaluru dj halli Riot
Author
Bengaluru, First Published Aug 16, 2020, 2:54 PM IST

ಹಾವೇರಿ, (ಆ.16): ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿ.ಜೆ.ಹಳ್ಳಿ,‌ಕೆ.ಜಿ.ಹಳ್ಳಿಯಲ್ಲಿ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಹಿರೇಕೆರೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಸಿ ಪಾಟೀಲ್,ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ ಎಂದು ಆರೋಪಿಸಿದರು.

ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..!

ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆಯೋ ಅವರು ನಿಜವಾಗಿಯೂ ಅಮಾಯಕರಲ್ಲ.ರಾಜಕೀಯ ಪಿತೂರಿ ಕಾರಣಕ್ಕಾಗಿಯೇ ದುಷ್ಕರ್ಮಿಗಳು ಕಾಂಗ್ರೆಸ್ ಶಾಸಕರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ ಎಂದರು.

ದಲಿತ ಶಾಸಕರ ನಿವಾಸಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರೂ ಕೂಡ ಕಾಂಗ್ರೆಸ್‌ ನಾಯಕರು ಅವರದ್ದೇ ಪಕ್ಷದ ಶಾಸಕರನ್ನು ಸಮರ್ಥಿಸಿಕೊಳ್ಳಲು ಆಗುತ್ತಿಲ್ಲ. ದಲಿತ ಶಾಸಕನಿಗೆ ಕಾಂಗ್ರೆಸ್ ಪಕ್ಷದಲ್ಲಿಯೇ ರಕ್ಷಣೆಯಿಲ್ಲ.ಕಲ್ಲು ಹೊಡೆಯುವವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಪೊಲೀಸರಿಗೆ ಕಲ್ಲುಹೊಡೆದವರ ನಿವಾಸಕ್ಕೆ ಭೇಟಿ ನೀಡುತ್ತಾರೆ. ಆದರೆ ಕಲ್ಲೇಟಿನಿಂದ ಗಾಯಗೊಂಡಿರುವ ಪೊಲೀಸರನ್ನು ಮಾಜಿ ಗೃಹಮಂತ್ರಿಗಳಾಗಿರುವ ಕೆ.ಜೆ.ಜಾರ್ಜ್ ಅವರು ಏಕೆ ಭೇಟಿ ನೀಡಲಿಲ್ಲ ಪ್ರಶ್ನಿಸಿದರು.

Follow Us:
Download App:
  • android
  • ios