ಹುಬ್ಬಳ್ಳಿ, (ಜ.07): ಸಿದ್ಧರಾಮಯ್ಯ ಯಾವಾಗ ಜ್ಯೋತಿಷಿ ಆದ್ರೋ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ. ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ, ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಹೋದೋರು ಮರಳಿ ಬರ್ತಾರೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅದು ಡಿಕೆಶಿ ಅವರ ಭ್ರಮೆ, ನಾವು ಯಾರೂ ಮರಳಿ ಕಾಂಗ್ರೆಸ್​ಗೆ ಹೋಗಲ್ಲ. ತತ್ವ ಸಿದ್ಧಾಂತಗಳನ್ನ ಒಪ್ಪಿ ನಾವೆಲ್ಲ ಬಿಜೆಪಿ ಸೇರಿದ್ದೇವೆ. ಜೀವನ ಪರ್ಯಂತ ಬಿಜೆಪಿಯಲ್ಲೇ ಇರುತ್ತೇವೆ ಎಂದು ತಿರುಗೇಟು ನೀಡಿದರು.

ಇವರಿಬ್ಬರಿಗೆ ಸಚಿವ ಸ್ಥಾನ ನೀಡಲು ಒಪ್ಪಿಗೆ ಸಿಕ್ಕಿದೆ: ಹೆಸರು ಬಹಿರಂಗಪಡಿಸಿದ ಸಚಿವ

ಸಚಿವ ಸಂಪುಟ ವಿಸ್ತರಣೆಗೆ ಬಗ್ಗೆ ಪ್ರತಿಕ್ರಿಯಿಸಿದ ಬೈರತಿ ಬಸವರಾಜ್,  ಸಂಪುಟ ವಿಸ್ತರಣೆ ಯಾವಾಗ ಬೇಕಾದರೂ ಆಗಬಹುದು. ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು. ಸಚಿವ ಸಂಪುಟ ವಿಸ್ತರಣೆ ಮಾಡುವುದು ಸಿಎಂ ಪರಮಾಧಿಕಾರ. ನಮ್ಮ ಜೊತೆಗೆ ಬಂದವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ. ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂಬ ಭರವಸೆ ಇದೆ ಎಂದು ತಿಳಿಸಿದರು.