ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಮಾನ ಮರ್ಯಾದೆ ಇಲ್ಲದವರು ಮಾತ್ರ ಲೋಕಾಯುಕ್ತ ರಿಪೋರ್ಟ್ ಟೀಕಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಾಗ್ದಾಳಿ ನಡೆಸಿದರು. 

ಮೈಸೂರು (ಫೆ.23): ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಮಾನ ಮರ್ಯಾದೆ ಇಲ್ಲದವರು ಮಾತ್ರ ಲೋಕಾಯುಕ್ತ ರಿಪೋರ್ಟ್ ಟೀಕಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಾಗ್ದಾಳಿ ನಡೆಸಿದರು. ಲೋಕಾಯುಕ್ತ ‘ಬಿ’ ರಿಪೋರ್ಟ್ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಆಕ್ಷೇಪ ಕುರಿತು ಪ್ರತಿಕ್ರಿಯಿಸಿ, ನಾವು ಏನೂ ತಪ್ಪು ಮಾಡಿಲ್ಲ, ಬನ್ನಿ ಚಾಮುಂಡೇಶ್ವರಿ ಬಳಿ ಆಣೆ ಮಾಡಿ ಅಂತಾ ಕರೆದಿದ್ದೆ. ಯಾರೂ ಆಣೆ ಮಾಡಲು ಬರಲಿಲ್ಲ. ಈಗ ಲೋಕಾಯುಕ್ತ ರಿಪೋರ್ಟ್ ಬಂದಿದೆ. ರಾಜ್ಯದ ಜನರಿಗೆ ಈಗ ಸತ್ಯ ಗೊತ್ತಾಗಿದೆ ಎಂದರು.

50:50 ಪರಿಹಾರ ನೀಡುವ ಕಾನೂನು ಮುಡಾದಲ್ಲಿ ಇದೆ. ಅದರ ಅನ್ವಯ ಪರಿಹಾರ ನೀಡಲಾಗಿದೆ. ಆ ಕಾನೂನು ಇಲ್ಲದೇ ಪರಿಹಾರ ಕೊಡುವುದು ಹೇಗೆ?. ಬಿಜೆಪಿಯವರ ಕಾಲದಲ್ಲೇ ಪರಿಹಾರ ಹೆಚ್ಚು ನೀಡಿರುವುದು. ಪಾರ್ವತಮ್ಮ ಅವರಿಗೂ ಬೊಮ್ಮಾಯಿ ಸಿಎಂ ಆಗಿದ್ದಾಗ ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದರು.

ಮುಡಾದ ಪ್ರಮುಖ ಫೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಶಾಸಕ ಶ್ರೀವತ್ಸ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿ, ಮುಡಾ ಫೈಲ್‌ಗಳನ್ನು ನಾನು ತೆಗೆದುಕೊಂಡು ಹೋಗಲು ಅವು ಕಡ್ಲೆಪುರಿಯಲ್ಲ. ಫೈಲ್ ಮಿಸ್ಸಿಂಗ್ ಅಂತಾ ಯಾವ ವರದಿಯಲ್ಲಿ ಇದೆ?. ಫೈಲ್ ಎತ್ತಿಕೊಂಡು ಹೋಗುವುದು ಅಷ್ಟೊಂದು ಸುಲಭನಾ?. 141 ಫೈಲ್ ತೆಗೆದುಕೊಂಡು ಹೋಗಿದ್ದಾರೆ ಎಂದು ಬಿಜೆಪಿಯವರು ಆರೋಪ ಮಾಡಿದ್ದಾರೆ. ಇವರಿಗೆ ಆ ನಂಬರ್ ನೀಡಿದವರು ಯಾರು?. ಬಹುಶಃ ಈ ಆರೋಪ ಮಾಡಿದವರೇ ಫೈಲ್ ತೆಗೆದುಕೊಂಡು ಹೋಗಿರಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಸಿಗುವ ವಿಶ್ವಾಸ: ಸಂಸದ ಡಾ.ಮಂಜುನಾಥ್

ಸಿದ್ದರಾಮಯ್ಯ ಯಾವತ್ತೂ ಅಕ್ರಮ ಮಾಡಿಲ್ಲ, ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳಿಕೊಂಡು ಮೈಸೂರು, ಮಂಗಳೂರು ಯಾತ್ರೆ ‌ಮಾಡಿದರು. ಪಾರ್ವತಮ್ಮನವರಿಗೆ ಭೂಮಿ ಹೋಗಿತ್ತು, ಪರಿಹಾರ ಬಂದಿದೆ ಅಷ್ಟೇ. ಲೋಕಾಯುಕ್ತದವರು ವಾಸ್ತವ ಸ್ಥಿತಿಯನ್ನು ತನಿಖೆ ಮಾಡಿ ವರದಿ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.