ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದೇನಿದ್ರು ಏಕ್ ಮಾರ್ ದೋ ತುಕ್ಡ ಕ್ರಮ: ಸಿ.ಟಿ.ರವಿ
ದೆಹಲಿ ಭೇಟಿ ಫಲಪ್ರದವಾಗಿದೆ| ನಾನು ಅಂದುಕೊಂಡ ಎಲ್ಲ ಕೆಲಸ ಈಡೇರಿದೆ| ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸದಾನಂದ ಗೌಡರು ಸಹಕಾರ ಕೊಟ್ಟರು| ನನ್ನ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕೆಲಸ ಯಶಸ್ವಿ|
ಬೆಂಗಳೂರು(ಆ.20): ಒಂದು ಘಟನೆಯ ಮೇಲೆ ಎಲ್ಲವನ್ನು ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರಗಳನ್ನ ಕಲೆ ಹಾಕುವ ಕೆಲಸ ನಡೆಯುತ್ತಿದೆ. ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ.
"
SDPI ಸಂಘಟನೆ ನಿಷೇಧ ವಿಚಾರದ ಬಗ್ಗೆ ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾಳೆ ದಿನ ಕೋರ್ಟ್‌ನಲ್ಲೂ ಕೂಡಾ ಉತ್ತರ ಹೇಳಬೇಕಾದ ಸಂದರ್ಭ ಬರಬಹುದು ಹಾಗಾಗಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಕೆಲವರು ರಾಜಕೀಯ ಕಾರಣಗಳಿಗಾಗಿ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಅವರಿಗೆ ಅಕ್ಕಿ ಮೇಲೆ ಆಸೆ, ಅಕ್ಕನ ಮಕ್ಕಳ ಮೇಲೂ ಪ್ರೀತಿ ಅನ್ನೋ ಹಾಗೆ ಮಾತನಾಡುತ್ತಿದ್ದಾರೆ. ಓಟ್ ಬ್ಯಾಂಕ್ ರಾಜಕೀಯ ಇನ್ನಾದರೂ ಕಾಂಗ್ರೆಸ್‌ನವರು ಬಿಡಲಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸಿಎಂ ಅಳಿಯ ಸೇರಿ ಐವರು ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ
ನಾವು ಯಾರನ್ನು ಬಿಡುವ ಪ್ರಶ್ನೆ ಇಲ್ಲ. ನಮ್ಮದೇನಿದ್ರು ಏಕ್ ಮಾರ್ ದೋ ತುಕ್ಡ ಕ್ರಮವಾಗಿದೆ. ಯಾವುದೇ ಸಂಘಟನೆ ತಪ್ಪು ಮಾಡಿದ್ರು ನಾವು ಅವರನ್ನ ಬಿಡುವುದಿಲ್ಲ. ಆಸ್ತಿ ನಷ್ಟವನ್ನು ಅವ್ರಿಂದಲೇ ತುಂಬಿಸುತ್ತೇವೆ ಎಂದು ತಿಳಿಸಿದ್ದಾರೆ.
ದೆಹಲಿ ಭೇಟಿ ಫಲಪ್ರದವಾಗಿದೆ. ನಾನು ಅಂದುಕೊಂಡ ಎಲ್ಲ ಕೆಲಸ ಈಡೇರಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸದಾನಂದ ಗೌಡರು ಸಹಕಾರ ಕೊಟ್ಟರು. ನನ್ನ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕೆಲಸ ಯಶಸ್ವಿಯಾಗಿದೆ. ಮೈಸೂರಿನಲ್ಲಿ ಸ್ವಾಯತ್ತ ಕೇಂದ್ರ ಮಾಡಲು HRD ಮಿನಿಸ್ಟರ್ ರಮೇಶ್ ಪೋಖ್ರಿಯಾಲ್ ಅವರು ಭರವಸೆ ನೀಡಿದ್ದಾರೆ. ಖೇಲೋ ಇಂಡಿಯಾದಲ್ಲಿ ಕರ್ನಾಟಕ ಹೆಚ್ಚು ಸಹಕಾರ ನೀಡಲು ಕೇಂದ್ರದ ಸಚಿವರಿಗೆ ಮನವಿ ಮಾಡಿದ್ದೇವೆ. ಪಾರಂಪರಿಕ ವಿವಿ ನೀಡುವ ನಿಟ್ಟಿನಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ಕಾಫಿ ಬೆಳೆಗಾರರು, ಅಡಿಗೆ ಬೆಳೆಗಾರರ ಅನೇಕ ಬೇಡಿಕೆಗಳನ್ನ ಇಟ್ಟಿದ್ದೇವೆ. ಸಕಾರಾತ್ಮಕವಾಗಿ ಕೇಂದ್ರದ ಸಚಿವರು ಸ್ಪಂದಿಸಿದ್ದಾರೆ. ದೆಹಲಿಯಲ್ಲಿ ಸಂತೋಷ್ ಜೀ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನ ಸೌಜನ್ಯವಾಗಿ ಭೇಟಿಯಾಗಿದ್ದೇನೆ. ಖಾತೆ ಬದಲಾವಣೆ ಆಗಬೇಕು ಅಂತ ನಾನು ಬೇಡಿಕೆ ಇಟ್ಟಿಲ್ಲ. ಬೇರೆ ಖಾತೆ ಕೇಳಿದ್ದೇನೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಸಿಎಂ ಯಾರಿಗೆ ಯಾವ ಖಾತೆ ಕೊಡಬೇಕು ಅಂತ ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
"