*   ಒಬ್ಬ ಮಂತ್ರಿಯಾಗಿರುವ ಅಶ್ವತ್ಥ ನಾರಾಯಣ ಈ ರೀತಿಯ ಮಾತುಗಳನ್ನು ಆಡುವುದು ಎಷ್ಟು ಸರಿ? *   ಬಿಜೆಪಿಯೊಳಗೆ ಗೂಂಡಾಗಳಿದ್ದಾರೆ, ಬಿಜೆಪಿಯವರಿಗೆ ಮಾನ, ಮರ್ಯಾದೆ ಇಲ್ಲ*   ಇದೊಂದು ಜಂಗಲ್‌ ರಾಜ್ಯದ ರೀತಿಯಲ್ಲಿ ಆಗಿದೆ 

ಬೆಂಗಳೂರು(ಜ.05): ಗಂಡಸ್ತನ ತೋರ್ಸೋ, ಹೋಗ್ರೋ, ಬನ್ರೋ ಇದು ಒಬ್ಬ ಉಪ ಮುಖ್ಯಮಂತ್ರಿ ಆಗಿದ್ದವರು, ಹಾಲಿ ಮಂತ್ರಿ ಆಗಿರುವವರು ಆಡುವ ಮಾತುಗಳಾ ಇವು. ಇಂತಹ ಮಾತುಗಳನ್ನು ಆಡಿರುವ ಸಚಿವ ಡಾ. ಸಿ.ಎನ್‌.ಅಶ್ವತ್ಥ ನಾರಾಯಣ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ(Ramalinga Reddy) ಆಗ್ರಹಿಸಿದ್ದಾರೆ.

Add Asianetnews Kannada as a Preferred SourcegooglePreferred

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು(BJP) ಹೋರಾಟ ಮಾಡಲಿ ಬೇಡ ಎನ್ನಲ್ಲ. ನಾವೂ ಪ್ರತಿಭಟನೆ ಮಾಡುತ್ತೇವೆ. ಒಬ್ಬ ಮಂತ್ರಿಯಾಗಿರುವ ಅಶ್ವತ್ಥ ನಾರಾಯಣ ಅವರು ಈ ರೀತಿಯ ಮಾತುಗಳನ್ನು ಆಡುವುದು ಎಷ್ಟು ಸರಿ? ಬಿಜೆಪಿಯೊಳಗೆ ಗೂಂಡಾಗಳಿದ್ದಾರೆ, ಬಿಜೆಪಿಯವರಿಗೆ ಮಾನ, ಮರ್ಯಾದೆ ಇಲ್ಲ. ಇದೊಂದು ಜಂಗಲ್‌ ರಾಜ್ಯದ ರೀತಿಯಲ್ಲಿ ಆಗಿದೆ. ಈಗಾಗಲೇ ಪರಿಷತ್‌ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಮುಂಬರುವ ಚುನಾವಣೆಯಲ್ಲೂ ಠೇವಣಿ ಕಳೆದುಕೊಳ್ಳುತ್ತಾರೆ ಎಂದರು.

Ramanagara Row: 'ನಾವು ಬಿಜೆಪಿ, ಆಡೋದೇ ಹಿಂಗೆ, ಗಂಡಸ್ತನವಿದ್ರೆ ಬನ್ನಿ ಅಂತಾರೆ'

ಹಾಗಾದರೆ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ಮೊದಲು ಏಕವಚನದಲ್ಲಿ ಮಾತನಾಡಿದ್ದ ಸಚಿವರು, ಹಾಗೆ ಮಾತನಾಡಿದರೆ ಯಾರಾದ್ರೂ ಸುಮ್ಮನೆ ಇರ್ತಾರಾ? ಪ್ರಚೋದನೆ ಮಾಡಿದಂತಾಗುವುದಿಲ್ಲವಾ. ನಾಚಿಕೆ ಆಗಬೇಕು ಅವರಿಗೆ ಎಂದರು.

ರಾಮನಗರ ಜಗಳ, ಡಿಕೆ ಸುರೇಶ್‌ಗೆ ಧನ್ಯವಾದ ಹೇಳಿದ ಸಿಟಿ ರವಿ

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ಹಾಗೂ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ(Dr CN Ashwath Narayan) ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.
ಇನ್ನುಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ(CT Ravi) ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸಂಸ್ಕೃತಿಯನ್ನು ರಾಜ್ಯದ ಜನರಿಗೆ ಪರಿಚಯಿಸಿದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರಿಗೆ ಧನ್ಯವಾದ ಎಂದು ಟಾಂಗ್ ಕೊಟ್ಟಿದ್ದಾರೆ.

ಮಂಗಳವಾರ ಸಿ. ಟಿ. ರವಿ ಈ ಕುರಿತು ಫೇಸ್ ಬುಕ್ ಪೋಸ್ಟ್‌ (Facebook Post) ಹಾಕಿದ್ದು,ಇಂದಿನ ಯುವಜನತೆ Indian National Congress ದ ಸಂಸ್ಕೃತಿ ಅಂದರೆ ಭ್ರಷ್ಟಾಚಾರ, ಹೊಣೆಗೇಡಿತನ ಅಂದುಕೊಂಡಿದ್ದರು, ರೌಡಿಸಂ ಕೂಡಾ ಅದರ ಅವಿಭಾಜ್ಯ ಅಂಗ ಅನ್ನುವುದು ಈಗ ಜಗಜ್ಜಾಹೀರಾಗಿದೆ ಎಂದು ಕಿಡಿಕಾರಿದ್ದಾರೆ.

ಮುಜುಗರವಿಲ್ಲದೆ ಈ "ರಿಪಬ್ಲಿಕ್ ಆಫ್ ರೌಡಿಸಂ" ಅನ್ನು ಸಮರ್ಥಿಸಿಕ್ಕೊಳ್ಳುವ ವ್ಯಕ್ತಿಗಳು ಕೂಡಾ ಕಾಂಗ್ರೆಸ್ ಕುಸಂಸ್ಕೃತಿಯ ಪಾಲುದಾರರು. ನಮ್ಮ ರಕ್ತವೇ ಬೇರೆ ಅನ್ನುವ ಕೆಪಿಸಿಸಿ ಅಧ್ಯಕ್ಷರೇ, ನಿಮ್ಮ ರಕ್ತದ ಮಾದರಿ ಪರೀಕ್ಷೆಗೆ ಸಮಯ ವ್ಯಯ ಮಾಡಬೇಡಿ. ನಿಮ್ಮ ರಕ್ತದ ಗುಣ ನಿನ್ನೆ ನಿಮ್ಮ ಸಹೋದರ ಸಾರ್ವಜನಿಕವಾಗಿ ತೋರಿಸಿದ್ದಾರೆ. ನಿನ್ನೆಯೇ ಅದರ ಪರೀಕ್ಷೆ ಮತ್ತು ಫಲಿತಾಂಶ ರಾಜ್ಯದ ಜನತೆಗೆ ಸಿಕ್ಕಿದೆ ಎಂದಿದ್ದಾರೆ. 

DK Suresh Vs Ashwath Narayan : ಸಿಎಂ ಮುಂದೆ ಸಂಸದ-ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು.?

ಸಾರ್ವಜನಿಕವಾಗಿ ತೋಳೇರಿಸಿ ಸಚಿವರ ಕಡೆ ನುಗ್ಗುವ ನಿಮ್ಮ ರಾಜಕೀಯ ದಾರ್ಷ್ಟ್ಯ ಪ್ರಜಾಪ್ರಭುತ್ವಕ್ಕೆ ಸೂಕ್ತವೇ? ಸುಳ್ಳರೆಲ್ಲ ಸೇರಿ ಕಟ್ಟುತ್ತಿರುವ ಸಾಮ್ರಾಜ್ಯದ ಒಂದು ಮುಖ ಸಿದ್ದರಾಮಯ್ಯನವರ ರೂಪದಲ್ಲಿ ಮತಾಂತರ ನಿಷೇಧ ಕಾಯಿದೆಯ ಸಂದರ್ಭದಲ್ಲಿ ಹೊರಬಿತ್ತು ಎಂದು ಟೀಕಿಸಿದ್ದಾರೆ.

ಸುಪ್ರೀಂಕೋರ್ಟ್ ಹಾಗೂ NGT ತೀರ್ಪಿಗಾಗಿ ಕಾಯುತ್ತಿರುವ ಮೇಕೆದಾಟು ಯೋಜನೆ ಪಾದಯಾತ್ರೆಯ ನಾಟಕದಲ್ಲಿ ಹೊರಬಿದ್ದದ್ದು ನಿಮ್ಮ ರಾಜಕೀಯ ಪಾದಯಾತ್ರೆ ಗಿಮಿಕ್ಕಿನ ಎರಡನೇ ಮುಖ. ನಿನ್ನೆ ನಿಮ್ಮ ತಮ್ಮನ ರೂಪದಲ್ಲಿ ಅನಾವಾರಣಗೊಂಡಿದ್ದು ನಿಮ್ಮ ಪಕ್ಷದ ರೌಡಿಸಂನ ಮೂರನೆಯ ಮುಖ. ಗೋಸುಂಬೆಗಿಂತ ಹೆಚ್ಚು ಬಾರಿ ಬಣ್ಣ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಅನ್ನು ನೋಡಿ ಗೋಸುಂಬೆಯೂ ಮುಖಮುಚ್ಚಿಕೊಂಡಿದೆಯಂತೆ ಎಂದು ಹೇಳಿದ್ದಾರೆ.

ಬಿಜೆಪಿ ಸರಣಿ ಟ್ವೀಟ್

ಬಿಜೆಪಿ ಸರ್ಕಾರದ ಅಭಿವೃದ್ಧಿಪರ ರಾಜಕಾರಣದ ಮುಂದೆ ಕನಕಪುರದ ರೌಡಿ ಸಹೋದರರ ಧಮ್ಕಿ ರಾಜಕಾರಣ ನಡೆಯುವುದಿಲ್ಲ. ಗೂಂಡಾ ವರ್ತನೆ ತೋರಿ ಪ್ರಜಾಪ್ರಭುತ್ವದಲ್ಲಿ ಬಹಳ ಕಾಲ ಉಳಿಯಲು ಸಾಧ್ಯವಿಲ್ಲ. ಕಾಂಗ್ರೆಸ್‌ ಪಕ್ಷವೀಗ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿಯಾಗಿದೆ. ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ' ಎಂದು ಬಿಜೆಪಿ ಟ್ವೀಟ್ ಮಾಡಿದೆ.