ಸಿಎಂ ವಿರುದ್ಧ ಮಾತನಾಡಿದರೆ ನಿಮ್ಮ ವ್ಯಕ್ತಿತ್ವಕ್ಕೆ ಹಾನಿ: ಹರಿಪ್ರಸಾದ್‌ಗೆ ಸಚಿವ ದಿನೇಶ್ ಸಲಹೆ
ಬಿ.ಕೆ.ಹರಿಪ್ರಸಾದ್ ಅವರಂತಹ ಪ್ರಬುದ್ಧ ರಾಜಕಾರಣಿಯೊಬ್ಬರು ಈ ರೀತಿ ಮಾತನಾಡಬಾರದು. ಸಾರ್ವಜನಿಕ ವೇದಿಕೆಯಲ್ಲಿ ಈ ತೆರನಾದ ಹೇಳಿಕ ಸಮಂಜಸವಲ್ಲ ಎಂದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರು (ಸೆ.12): ಬಿ.ಕೆ.ಹರಿಪ್ರಸಾದ್ ಅವರಂತಹ ಪ್ರಬುದ್ಧ ರಾಜಕಾರಣಿಯೊಬ್ಬರು ಈ ರೀತಿ ಮಾತನಾಡಬಾರದು. ಸಾರ್ವಜನಿಕ ವೇದಿಕೆಯಲ್ಲಿ ಈ ತೆರನಾದ ಹೇಳಿಕ ಸಮಂಜಸವಲ್ಲ ಎಂದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಕೇವಲವಾಗಿ ಮಾತನಾಡಿರುವ ಬಗ್ಗೆ ಮಂಗಳೂರಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಸಚಿವ ದಿನೇಶ್ ಗುಂಡೂರಾವ್ ಈ ಪ್ರತಿಕ್ರಿಯೆ ನೀಡಿದರು.
ಬಿ.ಕೆ.ಹರಿಪ್ರಸಾದ್ ಅವರು ಯಾಕೆ ಹಾಗೆ ಹೇಳಿದರು ಎಂದು ಗೊತ್ತಿಲ್ಲ, ಯಾವ ಉದ್ದೇಶದಿಂದ ಹೇಳಿದ್ದಾರೋ ಅದೂ ಗೊತ್ತಿಲ್ಲ. ಅವರು ಪ್ರಬುದ್ಧ ರಾಜಕಾರಣಿ ಹಾಗೂ ಹಿರಿಯರೂ ಆಗಿರುವುದರಿಂದ ಹಾಗೆಲ್ಲ ಹೇಳುವುದು ಸರಿಯಲ್ಲ. ಈಗ ಅವರಿಗೆ ಏನೂ ಹೇಳಿಕೆ ನೀಡದಂತೆ ಹೈಕಮಾಂಡ್ ತಿಳಿಸಿರುವ ಬಗ್ಗೆ ಮಾಹಿತಿ ಇದೆ. ಪಕ್ಷದಲ್ಲಿ ಸ್ಥಾನಮಾನ ಸಿಗುತ್ತದೆ, ಹೋಗುತ್ತದೆ. ಈ ರೀತಿ ಹೇಳಿಕೆಯಿಂದ ಪಕ್ಷದ ಬದಲು ಬಿ.ಕೆ. ಹರಿಪ್ರಸಾದ್ ಅವರ ವ್ಯಕ್ತಿತ್ವಕ್ಕೆ ಹಾನಿಯಾಗುತ್ತದೆ. ಕರಾವಳಿಯಲ್ಲಿ ಬಿಲ್ಲವ, ಈಡಿಗ ಸಮುದಾಯವನ್ನು ಕಾಂಗ್ರೆಸ್ ಯಾವತ್ತೂ ಕಡೆಗಣಿಸಿಲ್ಲ ಎಂದು ಸಚಿವ ಗುಂಡೂರಾವ್ ಸ್ಪಷ್ಟಪಡಿಸಿದರು.
ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಸಿದ ಪ್ರಕಾಶ್ ರಾಜ್!
ಗಣೇಶೋತ್ಸವ ವಿವಾದ, ವಿವಿ ತೀರ್ಮಾನ ಅಂತಿಮ: ಮಂಗಳೂರು ವಿಶ್ವವಿದ್ಯಾನಿಲಯ ಈಗಾಗಲೇ ‘ಬಿ’ ಗ್ರೇಡ್‌ಗೆ ಹೋಗಿದೆ. ಅದನ್ನು ‘ಎ’ ಗ್ರೇಡ್‌ಗೆ ತರಲು ಅಗತ್ಯ ಕ್ರಮಗಳನ್ನು ಮೊದಲು ಕೈಗೊಳ್ಳಬೇಕಾಗಿದೆ. ವಿವಿ ಒಂದು ಸ್ವಾಯತ್ತ ಸಂಸ್ಥೆ, ಗಣೇಶೋತ್ಸವದಂತಹ ವಿವಾದವನ್ನು ವಿವಿ ಆಡಳಿತ ಮಂಡಳಿ ಹಂತದಲ್ಲೇ ಅದನ್ನು ಬಗೆಹರಿಸಬೇಕೇ ಹೊರತು ಅದಕ್ಕೆ ಹೊರಗಿನವರ ಹಸ್ತಕ್ಷೇಪ ಸರಿಯಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗಣೇಶೋತ್ಸವ ನಡೆಸುವ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಹಾಗೂ ರಾಜ್ಯಪಾಲರು ತೀರ್ಮಾನಿಸುತ್ತಾರೆ.
ನಾನು ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿ ಅಲ್ಲ: ಎಂಟಿಬಿ ನಾಗರಾಜ್
ಆರ್‌ಎಸ್‌ಎಸ್ ಮುಖಂಡ ಡಾ. ಪ್ರಭಾಕರ ಭಟ್ ಅವರು ಏನು ಮಾತನಾಡುತ್ತಾರೋ ಅದು ನಮಗೆ ಸಂಬಂಧಿಸಿದ್ದಲ್ಲ. ವಿವಿ ಶೈಕ್ಷಣಿಕವಾಗಿ ಬೆಳೆಯಬೇಕು. ಅಭಿವೃದ್ಧಿಯಾಗಬೇಕು. ಅನಗತ್ಯ ವಿಚಾರಗಳ ಬಗ್ಗೆ ಹೊರಗಿನವರು ಯಾಕೆ ಮಾತನಾಡಬೇಕು ಎಂದು ಪ್ರಶ್ನಿಸಿದರು. ಕಳೆದ 40 ವರ್ಷಗಳಿಂದ ಅಲ್ಲಿ ಗಣೇಶೋತ್ಸವ ಆಚರಿಸುತ್ತಾರೆ ಎಂಬ ಮಾಹಿತಿ ಇದೆ. ಈಗ ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಹಬ್ಬ ಆಚರಣೆ ವಿವಿ ವಿವೇಚನೆಗೆ ಬಿಟ್ಟಿದ್ದು. ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮುಖ್ಯ ಚುನಾವಣೆ ಹತ್ತಿರ ಬಂದಾಗ ಈ ರೀತಿ ಅಶಾಂತಿ ಸೃಷ್ಟಿಸುವುದನ್ನು ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.