Asianet Suvarna News Asianet Suvarna News

ಬಿಜೆಪಿಗೂ ಜೆಡಿಎಸ್‌ ಮೈತ್ರಿ ಕಹಿ ಅನುಭವ ಆಗಲಿದೆ: ಸಚಿವ ದಿನೇಶ್‌ ಗುಂಡೂರಾವ್‌ ಲೇವಡಿ

ಜೆಡಿಎಸ್‌ ಜೊತೆ ಮೈತ್ರಿಕೊಂಡು ನಾವು ಕಹಿ ಅನುಭವ ನೋಡಿದ್ದೇವೆ. ಅದೇ ಅನುಭವ ಈಗ ಮೈತ್ರಿ ಮಾಡಿಕೊಂಡಿರುವವರು ಅನುಭವಿಸಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಟೀಕಿಸಿದರು.

Minister Dinesh Gundu Rao Reaction On BJP JDS Alliance gvd
Author
First Published Sep 28, 2023, 8:43 PM IST

ರಾಮನಗರ (ಸೆ.28): ಜೆಡಿಎಸ್‌ ಜೊತೆ ಮೈತ್ರಿಕೊಂಡು ನಾವು ಕಹಿ ಅನುಭವ ನೋಡಿದ್ದೇವೆ. ಅದೇ ಅನುಭವ ಈಗ ಮೈತ್ರಿ ಮಾಡಿಕೊಂಡಿರುವವರು ಅನುಭವಿಸಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಟೀಕಿಸಿದರು. ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ನಾವು ಹಿಂದೆ ಮೈತ್ರಿ ಮಾಡಿ ಅನುಭವಿಸಿದ್ದೆವೆ. ನಮಗೆ ಆ ಮೈತ್ರಿ ಬೇಡ ಅಂತ ದೂರ ಉಳಿದಿದ್ದೇವೆ ಎಂದರು. ಈ ಹಿಂದೆ ಮೈತ್ರಿಯ ಕಹಿ ಅನುಭವ ನೋಡಿದ್ದೇವೆ. ಈಗ ಮೈತ್ರಿ ಮಾಡಿಕೊಂಡಿರುವವರು ಅನುಭವಿಸಲಿದ್ದಾರೆ. ಈ ಮೈತ್ರಿ ಜೆಡಿಎಸ್ ಪಕ್ಷದ ಕೊನೆ ಹಂತ ಎನ್ನಬಹುದು ಎಂದು ಲೇವಡಿ ಮಾಡಿದರು.

ಕಾವೇರಿ ವಿವಾದ ಒಂದು ಸರ್ಕಾರಕ್ಕೆ ಸೀಮಿತವಾಗಿಲ್ಲ: ವಿರೋಧ ಮಾಡುವುದೇ ವಿರೋಧ ಪಕ್ಷದ ಕೆಲಸ. ಕಾವೇರಿ ಹೆಸರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ರಾಜಕೀಯ ಲಾಭಕ್ಕಾಗಿ ಈ ಕೆಲಸ‌ ಮಾಡುತ್ತಿರಬಹುದು. ಆದರೆ, ಇದರಲ್ಲಿ ಅವರಿಗೆ ರಾಜಕೀಯ ಪ್ರತಿಫಲ ದೊರೆಯುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಹೆಸರಿನಲ್ಲಿ ಬಿಜೆಪಿ - ಜೆಡಿಎಸ್‌ ಪಕ್ಷಗಳು ರಾಜಕೀಯ ಮಾಡಲು ಹೊರಟಿವೆ. ಜನರು ಬುದ್ದಿವಂತರಿದ್ದು, ಅವರಿಗೆ ಎಲ್ಲವೂ ತಿಳಿದಿದೆ. 

ದೇವೇಗೌಡರೇಕೆ ಕಾವೇರಿ ಸಮಸ್ಯೆ ಬಗೆಹರಿಸಲಿಲ್ಲ: ಶಾಸಕ ಬಾಲಕೃಷ್ಣ ಪ್ರಶ್ನೆ?

ಕಾವೇರಿ ವಿವಾದ ಒಂದು ಸರ್ಕಾರಕ್ಕೆ ಸೀಮಿತವಾಗಿಲ್ಲ. ಅದು ಈ ಹಿಂದಿನ ಸಿಎಂ ಆಗಿದ್ದವರಿಗೂ ತಿಳಿದಿದೆ. ಕಾವೇರಿ ಪ್ರಾಧಿಕಾರದ ರಚನೆ ಬಳಿಕ ಸುಪ್ರೀಂಕೋರ್ಟ್, ಉಭಯ ರಾಜ್ಯಗಳ ಸರ್ಕಾರ, ಕೇಂದ್ರ ಸರ್ಕಾರಗಳ ಪಾಲು ಅದರಲ್ಲಿದೆ. ಇದಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದೇವೆ. ಅಕ್ಟೊಂಬರ್ ವರೆಗೂ ಅಷ್ಟೆ ನಮ್ಮಲ್ಲಿ ಮಳೆಯಾಗಬಹುದು. ಹೀಗಾಗಿ ಕನಿಷ್ಠ ಮಟ್ಟದಲ್ಲಿ ನೀರು ಬಿಡುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಹೇಳಿದರು.

ಹೋರಾಟಗಾರರ ಪರವಾಗಿ ನಮ್ಮ ಸರ್ಕಾರವೂ ಇದೆ. ಜನಪರ ಹೋರಾಟ ನಡೆಯುವುದೇ ಇದರ ಮೂಲ ಉದ್ದೇಶವಾಗಿರಲಿ. ಯಾವ ಬಂದ್ ಅನ್ನು ಕಾನೂನಿನ ಪ್ರಕಾರ ಮಾಡುವಂತಿಲ್ಲ. ಜನಪರ ಹೋರಾಟವಾಗಿದ್ದರಿಂದ ಶಾಂತಿಯುತ ಹೋರಾಟ ನಡೆಯಬೇಕು. ತಮಿಳುನಾಡಿನ ಬೇಡಿಕೆಯನ್ನೂ ಸಹ ನಿರ್ವಹಣಾ ಪ್ರಾಧಿಕಾರ ಈಡೇರಿಸಿಲ್ಲ. ಪ್ರಾಧಿಕಾರ ಬೇಡಿಕೆಗಿಂತ ಕಡಿಮೆ ನೀರು ಬಿಡಲು ಹೇಳಿರುವುದು ನಮಗೂ ಒಳ್ಳೆಯದೇ ಆಗಿದೆ. ಹೀಗಾಗಿ ಈ ಸಂದರ್ಭದಲ್ಲಿ ಸೂಕ್ಷ್ಮವಾಗಿ ನಡೆಯಬೇಕಿದೆ ಎಂದು ಹೇಳಿದರು.

ನಮ್ಮ ಸಲಹೆ ಸ್ವೀಕರಿಸಿದ್ರೆ ನೀರು ಉಳಿಯುತ್ತಿತ್ತು ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್‌, ಇದರಲ್ಲಿ ಯಾವುದೇ ಗಾಂಭೀರ್ಯತೆ ಇಲ್ಲ. ಜನರ ಒಳಿತಿಗೆ ಅವರೇ ಸಲಹೆ ನೀಡಬಹುದಿತ್ತು. ಅದನ್ನು ನಾವೇ ಕೇಳಬೇಕಿತ್ತಾ? ಅವರು ಮಾಧ್ಯಮಕ್ಕೆ ಸುಮ್ಮನೆ ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಹೇಳಿಕೆಗೆ ಒದನ್ನು ಬಳಸಿಕೊಳ್ಳಬಾರದು. ಕಾವೇರಿ ವಿಚಾರದಲ್ಲಿ ಎಲ್ಲರದ್ದೂ ಪಾತ್ರ ಇದೆ ಎಂದು ಟಾಂಗ್‌ ನೀಡಿದರು.

ಡಿ.ಕೆ.ಸಹೋದರರ ದಬ್ಬಾಳಿಕೆಗೆ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸುತ್ತಾರೆ: ಎಚ್‌ಡಿಕೆ

ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶ ಮಾಡಬೇಕು. ನಮ್ಮ ಭೇಟಿಗೂ ಅವರು ಅವಕಾಶ ನೀಡಿಲ್ಲ. ದೆಹಲಿಗೆ ಹೋದ್ರೂ ಸಮಯ ನಿಗದಿ ಪಡಿಸುತ್ತಿಲ್ಲ. ನಮ್ಮ ರಾಜ್ಯದ ಸಂಸದರು ಏನು ಮಾಡುತ್ತಿಲ್ಲ. ಕೇವಲ ರಾಜಕೀಯ ಹೇಳಿಕೆ ಕೊಡುತ್ತಾ ಕೂತಿದ್ದಾರೆ ಎಂದು ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಶಾಸಕ ಇಕ್ಬಾಲ್‌ ಹುಸೇನ್‌, ಮಾಜಿ ಶಾಸಕ ಕೆ.ರಾಜು ಮತ್ತಿತರರು ಹಾಜರಿದ್ದರು.

Follow Us:
Download App:
  • android
  • ios