ನಳಿನ್ ಕುಮಾರ್ ಕಟೀಲ್ ಮನೆಗೆ ಮಾರಿ, ಪರರಿಗೆ ಉಪಕಾರಿ: ಸಚಿವ ದಿನೇಶ್ ಗುಂಡೂರಾವ್
ಕೇಂದ್ರ ಸರ್ಕಾರಕ್ಕೆ ಕರ್ನಾಟಕವೊಂದೇ ಮುಖ್ಯವಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ವಿರುದ್ಧ ರಾಜ್ಯ ಕಾಂಗ್ರೆಸ್ ಹಾಗೂ ಸಚಿವರು ಕಿಡಿಕಾರಿದ್ದು, ಚುನಾವಣೆ ಬಂದಾಗ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಮುಖ್ಯವಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು (ಜೂ.24): ಕೇಂದ್ರ ಸರ್ಕಾರಕ್ಕೆ ಕರ್ನಾಟಕವೊಂದೇ ಮುಖ್ಯವಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ರಾಜ್ಯ ಕಾಂಗ್ರೆಸ್ ಹಾಗೂ ಸಚಿವರು ಕಿಡಿಕಾರಿದ್ದು, ಚುನಾವಣೆ ಬಂದಾಗ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಮುಖ್ಯವಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಚುನಾವಣೆ ಬಂದಾಗ ಮೂರು ದಿನಕ್ಕೊಮ್ಮೆ ಓಡೋಡಿ ಬಂದು ಗಲ್ಲಿಗಳಲ್ಲಿ ಕೈ ಬೀಸಿದ್ದ ಮೋದಿ ಅವರಿಗೆ ಅಂದು ಕರ್ನಾಟಕ ಮುಖ್ಯವಾಗಿತ್ತೇ ಎಂದು ಪ್ರಶ್ನಿಸಿದೆ. ಸಂಸದನಾಗಿ ತನ್ನ ಜವಾಬ್ದಾರಿ ಮರೆತು ಇಂತಹ ಹೊಣೆಗೇಡಿ ಹೇಳಿಕೆ ನೀಡುತ್ತಿರುವ ಬಿಜೆಪಿಯವರನ್ನು ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲೂ ಉಚಿತವಾಗಿ ಟಿಕೆಟ್ ನೀಡಿ ಮನೆಗೆ ಕಳುಹಿಸುವುದು ನಿಶ್ಚಿತ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಮನೆಗೆ ಮಾರಿ, ಪರರಿಗೆ ಉಪಕಾರಿ: ನಳೀನ್‌ಕುಮಾರ್ ಕಟೀಲ್ ಅವರ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದು, ಕಟೀಲ್ ಅವರು ಮನೆಗೆ ಮಾರಿ, ಪರರಿಗೆ ಉಪಕಾರಿ ಇದ್ದಂತೆ. ನಿಮ್ಮ ಮನೆ ಮುರುಕುತನಕ್ಕೆ ಈಗಾಗಲೆ ಜನ ಪಾಠ ಕಲಿಸಿದ್ದಾರೆ. ಆದರೂ ನಿಮಗೆ ಬುದ್ಧಿ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೇ ಕೊಡಲಿ ಎಂಬ ಸ್ವಾರ್ಥ ನಮ್ಮಲ್ಲಿಲ್ಲ. ಗೋದಾಮುಗಳಲ್ಲಿ ಅಕ್ಕಿ ಕೊಳೆಯುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ. ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಹಲವು ಅನ್ಯಾಯ ಮಾಡಿದೆ. ಜಿಎಸ್‌ಟಿ ಬಾಕಿ, ಪರಿಹಾರ ನೀಡುವಲ್ಲಿ ಮೋಸ, ನೆರೆ ಪರಿಹಾರ, ಬರ ಪರಿಹಾರ ನೀಡುವಲ್ಲೂ ಮೋಸ, ಯೋಜನೆ ಅನುಷ್ಠಾನದಲ್ಲೂ ಮೋಸ ಮಾಡಿದೆ.
ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡಿ ನಾವು ಅಧಿಕಾರಕ್ಕೆ ಬಂದಿದ್ದೇವೆ: ಸಲೀಂ ಅಹಮ್ಮದ್
ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವನ್ನೇ ಬರೆಯಬಹುದು ಎಂದಿದ್ದಾರೆ. ಕರ್ನಾಟಕ ಮುಖ್ಯವಾಗಿರದಿದ್ದಕ್ಕಾಗಿಯೇ ನೆರೆ ಪರಿಹಾರ ಕೊಡಲಿಲ್ಲ, ಬರ ಪರಿಹಾರ ಕೊಡಲಿಲ್ಲ, ಕರ್ನಾಟಕದಲ್ಲಿನ ಯೋಜನೆಗಳನ್ನು ಕಿತ್ತುಕೊಳ್ಳಲಾಯಿತೇ? ಒಕ್ಕೂಟ ವ್ಯವಸ್ಥೆಯ ಗಂಧಗಾಳಿ ತಿಳಿಯದ, ಗೌರವಿಸದ ಬಿಜೆಪಿಯಿಂದ ಕರ್ನಾಟಕವೂ ಉದ್ಧಾರವಾಗಿಲ್ಲ, ದೇಶವೂ ಉದ್ಧಾರವಾಗಿಲ್ಲ. ರಾಜ್ಯಗಳೆಲ್ಲ ಸೇರಿಯೇ ದೇಶ ಆಗಿರುವುದು ಎಂಬ ಕನಿಷ್ಠ ಜ್ಞಾನವೂ ನಳೀನ್‌ಕುಮಾರ್ ಕಟೀಲ್ ಅವರಿಗೆ ಇಲ್ಲದಿರುವುದು ದುರಂತ.
ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟು ಸೂಚನೆ: ದ.ಕ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಸಾಮರಸ್ಯವನ್ನು ಕಾಪಾಡಲು ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ರಾತ್ರಿ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೇಳೆ ಈ ಸೂಚನೆ ನೀಡಿದ್ದಾರೆ. ಉಸ್ತುವಾರಿ ಸಚಿವ ಸ್ಥಾನದ ಕಾರ್ಯಪ್ರಭಾರ ವಹಿಸಿಕೊಂಡ ನಂತರ ನಾನು ಜಿಲ್ಲೆಯ ಹಲವಾರು ರಾಜಕೀಯ ಸಾಮಾಜಿಕ, ಶೈಕ್ಷಣಿಕ ಮತ್ತು ಇತರ ಕ್ಷೇತ್ರದ ನಾಯಕರುಗಳನ್ನು ಭೇಟಿ ಮಾಡಿದ ಮತ್ತು ಸಭೆಗಳನ್ನು ಏರ್ಪಡಿಸಿದ ಸಂದರ್ಭಗಳಲ್ಲಿ ಮುಖ್ಯವಾಗಿ ಜಿಲ್ಲೆಯಲ್ಲಿ ಮಾದಕ ದ್ರವ್ಯದ ಅಕ್ರಮ ಬಳಕ, ಅನೈತಿಕ ಪೊಲೀಸ್ ಗಿರಿ ಮತ್ತು ಗೂಂಡಾಗಿರಿಯು ಜಿಲ್ಲೆಯ ಶಾಂತಿ ಸುವ್ಯವಸ್ಥೆ ಮತ್ತು ಸಾಮರಸ್ಯ ಕದಡುವುದಕ್ಕೆ ಪ್ರಮುಖ ಕಾರಣವಾಗಿರುವುದು ಗಮನಕ್ಕೆ ಬಂದಿದೆ.
ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ: ಜಗದೀಶ್ ಶೆಟ್ಟರ್
ಮುಖ್ಯವಾಗಿ ಮಾದಕ ದ್ರವ್ಯ ಬಳಕೆಯನ್ನು ತಡೆಯಲು ಪೊಲೀಸ್ ಇಲಾಖೆಯು ಜಿಲ್ಲಾಡಳಿತದೊಂದಿಗೆ ಮತ್ತು ಶೈಕ್ಷಣಿಕ ಸಂಸ್ಥೆಗಳೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯ ಬಳಕೆಯನ್ನು ತಡೆಯಲು ನಿರ್ದಾಕ್ಷಣ್ಯ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಸರ್ಕಾರದ ಈ ಕ್ರಮಕ್ಕೆ ಮಕ್ಕಳ ಪೋಷಕರ ಸಹಕಾರ ಬೇಕು. ಈ ಜಾಸಜ ಹಿಂದೆ ಪೊಲೀಸ್ ಇಲಾಖೆಯ ಕೆಳ ಹಂತದ ಸಿಬ್ಬಂದಿ ಕೈಜೋಡಿಸಿರುವುದು ನನ್ನ ಗಮನಕ್ಕೆ ಬಂದಿದ್ದು, ಸಂಬಂಧಿಸಿದ ಸಿಬ್ಬಂದಿ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿರುತ್ತೇನೆ. ಈ ನಿಟ್ಟನಲ್ಲಿ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸೇರಿ ವಿಶೇಷ ಕಾರ್ಯಚಾರಣೆ ನಡೆಸಿ ಈ ಹಾವಳಿಯನ್ನು ನಿಗ್ರಹಿಸಲು ಸೂಚಿಸಿರುತ್ತೇನೆ ಎಂದಿದ್ದಾರೆ.