ಅಭಿವೃದ್ಧಿ ಸಹಿಸಿಕೊಳ್ಳಲಾಗದೆ ತಿಕ್ಕಾಟಕ್ಕಿಳಿದಿದ್ದಾರೆ: ಸಚಿವ ಅಶ್ವತ್ಥ್ ನಾರಾಯಣ
ರಾಮನಗರ ಜಿಲ್ಲೆ ಅಭಿವೃದ್ಧಿಗೆ ರೂಪುರೇಷೆ ಹಾಕಿದ್ದೇ ಬಿಜೆಪಿ ಸರ್ಕಾರ. ಮನೆ ಮನೆಗೆ ಕಾವೇರಿ ನೀರು ನೀಡಲಾಗುತ್ತಿದೆ. ಆದರೆ ಅಭಿವೃದ್ಧಿ ಸಹಿಸಿಕೊಳ್ಳಲಾರದೆ ತಿಕ್ಕಾಟಕ್ಕೆ ಇಳಿದಿದ್ದಾರೆ. ಚುನಾವಣೆಯೇ ಬೇರೆ, ಅಭಿವೃದ್ಧಿಯೇ ಬೇರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.
ಕೋಲಾರ (ಅ.03): ರಾಮನಗರ ಜಿಲ್ಲೆ ಅಭಿವೃದ್ಧಿಗೆ ರೂಪುರೇಷೆ ಹಾಕಿದ್ದೇ ಬಿಜೆಪಿ ಸರ್ಕಾರ. ಮನೆ ಮನೆಗೆ ಕಾವೇರಿ ನೀರು ನೀಡಲಾಗುತ್ತಿದೆ. ಆದರೆ ಅಭಿವೃದ್ಧಿ ಸಹಿಸಿಕೊಳ್ಳಲಾರದೆ ತಿಕ್ಕಾಟಕ್ಕೆ ಇಳಿದಿದ್ದಾರೆ. ಚುನಾವಣೆಯೇ ಬೇರೆ, ಅಭಿವೃದ್ಧಿಯೇ ಬೇರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಬರಲು ಸಾಧ್ಯವಿಲ್ಲವೆಂದು ಮಾಜಿ ಸಿಎಂ ಕುಮಾರಸ್ವಾಮಿ ಅವರೇ ಪತ್ರ ಬರೆದಿದ್ದರು. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿಯಲ್ಲಿ ಅವರು ಕಾರ್ಯಕ್ರಮ ಮಾಡಿದಾಗ ನಾವು ತೊಂದರೆ ಕೊಟ್ಟಿದ್ದೇವೆಯೇ, ನಿರ್ಬಂಧ ಹೇರಿದ್ದೇವೆಯೇ. ಇಷ್ಟೊಂದು ಸಹಕಾರ, ಮಾನ್ಯತೆ, ಗೌರವವನ್ನು ಮತ್ಯಾರೂ ಕೊಡಲು ಸಾಧ್ಯವಿಲ್ಲ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅವರಿಗೆ ಬಿಟ್ಟವಿಚಾರ. ಆದರೆ, ಕಾರ್ಯಕ್ರಮ ತಡೆಯುವುದೇ ಕುಮಾರಸ್ವಾಮಿ ಉದ್ದೇಶವಾಗಿತ್ತು ಎಂದರು
Kolar: ಅಧಿಕಾರಿಗಳ ಮೇಲೆ ಗರಂ ಆದ ಸಚಿವೆ ನಿರ್ಮಲಾ ಸೀತಾರಾಮನ್!
ಎಚ್ಡಿಕೆ ಕೇಳಿದಾಗಲೆಲ್ಲ ಅನುದಾನ: ಕುಮಾರಸ್ವಾಮಿ ಕೇಳಿದಾಗಲೆಲ್ಲಾ ನಮ್ಮ ಸರ್ಕಾರ ಅನುದಾನ ನೀಡಿದೆ, ಸಹಕಾರ ನೀಡಿದೆ. ಯಾವುದೇ ತಾರತಮ್ಯ ಮಾಡಿಲ್ಲ. ಅದೇ ರೀತಿ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಯಾವ ವಸ್ತುವಿಗೆ ಎಷ್ಟು ಬೆಲೆ ಏರಿಕೆ ಆಗಿತ್ತು. ಈಗ ಎಷ್ಟು ಏರಿಕೆ ಆಗಿದೆ ಎಂಬ ಅಂಕಿ ಅಂಶ ಮುಂದಿಡಲಿ ಎಂದು ಸವಾಲು ಹಾಕಿದರು.
ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ ಎಂಬ ಆರೋಪ ಪ್ರಸ್ತಾಪಿಸಿದ ಸಚಿವರು, ನಮ್ಮ ಪಕ್ಷ ಭ್ರಷ್ಟಾಚಾರಿಗಳಿಗೆ ಸಿಂಹಸ್ವಪ್ನವಾಗಿದೆ. ಸರ್ಕಾರ ಬಿಡುಗಡೆ ಮಾಡುವ ಅನುದಾನದಲ್ಲಿ ಶೇ 15ರಷ್ಟುಮಾತ್ರ ಫಲಾನುವಿಗಳಿಗೆ ತಲುಪುತ್ತಿದೆ, ಇನ್ನು 85 ಪರ್ಸೆಂಟ್‌ನ ಜೇಬು ಸೇರುತ್ತಿದೆ ಎಂಬುದಾಗಿ ಈ ಹಿಂದೆ ಕಾಂಗ್ರೆಸ್‌ನ ಪ್ರಧಾನಿಯಾಗಿದ್ದವರೇ ಹೇಳಿದ್ದರು. ನಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ. ಅಕ್ರಮ ಹಣ ಸಂಪಾದನೆಗೆ ಸರ್ಕಾರ ಕಾನೂನು ಮೂಲಕ ಕಡಿವಾಣ ಹಾಕಿದೆ ಎಂದು ಹೇಳಿದರು.
ಕಾಂಗ್ರೆಸ್ ವಿನಾಶ ಕಾಲದಲ್ಲಿದೆ: ಭಾರತ್ ಜೋಡೊ ಯಾತ್ರೆ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ವಿನಾಶ ಕಾಲದಲ್ಲಿದ್ದು, ಅಸ್ತಿತ್ವ ಉಳಿಸಿಕೊಳ್ಳಲು ನಾಟಕ ಮಾಡುತ್ತಿದೆ. ಅಧಿಕಾರದಲ್ಲಿದ್ದಾಗ ದೇಶ ಒಡೆಯಲು, ಭಯೋತ್ಪಾದನೆಗೆ ಉತ್ತೇಜನ ನೀಡಲು ಅಧಿಕಾರ ಬಳಸಿಕೊಂಡರು. ದೇಶದಾದ್ಯಂತ ವಿವಿಧ ಸಮಸ್ಯೆ ಹುಟ್ಟುಹಾಕಿದರು ಎಂದು ಹರಿಹಾಯ್ದರು.
ಕಾಲೇಜು ಪರಿಶೀಲನೆ: ಆರು ತಿಂಗಳೊಳಗೆ ಕೋಲಾರದ ಪ್ರಥಮದರ್ಜೆ ಕಾಲೇಜಿನ ಸವಾಂರ್‍ಗೀಣ ಅಭಿವೃದ್ಧಿ ಮಾಡಿ ಉತ್ತಮ ರೂಪ ಕೊಡಲಾಗುವುದು ಎಂದರು. ಶನಿವಾರ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವರು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಿ.ದೇವರಾಜ್ ಮನವಿ ಮೇರೆಗೆ ಕಾಲೇಜಿನಲ್ಲಿ ಸುತ್ತಾಡಿ ಪರಿಶೀಲನೆ ನಡೆಸಿದರು.
ದೇಶೀಯ ಉತ್ಪನ್ನಕ್ಕೆ ಒತ್ತು ನೀಡಿ: ದೇಶವನ್ನು ಆತ್ಮನಿರ್ಭರ, ಸ್ವಾವಲಂಬಿ ಭಾರತ ಹಾಗೂ ವಿಶ್ವಗುರುವಾಗಿಸುವ ಪ್ರಧಾನಿ ನರೇಂದ್ರ ಮೋದಿ ಕನಸನ್ನು ನನಸಾಗಿಸಲು ಅವರ ಪ್ರಾಮಾಣಿಕ ಪ್ರಯತ್ನಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಎ.ಎನ್.ಅಶ್ವತ್ಥ ನಾರಾಯಣ ಕರೆ ನೀಡಿದರು. ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ವತಿಯಿಂದ ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಮೋದಿ- 2022 ಹೆಸರಿನಲ್ಲಿ ಕೋಲಾರ ಜಿಲ್ಲೆಯ ಇತಿಹಾಸದಲ್ಲೇ ದಾಖಲೆಯೆನ್ನುವಂತೆ ಇದೇ ಮೊದಲ ಬಾರಿಗೆ ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಅಂಗಾಂಗದಾನಿಗಳ ನೋಂದಣಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಪಿಎಫ್‌ಐ ಬ್ಯಾನ್ ಮಾಡಿದ್ರೆ ಶಾಂತಿ ನೆಲೆಸುತ್ತೆ ಅನ್ನೋ ನಂಬಿಕೆ ನನಗಿಲ್ಲ: ಕುಮಾರಸ್ವಾಮಿ
ಭಾರತವು ಸ್ವಾವಲಂಬಿ ದೇಶವಾಗಲು ದೇಸಿಯ ಉತ್ಪನ್ನಗಳಿಗೆ ಹೆಚ್ಚು ಅದ್ಯತೆ ನೀಡಬೇಕು, ಆಮದಿಗೆ ಕಡಿವಾಣ ಹಾಕಿ ಪ್ರತಿಯೊಂದು ಉತ್ಪನ್ನವೂ ಭಾರತದಲ್ಲೇ ತಯಾರಾಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ್ ಯೋಜನೆಯ ಉದ್ದೇಶವಾಗಿದೆ ಎಂದರು.