ಸಿದ್ದುರನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು: ಸಚಿವ ಅಶ್ವತ್ಥ ನಾರಾಯಣ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು ಎಂದು ಸಚಿವ ಅಶ್ವತ್ಥ ನಾರಾಯಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಡ್ಯದ ಸಾತನೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಮಂಡ್ಯ (ಫೆ.16): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು ಎಂದು ಸಚಿವ ಅಶ್ವತ್ಥ ನಾರಾಯಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಡ್ಯದ ಸಾತನೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಟಿಪ್ಪುವಿನ ಜಾಗಕ್ಕೆ ಸಿದ್ದರಾಮಯ್ಯ ಬಂದು ಬಿಡ್ತಾರೆ. ಹುರಿಗೌಡ, ನಂಜೇಗೌಡ ಅವರು ಟಿಪ್ಪುಗೆ ಏನು ಮಾಡಿದ್ರೊ, ಅದೇ ರೀತಿ ಸಿದ್ದರಾಮಯ್ಯ ಅವರನ್ನು ಕೂಡ ಹೊಡೆದು ಹಾಕಬೇಕು ಎಂದರು. ನಿಮಗೆ ಸಾವರ್ಕರ್ ಬೇಕಾ?, ಟಿಪ್ಪು ಬೇಕಾ ನೀವೇ ತೀರ್ಮಾನಿಸಿ ಎಂದು ಹೇಳಿದರು.
ಮಂಡ್ಯ ಉಸ್ತುವಾರಿ ನಿರ್ಧಾರ ಸಿಎಂಗೆ ಬಿಟ್ಟದ್ದು: ಮಂಡ್ಯ ಜಿಲ್ಲಾ ಉಸ್ತುವಾರಿ ಯಾರಿಗೆ ನೀಡಬೇಕೆಂದು ತೀರ್ಮಾನ ಮಾಡೋರು ಮುಖ್ಯಮಂತ್ರಿಯವರು, ಉಸ್ತುವಾರಿ ಬಗ್ಗೆ ನನ್ನನ್ನು ಕೇಳಿದರೆ ನಾನೇನು ಹೇಳಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಜಿಲ್ಲೆಯ ಮೇಲೆ ನನಗಿರುವ ಪ್ರೀತಿ, ಬಾಂಧವ್ಯ ಒಂದು ಭಾಗವಾದರೆ, ಜವಾಬ್ದಾರಿ ಮತ್ತು ಆಡಳಿತ ಇನ್ನೊಂದು ಭಾಗ. ಯಾವುದೇ ಜಿಲ್ಲೆಯ ಉಸ್ತುವಾರಿ ನಿಶ್ಚಯ ಮಾಡುವ ಅಧಿಕಾರವಿರುವುದು ಸಿಎಂಗೆ ಮಾತ್ರ. ಮಂಡ್ಯ ಉಸ್ತುವಾರಿ ನೇಮಕ ವಿಚಾರದಲ್ಲಿ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
ರೈತರ ಸಂಕಷ್ಟಅರಿಯದ ರಾಯರಡ್ಡಿ: ಸಚಿವ ಹಾಲಪ್ಪ ಆಚಾರ್
ಜವಾಬ್ದಾರಿಯನ್ನು ಹೊತ್ತುಕೊಳ್ಳಲು ನಮ್ಮ ಪಕ್ಷದಲ್ಲಿ ಸಾಕಷ್ಟು ಜನರಿದ್ದಾರೆ. ಯಾರಿಗೇ ಮಂಡ್ಯ ಉಸ್ತುವಾರಿ ನೀಡಿದರೂ ಸಮರ್ಥವಾಗಿ ನಿಭಾಯಿಸಬಲ್ಲರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮಗೆ ಸೂಕ್ತ ಎನ್ನಿಸಿದವರಿಗೆ ಆ ಜವಾಬ್ದಾರಿಯನ್ನು ಕೊಡುತ್ತಾರೆ. ನನಗೆ ಉಸ್ತುವಾರಿ ನೀಡುವ ಬಗ್ಗೆ ಗೊತ್ತಿಲ್ಲ ಎಂದವರು ಸ್ಪಷ್ಟಪಡಿಸಿದರು.
ಸೊಪ್ಪಿನಬೆಟ್ಟಕಾನು ಸಮಸ್ಯೆಗೆ ತಿಂಗಳೊಳಗೆ ಪರಿಹಾರ: ಮಲೆನಾಡು ಭಾಗದ ರೈತರು ಮತ್ತು ಚಿಕ್ಕಮಗಳೂರು ಭಾಗದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸೊಪ್ಪಿನಬೆಟ್ಟಕಾನು ಮುಂತಾದ ಸಮಸ್ಯೆಗಳಿಗೆ ಇದೇ ಅಧಿವೇಶನದಲ್ಲಿ ಅಥವಾ ಒಂದು ತಿಂಗಳ ಒಳಗಾಗಿ ಪರಿಹಾರವನ್ನು ರೂಪಿಸುತ್ತೇವೆ ಎಂದು ತಂತ್ರಜ್ಞಾನ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ ನಾರಾಯಣ ಹೇಳಿದರು.
ಕಾಂಗ್ರೆಸ್ ಭಯೋತ್ಪಾದಕರ ಪಕ್ಷ: ನಳಿನ್‌ಕುಮಾರ್ ಕಟೀಲ್
ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಪಟ್ಟಣದ ಬೆಟ್ಟಮಕ್ಕಿ ಬಡಾವಣೆಯಲ್ಲಿರುವ ಸಹ್ಯಾದ್ರಿ ಕೇಂದ್ರೀಯ ಶಾಲೆಯ ಆವರಣದಲ್ಲಿ ಕುವೆಂಪು ಪ್ರತಿಮೆ ಸ್ಥಾಪನೆ, ಗಣ್ಯರಿಗೆ ಸನ್ಮಾನ ಮತ್ತು ದತ್ತಿ ನಿಧಿ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ಈ ಕಾಯ್ದೆಯ ಗೊಂದಲದಿಂದಾಗಿ ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಪೂರ್ಣ ಅರಿವಿದೆ. ಇದರ ನಿವಾರಣೆಗೆ ಚಿಂತನೆ ನಡೆದಿದ್ದು, ಈ ಅಧಿವೇಶನದಲ್ಲೇ ಪರಿಹಾರ ಕಂಡುಕೊಳ್ಳುವ ಸಲುವಾಗಿ ಕಂದಾಯ ಇಲಾಖೆಯ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಾ ಈ ಬಗ್ಗೆ ಸರ್ಕಾರವನ್ನು ಸದಾ ಆಗ್ರಹಿಸುತ್ತಿದ್ದಾರೆ ಎಂದೂ ಹೇಳಿದರು.