3 ಡಿಸಿಎಂ ಹೇಳಿಕೆ ತಪ್ಪಲ್ಲ, ರಾಜಣ್ಣ ಸಂದೇಶ ನೀಡಿದ್ದಾರೆ: ಗೃಹ ಸಚಿವ ಪರಮೇಶ್ವರ್‌

ಸಹಕಾರ ಸಚಿವ ರಾಜಣ್ಣ ಅವರು ಸರ್ಕಾರದಲ್ಲಿ ಸಮುದಾಯವಾರು ಮೂವರು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೇಳಿರುವುದರಲ್ಲಿ ತಪ್ಪಿಲ್ಲ. ಒಂದು ಸಂದೇಶ ಹೋಗಲಿ ಎಂದು ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪುನರುಚ್ಚರಿಸಿದ್ದಾರೆ. 

Minister Dr G Parameshwar Reacction On KN Raajanna 3 DCM Statement gvd

ಬೆಂಗಳೂರು (ಸೆ.22): ಸಹಕಾರ ಸಚಿವ ರಾಜಣ್ಣ ಅವರು ಸರ್ಕಾರದಲ್ಲಿ ಸಮುದಾಯವಾರು ಮೂವರು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೇಳಿರುವುದರಲ್ಲಿ ತಪ್ಪಿಲ್ಲ. ಒಂದು ಸಂದೇಶ ಹೋಗಲಿ ಎಂದು ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಾಜಣ್ಣ ಅವರ ಹೇಳಿಕೆಯಲ್ಲಿ ತಪ್ಪಿಲ್ಲ. ಅವರು ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷ ಇನ್ನಷ್ಟು ಸದೃಢವಾಗಬೇಕು. ನಿರ್ದಿಷ್ಟ ಸಮುದಾಯಗಳನ್ನು ಸೆಳೆಯಬೇಕು ಎಂಬ ಕಾರಣಕ್ಕೆ ಈ ಹೇಳಿಕೆ ನೀಡಿದ್ದಾರೆ. ಒಂದು ಸಂದೇಶ ಹೋಗಲಿ ಎಂದು ಅವರು ಈ ರೀತಿ ಹೇಳಿದ್ದಾರೆ ಎಂದರು. 

ಕೆಲ ಸಚಿವರು ರಾಜಣ್ಣ ಅವರ ಹೇಳಿಕೆ ಸರಿಯಲ್ಲ ಎಂದು ಹೇಳುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ಆ ರೀತಿ ಹೇಳುವುದು ತಪ್ಪು. ರಾಜಣ್ಣ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ನಾನೂ ನನ್ನ ವೈಯಕ್ತಿಕ ಹೇಳಿಕೆ ಕೊಡುತ್ತೇನೆ. ಆದರೆ, ಅವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎನ್ನುವುದು ಮುಖ್ಯ. ಅಂತಿಮವಾಗಿ ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದರು. ಇದೇ ವೇಳೆ ರಾಜಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ನಾಗೇಂದ್ರ, ರಾಜಣ್ಣ ಅವರು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕವಾರು ಅಲ್ಲ, ಜಾತಿವಾರು ಕೇಳಿದ್ದಾರೆ, ತಪ್ಪೇನಿಲ್ಲ. ಇದು ನಮ್ಮ ಆಂತರಿಕ ವಿಚಾರ ಎಂದಿದ್ದಾರೆ.

ರಾಜ್ಯದಲ್ಲಿ ದೇಶದ ಪ್ರಥಮ ಗ್ರೀನ್ ಹೈಡ್ರೋಜನ್ ಘಟಕ: ಸಚಿವ ಜಾರ್ಜ್‌

ಜನರ ನಿರೀಕ್ಷೆಗನುಗುಣ ಸೇವೆ ನೀಡಲು ಪರಮೇಶ್ವರ ಸಲಹೆ: ಎಲ್ಲಾ ಗ್ರಾ.ಪಂ.ಗಳು ಜನರ ನಿರೀಕ್ಷೆಗನುಗುಣವಾಗಿ ಉತ್ತಮ ಸೇವೆ ಒದಗಿಸಬೇಕೆಂದು ಗೃಹ ಸಚಿವ ಡಾ: ಜಿ. ಪರಮೇಶ್ವರ ಕರೆ ನೀಡಿದರು. ಹೊರವಲಯದಲ್ಲಿರುವ ಶಿಕ್ಷಣ ಭೀಷ್ಮ ಹೆಚ್.ಎಂ. ಗಂಗಾಧರಯ್ಯ ಮೆಮೋರಿಯಲ್ ಸಭಾಂಗಣದಲ್ಲಿಂದು ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮಗಳು ಅಭಿವೃದ್ಧಿ ಹಾದಿಯಲ್ಲಿ ಸಾಗಬೇಕಾದರೆ ಆಯಾ ಪಂಚಾಯತಿ ಚುನಾಯಿತ ಪ್ರತಿನಿಧಿಗಳು, ಪಿಡಿಒ ಪಾರದರ್ಶಕವಾಗಿ ಸಾಮರಸ್ಯದಿಂದ ತಮ್ಮ ವ್ಯಾಪ್ತಿಯ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು. 

ಜಿಲ್ಲೆಯ 330 ಗ್ರಾ.ಪಂ. ಅಧ್ಯಕ್ಷರು/ಉಪಾಧ್ಯಕ್ಷರು ಹಾಗೂ ಪಿಡಿಒ ಗಳಿಗಾಗಿ ಕಾರ್ಯಾಗಾರ ಹಮ್ಮಿಕೊಂಡಿರುವುದು ರಾಜ್ಯದಲ್ಲಿ ಇದೇ ಮೊದಲು. ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು/ಉಪಾಧ್ಯಕ್ಷರು ತಮ್ಮ ವ್ಯಾಪ್ತಿಯ ಗ್ರಾಮಾಡಳಿತವನ್ನು ಚುರುಕುಗೊಳಿಸಲು ಅನುಸರಿಸುವ ಕ್ರಮಗಳ ಬಗ್ಗೆ ವಿವರಿಸಿದರು. ಗ್ರಾಮ ಮಟ್ಟದಲ್ಲಿ ಸ್ಥಳೀಯ ಪಂಚಾಯತಿ ಅಧ್ಯಕ್ಷರು/ಉಪಾಧ್ಯಕ್ಷರೇ ಮುಖ್ಯಮಂತ್ರಿ/ಉಪಮುಖ್ಯಮಂತ್ರಿಗಳಿದ್ದಂತೆ. ಭಾರತ ಹೊರತುಪಡಿಸಿ ವಿಶ್ವದ ಯಾವುದೇ ದೇಶದಲ್ಲಿ ಈ ಅಧಿಕಾರ ನೀಡಿರುವುದನ್ನು ನಾ ಕಂಡಿಲ್ಲ. 

ಕಾಂಗ್ರೆಸ್-ತಮಿಳುನಾಡಿನ ನಂಟಿಂದ ರಾಜ್ಯಕ್ಕೆ ನಷ್ಟ: ಕುಮಾರಸ್ವಾಮಿ ಹೇಳಿದ್ದೇನು?

ಹೆಚ್ಚಿನ ಜನಸಂಖ್ಯೆಯುಳ್ಳ ಚೀನಾ ದೇಶದಲ್ಲಿ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಆದರೆ, ಜನರಿಂದ, ಜನರಿಗಾಗಿ, ಜನರಿಗೋಸ್ಕರ ರೂಪಿಸಿರುವ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ದೇಶದಲ್ಲಿ ಮಾತ್ರ ಕಾಣಬಹುದಾಗಿದೆ ಎಂದರು. ಗ್ರಾಮ ಪಂಚಾಯತಿಗಳಿಗೆ ಬೆಂಗಳೂರಿನಿಂದ ಯೋಜನೆಗಳ ಸೌಲಭ್ಯ ಕಲ್ಪಿಸುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ತಳ ಹಂತದಲ್ಲಿರುವ ಗ್ರಾಮ ಪಂಚಾಯತಿಗಳಿಗೆ ಶಕ್ತಿ ನೀಡುವ ದೃಷ್ಟಿಯಿಂದ ಆಯಾ ಪಂಚಾಯತಿಗಳಿಗೆ ಅಧಿಕಾರ ನೀಡಲಾಗಿದೆ ಎಂದರು.

Latest Videos
Follow Us:
Download App:
  • android
  • ios