ಇಂದಿರಾ ಕ್ಯಾಂಟೀನ್ಗೂ ಬಿಲ್‌ಗೂ ಚೈತ್ರಾ ಕೇಸಿಗೂ ಸಂಬಂಧವಿಲ್ಲ: ಸಚಿವ ಪರಮೇಶ್ವರ್
ಇಂದಿರಾ ಕ್ಯಾಂಟೀನ್ ಬಿಲ್‌ಗೂ ಚೈತ್ರಾ ಕುಂದಾಪುರ ಬಂಧನ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು (ಸೆ.15): ಇಂದಿರಾ ಕ್ಯಾಂಟೀನ್ ಬಿಲ್‌ಗೂ ಚೈತ್ರಾ ಕುಂದಾಪುರ ಬಂಧನ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವ ಸಂದರ್ಭದಲ್ಲಿ ಆರೋಪಿ ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಇರುವ ಕಾರಣ ಷಡ್ಯಂತ್ರ ರಚನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಇಂದಿರಾ ಕ್ಯಾಂಟೀನ್ ಬಿಲ್‌ಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.
ನನಗೆ ಬಂದಿರುವ ಮಾಹಿತಿಯ ಪ್ರಕಾರ ಚೈತ್ರ ಕುಂದಾಪುರ ಅವರು ಬಿಜೆಪಿಯಲ್ಲಿ ಟಿಕೆಟ್ ಕೊಡಿಸುವುದಾಗಿ 3.5 ಕೋಟಿ ರು. ಹಣ ಪಡೆದಿರುವ ಪ್ರಕರಣ ದಾಖಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಆ ನಂತರ ಇತರ ವಿಚಾರಗಳು ತನಿಖೆಯಿಂದ ಗೊತ್ತಾಗಲಿವೆ ಎಂದು ತಿಳಿಸಿದರು. ಈ ಪ್ರಕರಣದಲ್ಲಿ ಅಭಿನವ ಹಾಲಪ್ಪ ವೀರಪ್ಪಜ್ಜ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತದೆ. ಸ್ವಾಮೀಜಿ ತಪ್ಪಿದ್ದರೆ ಅವರ ವಿರುದ್ಧವೂ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂಪರ ಭಾಷಣಕ್ಕೂ ವಂಚನೆ ಪ್ರಕರಣಕ್ಕೂ ಸಂಬಂಧವಿಲ್ಲ. ಈ ಬಗ್ಗೆ ತಳಕು ಹಾಕುವುದು ಬೇಡ ಎಂದು ಸ್ಪಷ್ಟಪಡಿಸಿದರು.
ಉತ್ತರ ಭಾರತದ ಪಪ್ಪು ರಾಹುಲ್ ಗಾಂಧಿ, ದಕ್ಷಿಣದ ಪಪ್ಪು ಉದಯನಿಧಿ ಸ್ಟಾಲಿನ್: ಶ್ರೀರಾಮುಲು
ಸುಧಾಕರ್ ರಾಜೀನಾಮೆಗೆ ಆಗ್ರಹ ಸ್ವಾಭಾವಿಕ: ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿರುವುದರಿಂದ ಪಿಪಕ್ಷಗಳು ರಾಜೀನಾಮೆಗೆ ಆಗ್ರಹಿಸುವುದು ಸ್ವಾಭಾವಿಕ. ನಾನು ಪ್ರಕರಣದ ಬಗ್ಗೆ ಪ್ರಾಥಮಿಕ ಮಾಹಿತಿ ಪಡೆದಿದ್ದೇನೆ ಆದರೆ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸಚಿವರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಸತ್ಯಾಂಶ ಏನು ಎಂಬ ಬಗ್ಗೆ ಇಲಾಖೆಯಿಂದ ವರದಿ ಕೇಳಿದ್ದೇನೆ. ವರದಿ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವರಣೆ ನೀಡುತ್ತೇನೆ ಎಂದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ. ಸುಧಾಕರ್ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿರಲಿಲ್ಲ. ಗೊತ್ತಾದ ಬಳಿಕ ಪ್ರಾಥಮಿಕ ಮಾಹಿತಿ ಪಡೆದಿದ್ದೇನೆ. ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ, ಯಾವುದೇ ನಿರ್ದೇಶನಗಳನ್ನೂ ನೀಡುವುದಿಲ್ಲ ಎಂದು ಸ್ಪಷ್ಪಪಡಿಸಿದರು.
ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಟ್ವಿಸ್ಟ್: ಸಲೂನ್ ಮಾಲೀಕನಿಗೆ ಬೆದರಿಕೆ ಕರೆ
ಸುಧಾಕರ್ ಅವರು ಪ್ರಕರಣದ ಬಗ್ಗೆ ಚರ್ಚಿಸಲು ನನ್ನನ್ನು ಭೇಟಿ ಮಾಡಿದ್ದು ಸತ್ಯ. 10 ವರ್ಷದ ಹಿಂದೆ ಆಸ್ತಿ ಖರೀದಿ ಮಾಡಿದ್ದೆ. ನಿಯಮ ಬದ್ಧವಾಗಿಯೇ ಖರೀದಿ ಮಾಡಿದ್ದೇನೆ. ಜತೆಗೆ ಯಾರಿಗೂ ಅವಹೇಳನ, ಗೂಂಡಾಗಿರಿ ಮಾಡಿಲ್ಲ ಎಂದು ಹೇಳಿದ್ದಾರೆ. ಅದನ್ನು ಇಲಾಖೆ ಪರಿಶೀಲಿಸುತ್ತದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುಳ್ಳು ಕೇಸ್ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ತಕ್ಷಣದ ಪ್ರತಿಕ್ರಿಯೆ ಹೇಳಿದ್ದಾರೆ. ಮಾಧ್ಯಮದವರು ಕೇಳಿದ ತಕ್ಷಣ ಮಾಹಿತಿ ಇಲ್ಲದೆ ಹೇಳಿದ್ದಾರೆ ಎಂದು ಸಮಜಾಯಿಷಿ ನೀಡಿದರು.