ಅನೈತಿಕ ಸಂಬಂಧ ಹೇಳಿಕೆಗೆ ಆರೋಗ್ಯ ಸಚಿವ ಸುಧಾಕರ್ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಸಿಎಂ ತರಾಟೆಗೆ ತೆಗೆದುಕೊಂಡ ಬಳಿಕೆ ಎಚ್ಚೆತ್ತುಕೊಂಡಿದ್ದಾರೆ.

ಬೆಂಗಳೂರು, (ಮಾ.24) : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. 

ಬೆಂಗಳೂರು, (ಮಾ.24): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ವಲಯದಲ್ಲಿ ವಾಗ್ವಾದ ಮುಂದುವರಿದಿದೆ. ಈ ಮಧ್ಯೆ 'ಏಕಪತ್ನಿ ವ್ರತಸ್ಥರು ಯಾರಿದ್ದಾರೆ' ಎಂದು ಸವಾಲು ಹಾಕಿರುವ ವೈದ್ಯಕೀಯ ಸಚಿವ ಡಾ.ಸುಧಾಕರ್ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ.

ಸಚಿವ ಸುಧಾಕರ್ ಹೇಳಿದ 'ಅನೈತಿಕ ಸಂಬಂಧ': ಅಸಮಾಧಾನ ಹೊರಹಾಕಿದ ಶಾಸಕಿಯರು! 

ಅದರಲ್ಲೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಸಹ ಸುಧಾಕರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ಭಾರೀ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಎಚ್ಚೆತ್ತ ಸುಧಾಕರ್ ತಮ್ಮ ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ವಿವಾದ ಇದೀಗ ಭಾರಿ ಕೋಲಾಹಲ ಸೃಷ್ಟಿಸಿದೆ. ಕಾಂಗ್ರೆಸ್​ ಮತ್ತು ಜೆಡಿಎಸ್​ ಮುಖಂಡರು ಸುಧಾಕರ್​ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದನ್ನು ಅರಿತ ಸಿಎಂ, ಸುಧಾಕರ್ ಅವರನ್ನು ಕಚೇರಿಗೆ ಕರೆಯಿಸಿಕೊಂಡು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ವಿಷಾಧ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ, ಡಿಕೆಶಿ, ರಮೇಶ್ ಕುಮಾರ್ ಏಕಪತ್ನಿ ವ್ರತಸ್ಥರಲ್ವಾ, ಈ ತನಿಖೆಗೆ ಒಪ್ಪಲಿ: ಸುಧಾಕರ್ ಸವಾಲ್..!

ಸುಧಾಕರ್ ಟ್ವೀಟ್
ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ.

ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

Scroll to load tweet…
Scroll to load tweet…