Asianet Suvarna News Asianet Suvarna News

ಎಚ್‌ಡಿಕೆ ಅಧಿಕಾರ ಇದ್ದಾಗ ಏಕೆ ಪಂಚರತ್ನ ಜಾರಿ ಮಾಡಲಿಲ್ಲ?: ಸಚಿವ ಸುಧಾಕರ್‌ ಪ್ರಶ್ನೆ

ಪ್ರಸ್ತುತ ಕಾಲಘಟ್ಟದಲ್ಲಿ ಕೆಲ ವ್ಯವಸ್ಥೆಗಳು ಅವ್ಯವಸ್ಥೆಗಳಾಗಿವೆ. ಅದನ್ನು ಒಪ್ಪಲೇಬೇಕು. ಮೌಲ್ಯಗಳ ಬಗ್ಗೆ ಮಾತನಾಡುವುದಲ್ಲ, ವ್ಯವಸ್ಥೆ ಸರಿ ಮಾಡಲು ಎಲ್ಲರೂ ಸೇರಿ ಪ್ರಯತ್ನ ಮಾಡೋಣ. ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವುದರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಜನರಿಗೆ ನಂಬಿಕೆ ಹೋಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. 

Minister Dr K Sudhakar Slams On HD Kumaraswamy At Chikkaballapur gvd
Author
First Published Feb 26, 2023, 2:59 PM IST

ಚಿಕ್ಕಬಳ್ಳಾಪುರ (ಫೆ.26): ಪ್ರಸ್ತುತ ಕಾಲಘಟ್ಟದಲ್ಲಿ ಕೆಲ ವ್ಯವಸ್ಥೆಗಳು ಅವ್ಯವಸ್ಥೆಗಳಾಗಿವೆ. ಅದನ್ನು ಒಪ್ಪಲೇಬೇಕು. ಮೌಲ್ಯಗಳ ಬಗ್ಗೆ ಮಾತನಾಡುವುದಲ್ಲ, ವ್ಯವಸ್ಥೆ ಸರಿ ಮಾಡಲು ಎಲ್ಲರೂ ಸೇರಿ ಪ್ರಯತ್ನ ಮಾಡೋಣ. ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವುದರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಜನರಿಗೆ ನಂಬಿಕೆ ಹೋಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಟೆನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯಾವಳಿ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಎರಡು ಬಾರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಆಗ ಯಾಕೆ ಪಂಚರತ್ನಗಳನ್ನು ಅನುಷ್ಠಾನ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಕೇವಲ ಕೈ ಮುಗಿದು ಮತ ಪಡೆದಿದ್ದಾರೆಯೇ?: ತಮ್ಮ ಪಕ್ಷಗಳ ಆಶಯ ಅವರು ಹೇಳಲಿ, ನಮ್ಮ ಆಶಯ ನಾವು ಹೇಳುತ್ತೇವೆ. ಇವರು ಚುನಾವಣೆ ಪ್ರಾಮಾಣಿಕತೆಯಿಂದ ಮಾಡಿದ್ದಾರೆಯೇ, ಅವರು ಗೆದ್ದ ಸ್ಥಾನಗಳಲ್ಲಿ ಕೇವಲ ಕೈ ಮುಗಿದು ಮತ ಪಡೆದಿದ್ದಾರೆಯೇ ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್‌ ಮಾಡುತ್ತಿರುವ ಎಲ್ಲ ಆರೋಪಗಳೂ ಕೇವಲ ಗಾಳಿಯಲ್ಲಿ ಗುಂಡು ಹಾರಿಸುವುದೇ ಆಗಿದ್ದು, ಈವರೆಗೆ ಒಂದೇ ಒಂದು ದಾಖಲೆ ನೀಡಿಲ್ಲ ಎಂದು ಟೀಕಿಸಿದರು.

ಅರ್ಕಾವತಿ ಕೇಸಲ್ಲಿ ಸಿದ್ದರಾಮಯ್ಯಗೆ ಜೈಲು: ನಳಿನ್‌ ಕುಮಾರ್‌ ಕಟೀಲ್‌

ಭ್ರಷ್ಟಾಚಾರ ಮುಕ್ತ ಸರ್ಕಾರಗಳನ್ನು ನೀಡಿರುವುದು ಬಿಜೆಪಿ ಮಾತ್ರವಾಗಿದ್ದು, ಹಿಂದೆ ಅಟಲ್‌ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ ಸರ್ಕಾರಗಳು ಕೇಂದ್ರದಲ್ಲಿ ಮತ್ತು ಕಳೆದ ಮೂರೂವರೆ ವರ್ಷದಿಂದ ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದೆ. ಈ ಬಗ್ಗೆ ವಿಧಾನಸಭೆಯಲ್ಲೇ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ, ನಾವು ಏನೇ ಮಾತನಾಡಿದರೂ ದಾಖಲೆಗಳನ್ನಿಟ್ಟಿಕೊಂಡು ಮಾತನಾಡುತ್ತೇವೆ, ಆದರೆ ಕಾಂಗ್ರೆಸ್‌ ನವರು ಕೇವಲ ಆರೋಪ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುವುದಾಗಿ ಅಮಿತ್‌ ಶಾ ಅವರು ಹೇಳಿದಂತೆ ಪರಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ಸರ್ಕಾರ ನೀಡುವುದಾಗಿ ಅವರು ಹೇಳಿದರು.

ಆತ್ಮಾವಲೋಕನ ಮಾಡಿಕೊಳ್ಳಲಿ: ಶೃಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಕುಮಾರಸ್ವಾಮಿಯವರು ಯಾರ ಕಾಲದಲ್ಲಿ ಏನೇನು ಆಗಿದೆ ಎಂಬುದರ ಆತ್ಮಾವಲೋಕನ ಮಾಡಿಕೊಳ್ಳಲಿ. ಅಮಿತ್‌ ಶಾ ಅವರು ರಾಜ್ಯದ ಜನರಿಗೆ ಭರವಸೆ ನೀಡಿದ್ದಾರೆ ನೂರಕ್ಕೆ ನೂರರಷ್ಟುಪಾರದರ್ಶಕ, ಭ್ರಷ್ಟಾಚಾರ ರಹಿತ ಸರ್ಕಾರ ನೀಡುವುದಾಗಿ, ಅದನ್ನು ಸಾಕಾರಗೊಳಿಸುವುದಾಗಿ ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಖಾದಿ ಮತ್ತು ಗ್ರಾಮೋದೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್‌, ನಗರಸಭೆ ಅಧ್ಯಕ್ಷ ಡಿ.ಎಸ್‌.ಆನಂದರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ಚಿಕ್ಕಬಳ್ಳಾಪುರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ತಾಪಂ ಮಾಜಿ ಅಧ್ಯಕ್ಷ ಗರಗಿರೆಡ್ಡಿ, ಮರಳುಕುಂಟೆ ಕೃಷ್ಣಮೂರ್ತಿ, ಮಂಚನಬಲೆ ಶ್ರೀಧರ್‌ ಸೇರಿದಂತೆ ಮತ್ತಿತರರು ಇದ್ದರು.

‘ಕಾಂಗ್ರೆಸ್‌’ ಯೋಜನೆಗಳಿಗೆ ಗ್ಯಾರಂಟಿ ಇಲ್ಲ: ಸಚಿವ ಬಿ.ಸಿ.ಪಾಟೀಲ್‌ ಗೇಲಿ

ಬಿಜೆಪಿ ಹಿಂದುತ್ವದ ಆಶಯದ ಪಕ್ಷ: ಬಿಜೆಪಿ ಹಿಂದುತ್ವದ ಆಶಯವಿರುವ ಪಕ್ಷ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಮಠ ಮಾನ್ಯಳಿಗೆ ವಿಶೇಷ ಗೌರವವನ್ನು ಜನ ನೀಡಿದ್ದಾರೆ. ಅದೇ ರೀತಿಯಲ್ಲಿ ಸಾಮಾನ್ಯರಂತೆ ಅಮಿತ್‌ ಶಾ ಅವರೂ ಮಠಗಳಿಗೆ ಹೋಗುವುದು ಮತ್ತು ಅಲ್ಲಿನ ಗುರುಗಳಿಗೆ ಗೌರವ ಸಲ್ಲಿಸುವುದು ಸಾಮಾನ್ಯ. ಎಲ್ಲವನ್ನೂ ರಾಜಕೀಯ ದೃಷ್ಟಿಕೋನದಿಂದ ನೋಡುವುದು ಸರಿಯಲ್ಲ ಎಂದು ಸಚಿವರು ಹೇಳಿದರು.

Follow Us:
Download App:
  • android
  • ios