ಕುಮಾರಸ್ವಾಮಿಯಿಂದ ಸಿದ್ದರಾಮಯ್ಯ ಕಲಿಯುವ ಅವಶ್ಯಕತೆ ಇಲ್ಲ: ಎಚ್‌ಡಿಕೆ ವಿರುದ್ಧ ಹರಿಹಾಯ್ದ ಸುಧಾಕರ್
ಈಗಾಗಲೇ ಬಿಜೆಪಿ ಅಧಿಕಾರದಲ್ಲಿರುವ ಕಡೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿದೆ. ಆದರೆ, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಬದಲಿಗೆ ರಾಜ್ಯ ಶಿಕ್ಷಣ ನೀತಿ ತರುವುದಾಗಿ ಹೇಳಿದ್ದೇವೆ. ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿ ವಿದ್ಯಾರ್ಥಿಗಳು ಎರಡು ವರ್ಷ ವ್ಯಾಸಂಗ ಮಾಡಿದ್ದಾರೆ. ಹೀಗಾಗಿ ಬಹಳ ಯೋಚನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ: ಸಚಿವ ಎಂ.ಸಿ ಸುಧಾಕರ್
ಕೋಲಾರ(ಜು.04): ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವ ರೀತಿ ನಡೆದುಕೊಳ್ಳಬಹುದು, ಮತ್ತೊಂದು ಮಗದೊಂದು ಎನ್ನುವುದನ್ನು ಕುಮಾರಸ್ವಾಮಿ ಅವರಿಂದ ಸಿದ್ದರಾಮಯ್ಯ ಕಲಿಯುವ ಅವಶ್ಯಕತೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪದ ಕುರಿತು ಇಂದು(ಮಂಗಳವಾರ) ನಗರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಎಂ.ಸಿ ಸುಧಾಕರ್, ಕುಮಾರಸ್ವಾಮಿ ಅವರು ಹಿರಿಯರು, ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು. ಮುಖ್ಯಮಂತ್ರಿ ಸ್ಥಾನದಲ್ಲಿ ಯಾವ ರೀತಿ ನಡೆದುಕೊಳ್ಳಬಹುದು ಎಂಬುದನ್ನ ಕುಮಾರಸ್ವಾಮಿ ಅವರಿಂದ ಸಿದ್ದರಾಮಯ್ಯ ಕಲಿಯುವ ಅವಶ್ಯಕತೆ ಇಲ್ಲ. ಶೇ 40ರಷ್ಟು ಕಮಿಷನ್ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಕುರಿತು ಟೀಕೆ ಮಾಡಿರುವ ನಾವು ಬಹಳ ಜವಾಬ್ದಾರಿಯಿಂದ ಸರ್ಕಾರ ನಡೆಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಕುಮಾರಸ್ವಾಮಿ ಅವರು ಹೇಳಿದ ರೀತಿಯಲ್ಲಿ ವ್ಯವಸ್ಥೆ ಇಲ್ಲ. ಬಹುಶಃ ಅವರು ರಾಜಕೀಯ ಹೇಳಿಕೆ ಕೊಟ್ಟಿದ್ದಾರೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ವ್ಯಂಗ್ಯವಾಡಿದರು.
ನಾಲ್ಕಾಯ್ತು, ಕರ್ನಾಟಕ, ಗುಜರಾತ್ ಸೇರಿ ಇನ್ನೂ 6 ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ!
ರಾಜ್ಯ ಶಿಕ್ಷಣ ನೀತಿ ತರುವುದಾಗಿ ಹೇಳಿದ್ದೇವೆ
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಅಧಿಕಾರದಲ್ಲಿರುವ ಕಡೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿದೆ. ಆದರೆ, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಬದಲಿಗೆ ರಾಜ್ಯ ಶಿಕ್ಷಣ ನೀತಿ ತರುವುದಾಗಿ ಹೇಳಿದ್ದೇವೆ. ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿ ವಿದ್ಯಾರ್ಥಿಗಳು ಎರಡು ವರ್ಷ ವ್ಯಾಸಂಗ ಮಾಡಿದ್ದಾರೆ. ಹೀಗಾಗಿ ಬಹಳ ಯೋಚನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಈ ಕುರಿತು ಶಿಕ್ಷಣ ತಜ್ಞರೊಂದಿಗೆ ಚರ್ಚೆ ಮಾಡಿದ್ದೇವೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯನ್ನ ಗಮನದಲ್ಲಿ ಇರಿಸಿಕೊಂಡು ಬದಲಾವಣೆ ಯಾವ ರೀತಿ ತರಬೇಕೆಂದು ತೀರ್ಮಾನಿಸಲಾಗುವುದು ಎಂದರು.