ಮರ ಕಡಿತ ಕೇಸಲ್ಲಿ ಕ್ರಮ ಆಗಿದೆ: ಎಚ್‌ಡಿಕೆಗೆ ಸಚಿವ ಈಶ್ವರ ಖಂಡ್ರೆ ತಿರುಗೇಟು!

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ಸವಾಲು ಹಾಕಲು ಬಯಸುವುದಿಲ್ಲ. ಆದರೆ, ವಿರಾಜಪೇಟೆ, ತರೀಕೆರೆಯಲ್ಲಿ ಮರ ಕಡಿದ ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ.

Minister Eshwar Khandre Slams On HD Kumaraswamy gvd

ಬೆಂಗಳೂರು (ಜ.12): ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ಸವಾಲು ಹಾಕಲು ಬಯಸುವುದಿಲ್ಲ. ಆದರೆ, ವಿರಾಜಪೇಟೆ, ತರೀಕೆರೆಯಲ್ಲಿ ಮರ ಕಡಿದ ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಲಾಖೆ ಪಾರದರ್ಶಕವಾಗಿರಬೇಕು ಎಂಬುದನ್ನು ಬಯಸುತ್ತೇನೆ. 

ಕುಮಾರಸ್ವಾಮಿ ಸ್ಪಷ್ಟ ದಾಖಲೆ ಒದಗಿಸಿದರೆ ಖಂಡಿತ ತನಿಖೆಗೆ ಆದೇಶ ನೀಡಲಾಗುವುದು ಮತ್ತು ಕಾನೂನು ಕ್ರಮ ಜರುಗಿಸಲಾಗುವುದು ಎಂದರು. ಸಚಿವನಾದ ಬಳಿಕ ಅರಣ್ಯ ಭೂಮಿಯಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿಗಾಗಿ ಶಿಫಾರಸು ಮಾಡಿದ್ದ ಹಾಸನದ ಡಿಸಿಎಫ್ ಹರೀಶ್ ಅವರನ್ನು ಸಹ ಅಮಾನತು ಮಾಡಲಾಗಿದೆ. ಇದಲ್ಲದೇ, ಬೆಂಗಳೂರು ನಗರದ ಕೊತ್ತನೂರು ಬಳಿ ಸುಮಾರು 500 ಕೋಟಿ ರು. ಬೆಲೆಬಾಳುವ ಅರಣ್ಯ ಜಮೀನನ್ನು ಕಂದಾಯ ಭೂಮಿ ಎಂದು ಪರಿವರ್ತನೆ ಮಾಡಿದ್ದ ಉಪ ವಿಭಾಗಾಧಿಕಾರಿ ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನೇ ದಾಖಲಿಸಲಾಗಿದೆ. 

ಕಾಂಗ್ರೆಸ್ಸಿಗರು ಸನಾತನ ಧರ್ಮ ವಿರೋಧಿಗಳು: ಕೇಂದ್ರ ಸಚಿವ ಕ್ರಿಶನ್ ಪಾಲ್

ಈಗ ಹಾಸನದಲ್ಲಿ 66 ಎಕರೆ ಅರಣ್ಯವನ್ನು ಕಂದಾಯ ಜಮೀನು ಎಂದು ಮಂಜೂರು ಮಾಡಿರುವ ಎ.ಸಿ. ಜಗದೀಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸೂಚನೆ ನೀಡಿದ್ದೇನೆ. ಇಂತಹ ಹಲವು ಪ್ರಕರಣದಲ್ಲಿ ತಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಮಾಹಿತಿ ನೀಡಿದರು. ಇನ್ನು, ವಿರಾಜ ಪೇಟೆಯಲ್ಲಿನ ಪ್ರಕರಣ ಪ್ರಸ್ತಾಪಿಸಿದ್ದಾರೆ. ಐಎಫ್ಎಸ್ ಅಧಿಕಾರಿ ಚಕ್ರಪಾಣಿ ಮತ್ತು ಇತರರನ್ನು ಅಮಾನತು ಮಾಡಲಾಗಿದೆ. ಅವರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. ಈ ಸಂಬಂಧ ಇಲಾಖೆ ವಿಚಾರಣೆ ನಡೆಯುತ್ತಿದ್ದು, ವರದಿ ಇನ್ನೂ ಸಚಿವಾಲಯಕ್ಕೆ ಬಂದಿಲ್ಲ. ಬಂದ ಕೂಡಲೇ ಕ್ರಮ ಜರುಗಿಸಲಾಗುವುದು ಎಂದರು.

15ಕ್ಕೆ ಸಾರ್ವಜನಿಕವಾಗಿ ಜನ್ಮದಿನ ಆಚರಿಸುವುದಿಲ್ಲ: ಜ.15ರಂದು ತಮ್ಮ ಜನ್ಮದಿನವನ್ನು ಸಾರ್ವಜನಿಕವಾಗಿ ಆಚರಿಸಿಕೊಳ್ಳದಿರಲು ತೀರ್ಮಾನಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಜ್ಯದಲ್ಲಿ ಈ ವರ್ಷ ಬರದ ಛಾಯೆ ಆವರಿಸಿದ್ದು, ಕೊರೊನಾ ಸೋಂಕಿನ ಉಲ್ಭಣ ಕೂಡ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದು ಸೂಕ್ತವಲ್ಲ ಎಂದಿದ್ದಾರೆ.

ಬದುಕು ನರಕವಾಗಿಸುವ ನಶೆಗಳಿಂದ ದೂರವಿರಿ: ನಟಿ ಪೂಜಾಗಾಂಧಿ

ಇತ್ತೀಚೆಗಷ್ಟೇ ತಮ್ಮ ತಂದೆ ಡಾ. ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಜಿಲ್ಲೆಯ ಜನತೆ ಮತ್ತು ಅಭಿಮಾನಿಗಳು ಸೇರಿ ಐತಿಹಾಸಿಕಾಗಿ ಯಶಸ್ವಿಗೊಳಿಸಿದ್ದಾರೆ. ಅದಲ್ಲದೇ ಜ.14 ರಿಂದ 16ರ ವರೆಗೆ ಸ್ಥಳೀಯವಾಗಿ ಲಭ್ಯ ಇರುವುದಿಲ್ಲ. ಹಾಗಾಗಿ ಕಾರ್ಯಕರ್ತರು, ಅಭಿಮಾನಿಗಳು ನನ್ನ ಜನ್ಮದಿನದ ನಿಮಿತ್ತ ಅನಾವಶ್ಯಕವಾಗಿ ಹಣ ಖರ್ಚು ಮಾಡಿ ಹಾರ ತುರಾಯಿ, ಕೇಕ್ ಕತ್ತರಿಸಿ ವಿಜೃಂಭಣೆ ಮಾಡುವುದು, ಬ್ಯಾನರ್‌, ಕಟೌಟ್‌ಗಳನ್ನು ಸಾರ್ವಜನಿಕ ಸ್ಥಳದಲ್ಲಿ ಕಟ್ಟದಂತೆ ಕೂಡ ಮನವಿ ಮಾಡಿದ್ದಾರೆ.

Latest Videos
Follow Us:
Download App:
  • android
  • ios