ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಜೊತೆ ಮೈತ್ರಿ: ಜಿ.ಟಿ.ದೇವೇಗೌಡ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಜೊತೆ ಮೈತ್ರಿ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
ಮೈಸೂರು (ಸೆ.09): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಜೊತೆ ಮೈತ್ರಿ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು. ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಸೆ.6 ರಂದು 19 ಶಾಸಕರು, 7 ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಮುಖಂಡರ ಸಭೆಯಲ್ಲಿ ಎಚ್.ಡಿ. ದೇವೇಗೌಡರು, ಸಿ.ಎಂ. ಇಬ್ರಾಹಿಂ, ಎಚ್.ಡಿ. ರೇವಣ್ಣ ಸೇರಿ ಎಲ್ಲರೂ ಭಾಗಿದ್ದರು. ಸೆ.10 ರಂದು ನಡೆಯುವ ಜೆಡಿಎಸ್ ಸಮಾವೇಶದ ಬಗ್ಗೆ ಅಭಿಪ್ರಾಯ ಪಡೆಯಲು ಸಭೆ ಕರೆಯಲಾಗಿತ್ತು ಎಂದರು.
ಅಲ್ಲಿದ್ದ ಬಹುತೇಕ ಶಾಸಕರು, ಪರಿಷತ್ ಸದಸ್ಯರು ಕಾಂಗ್ರೆಸ್ ಪಕ್ಷದ ದಬ್ಬಾಳಿಕೆ ಬಗ್ಗೆ ಹೇಳಿದರು. ಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿದ್ದು, ಎಫ್ಐಆರ್ ದಾಖಲಾಗುತ್ತಿದೆ, ಅಧಿಕಾರಿಗಳಿಗೆ ವರ್ಗಾವಣೆ ಮಾಡುತ್ತಿದ್ದಾರೆ. ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ. ಗ್ಯಾರಂಟಿ ಹಿನ್ನೆಲೆ ಅಭಿವೃದ್ಧಿ ಕೆಲಸ ಕುಂಠಿತವಾಗುತ್ತಿದೆ. ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆಂದು ತಿಳಿಸಿದರು. ಹೀಗಾಗಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕು. ಈ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರ ಒಲವು ಎಂದು ಅವರು ಹೇಳಿದರು.
ಸ್ಟಾಲಿನ್ ಮೇಲಿನ ಮೋಹಕ್ಕೆ ತಮಿಳುನಾಡಿಗೆ ನೀರು: ಕಾಂಗ್ರೆಸ್ ವಿರುದ್ಧ ಅಶೋಕ್ ಆಕ್ರೋಶ
ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹೊಟ್ಟೆ ಉರಿಯಿಂದ ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಲೋಕಸಭಾ ಚುನಾವಣೆಗೆ ಒಟ್ಟಾಗಿ ಎದುರಿಸೋಣ ಅನ್ನೋದು ಎಲ್ಲರ ಒಮ್ಮತದ ಅಭಿಪ್ರಾಯವಾಗಿತ್ತು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಎಚ್.ಡಿ. ದೇವೇಗೌಡರು, ಅವತ್ತು ನಮಗೆ ಒಳ್ಳೆಯ ತೀರ್ಮಾನದ ಧೈರ್ಯ ನೀಡಿದ್ದರು ಎಂದರು. ಕುಮಾರಸ್ವಾಮಿ ಅವರಿಗೆ ಬಿಜೆಪಿ ಜೊತೆ ಯಾವುದೇ ವಿರೋಧ ಇಲ್ಲ. ಬಿಜೆಪಿ ಸಮರ್ಥ ಅಭ್ಯರ್ಥಿ ಎಲ್ಲಿ ಇದ್ದಾರೆ, ಜೆಡಿಎಸ್ ಸಮರ್ಥ ಅಭ್ಯರ್ಥಿ ಎಲ್ಲಿದ್ದಾರೆ ನೋಡಬೇಕು.
ಕೆಆರ್‌ಎಸ್ ಅಣೆಕಟ್ಟು ನೋಡಿದ್ರೆ ಹೊಟ್ಟೆ ಉರಿಯುತ್ತೆ: ಮಾಜಿ ಸಿಎಂ ಬೊಮ್ಮಾಯಿ
ಈ ರೀತಿ ಅಳತೆಗೋಲು ಅನುಸರಿಸಿ ನಿರ್ಧಾರ ಮಾಡಬೇಕು. ಸ್ಥಾನ ಹಂಚಿಕೆ ಅಳತೆಗೋಲಿನಿಂದ ಮಾಡಬೇಕು. ನಾನು ಕಾರ್ಯಕರ್ತರು, ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಹಿಂದೆ ಬಿಜೆಪಿ ಜೊತೆ ಹೋಗಿದಕ್ಕೆ ನನ್ನನ್ನೇ ಜನ ಸೋಲಿಸಿದ್ದರು. ಹುಣಸೂರಿನಲ್ಲಿ ನನ್ನನ್ನು ಸೋಲಿಸಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಈಗ ಯಾರು ವಿರೋಧ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ವಿರುದ್ಧ ಧಂಗೆ ಎದ್ದಿದ್ದಾರೆ ಎಂದು ಅವರು ಹೇಳಿದರು. ಸೆ.10 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದರು.