ಹಿಂದು ಧರ್ಮ ಒಡೆಯುತ್ತೇವೆ ಎಂಬುದು ಶುದ್ಧ ಸುಳ್ಳು. ಸಿದ್ದರಾಮಯ್ಯ ಯಾಕೆ ಹಿಂದು ಧರ್ಮ ಒಡೆಯುತ್ತಾರೆ. ಹಿಂದು ಧರ್ಮ ಒಡೆಯುವ ಪ್ರಶ್ನೆಯೇ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ತಿಳಿಸಿದರು.
ಮೈಸೂರು (ಸೆ.21): ಹಿಂದು ಧರ್ಮ ಒಡೆಯುತ್ತೇವೆ ಎಂಬುದು ಶುದ್ಧ ಸುಳ್ಳು. ಸಿದ್ದರಾಮಯ್ಯ ಯಾಕೆ ಹಿಂದು ಧರ್ಮ ಒಡೆಯುತ್ತಾರೆ. ಹಿಂದು ಧರ್ಮ ಒಡೆಯುವ ಪ್ರಶ್ನೆಯೇ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು. ಜನಗಣತಿ ಮೂಲಕ ಹಿಂದು ಧರ್ಮ ಒಡೆಯುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಜಾತಿ ಗಣತಿ ಮಾಡುತ್ತಿರುವುದು ಜಾತಿಗಳ ಸ್ಥಿತಿಗಳ ಅಧ್ಯಯನಕ್ಕಾಗಿ. ಧರ್ಮ ಒಡೆಯುವುದು ನಮ್ಮ ಕೆಲಸ ಅಲ್ಲ. ಅದು ಬಿಜೆಪಿಯ ಕೆಲಸ. ಇದಕ್ಕಾಗಿ ಬಿಜೆಪಿ ಸುಳ್ಳು ಹಬ್ಬಿಸುತ್ತಿದೆ ಎಂದು ಕಿಡಿಕಾರಿದರು.
ಯಾರಾದರು ಮತಾಂತರ ಆಗುತ್ತೇವೆ ಎಂದರೇ ಅದನ್ನ ತಡೆಯುವ ಹಕ್ಕು ಯಾರಿಗೂ ಇಲ್ಲ. ಅದು ಅವರವರ ಸ್ವಾತಂತ್ರ್ಯ. ಆ ಸ್ವಾತಂತ್ರ್ಯಕ್ಕೆ ಅಡ್ಡಿ ಮಾಡಲು ನಾವ್ಯಾರು? ಡಾ. ಅಂಬೇಡ್ಕರ್ ಅವರೇ ನಾನು ಹಿಂದುವಾಗಿ ಹುಟ್ಟಿದ್ದೇನೆ. ಹಿಂದುವಾಗಿ ಸಾಯಲ್ಲ ಎಂದಿದ್ದರು. ಕೆಲವರು ಅದನ್ನ ಪರಿಪಾಲನೆ ಮಾಡುತ್ತಿರಬಹುದು ಎಂದರು. ನಾವು ಹೊಸ ಜಾತಿಗಳನ್ನ ಸೃಷ್ಟಿ ಮಾಡುತ್ತಿಲ್ಲ. ಹೊಸ ಜಾತಿಗಳನ್ನ ಸೃಷ್ಟಿ ಮಾಡಲು ಸಾಧ್ಯ ಇದ್ಯಾ ಹೇಳಿ. ಮತಾಂತರ ಆಗಿದ್ದವರ ಮೂಲ ಜಾತಿಯನ್ನ ನಮೂದಿಸಿದ್ದೇವೆ ಅಷ್ಟೇ. ಅದರಲ್ಲಿ ಏನು ತಪ್ಪಿದೆ ಹೇಳಿ. ಬಿಜೆಪಿ ನಮ್ಮ ಎಲ್ಲಾ ಒಳ್ಳೆಯ ಕೆಲಸಗಳಿಗೆ ವಿವಾದ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಅದು ಅವರ ಮನಸ್ಥಿತಿ ಎಂದು ಅವರು ಹೇಳಿದರು.
ಗಣತಿಗೆ ವಿರೋಧವಿಲ್ಲ
ಜಾತಿ ಗಣತಿಗೆ ನಮ್ಮ ಸಚಿವ ಸಂಪುಟದ ಯಾವ ಸಚಿವ ವಿರೋಧವು ಇಲ್ಲ. ಸಚಿವ ಸಂಪುಟದಲ್ಲಿ ಯಾವ ಗೊಂದಲವು ಆಗಿಲ್ಲ. ಹೊರಗಡೆ ಜಾತಿ ಸಭೆಗಳು ಮಾಡುತ್ತಿರುವುದು ಜಾತಿ ಗಣತಿಯ ವಿರೋಧಕ್ಕ ಅಲ್ಲ. ತಮ್ಮ ಜಾತಿಯನ್ನ ಯಾವ ನಿರ್ಧಿಷ್ಟ ಹೆಸರಿನಲ್ಲಿ ಬರೆಸಬೇಕೆಂದು ಜಾಗೃತಿ ಮೂಡಿಸಲು ಸಭೆಗಳು ನಡೆಯುತ್ತಿವೆ. ಆ ರೀತಿಯ ಸಭೆಗಳು ತಪ್ಪಲ್ಲ ಎಂದು ಅವರು ತಿಳಿಸಿದರು.
