ಬಿಜೆಪಿ-ಜೆಡಿಎಸ್ ಸರ್ವಾಧಿಕಾರಿ ನಡೆಯನ್ನು ಜನರು ತಿರಸ್ಕರಿಸಿದ್ದಾರೆ: ಸಚಿವ ಮಹದೇವಪ್ಪ

ಈ‌ ಚುನಾವಣೆಯಲ್ಲಿ ‌ನೇರವಾಗಿ ಜನರು ಉತ್ತರ ಕೊಟ್ಟಿದ್ದಾರೆ. ಇಲ್ಲಸಲ್ಲದ ಆರೋಪ ಮಾಡಬೇಡಿ, ಪ್ರಾಮಾಣಿಕ ವ್ಯಕ್ತಿಗೆ ಮಸಿ ಬಳಿಯಬೇಡಿ. ಸಿಎಂ, ಡಿಸಿಎಂ ಎಲ್ಲರ ಪರಿಶ್ರಮದಿಂದ ಫಲಿತಾಂಶ ಬಂದಿದೆ ಎಂದು ಹೇಳಿದ ಸಚಿವ ಎಚ್.ಸಿ.ಮಹದೇವಪ್ಪ 

Minister HC Mahadevappa Slams BJP JDS Leaders grg

ಹಾಸನ(ನ.23):  ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಜೊತೆಗೆ ಸ್ಪರ್ಧೆ ಮಾಡಿತ್ತು. ಸುಳ್ಳನ್ನು ಸತ್ಯ ಮಾಡಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿಗೊಳಿಸಿ ಮತ್ತೊಮ್ಮೆ ಆಪರೇಷನ್‌ ಕಮಲ ಮಾಡಿ ಸರ್ಕಾರ ರಚಿಸುವ ಉತ್ಸಾಹದಲ್ಲಿ ಇದ್ದರು. ಎಲ್ಲಾ ಸುಳ್ಳನ್ನು ಬಿತ್ತರಿಸಿ ಸತ್ಯ ಮಾಡಲು ಹೊರಟಿದ್ರು. ಬಿಜೆಪಿ-ಜೆಡಿಎಸ್ ಅವರ ಕೀಳುಮಟ್ಟದ ನಡೆ, ಸರ್ವಾಧಿಕಾರಿ ನಡೆಯನ್ನು ಜನರು ತಿರಸ್ಕಾರ ಮಾಡಿದ್ದಾರೆ. ಜನರು ನಮಗೆ ಬೆಂಬಲ, ಆಶೀರ್ವಾದ ‌ಕೊಟ್ಟಿದ್ದಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಈ‌ ಚುನಾವಣೆಯಲ್ಲಿ ‌ನೇರವಾಗಿ ಜನರು ಉತ್ತರ ಕೊಟ್ಟಿದ್ದಾರೆ. ಇಲ್ಲಸಲ್ಲದ ಆರೋಪ ಮಾಡಬೇಡಿ, ಪ್ರಾಮಾಣಿಕ ವ್ಯಕ್ತಿಗೆ ಮಸಿ ಬಳಿಯಬೇಡಿ. ಸಿಎಂ, ಡಿಸಿಎಂ ಎಲ್ಲರ ಪರಿಶ್ರಮದಿಂದ ಫಲಿತಾಂಶ ಬಂದಿದೆ ಎಂದು ಹೇಳಿದ್ದಾರೆ. 

ಕಾಂಗ್ರೆಸ್ ಗೆಲುವು ನೋಡಲಾಗದೇ ಟಿವಿ ಒಡೆದು ಹಾಕಿದ ಬಿಜೆಪಿ ಕಾರ್ಯಕರ್ತ!

ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಮಾಡಲು ಅವರ ಅಭಿಮಾನಿಗಳು ಭೇಟಿ ಮಾಡಿ ಕೇಳಿದರು. ಇದು ಸರ್ಕಾರ, ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ. ಸ್ವಾಭಿಮಾನಿ ಸಂಘದ ಸದಸ್ಯರು ಸಮಾವೇಶ ಮಾಡಲು ಹೊರಟಿದ್ದಾರೆ. ಅವರಿಗೆ ಬೆಂಬಲ ಕೊಡಲು ನಾವು ಸಿದ್ದರಿದ್ದೇವೆ. ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನೊಳಗೊಂಡು ಸ್ವಾಭಿಮಾನಿ ಸಮಾವೇಶ ಮಾಡುತ್ತಿದ್ದೇವೆ. ಸಾಮಾಜಿಕ ಚಳುವಳಿ ಸಂಘಟನೆಗೆ ಒತ್ತು‌ ಕೊಡಲು ಸಮಾವೇಶ ಮಾಡುತ್ತಿದ್ದೇವೆ. ಈ‌ ಹಿಂದೆ ಅಹಿಂದ ಸಮಾವೇಶ ಮಾಡಿದ್ದೆವು. ಅದೇ ರೀತಿ ಸ್ವಾಭಿಮಾನಿ ಸಮಾವೇಶ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಂಘಟನೆಯಿಂದ ಸಮಾವೇಶ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. 

ಸಿದ್ದರಾಮಯ್ಯ ಅವರು ಹದಿನಾಲ್ಕು ಬಜೆಟ್ ಕೊಟ್ಟಿದ್ದಾರೆ. ಅಂತಹ ಮಹಾನ್ ನಾಯಕನಿಗೆ ಬೆಂಬಲ ಹಾಗೂ ಧನ್ಯವಾದ ಹೇಳಲು ಸಮಾವೇಶ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರೇ ಒಂದು ಶಕ್ತಿ. ರಾಜಕೀಯ ಕಾರ್ಯಕ್ರಮಗಳು ಈ ಸಮಾವೇಶಕ್ಕೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಸಿದ್ದು, ಡಿಕೆಶಿ ಎಲ್ಲರೂ ಒಗ್ಗಟ್ಟಾಗಿದ್ದಕ್ಕೆ ಕಾಂಗ್ರೆಸ್‌ಗೆ ಗೆಲುವು: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ:  ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಸೇರಿದಂತೆ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂಬ ಕಾರ್ಯಕರ್ತರ ಛಲದಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯ ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ ಅವರು, ಮೂರು ಕ್ಷೇತ್ರಗಳ ಗೆಲುವಿಗಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿದಂತೆ ಸಚಿವರು, ಶಾಸಕರು, ಕಾರ್ಯಕರ್ತರು ಒಗ್ಗಟ್ಟಾಗಿದ್ದರಿಂದ ನಮ್ಮ ಅಭ್ಯರ್ಥಿಗಳಿಗೆ ಗೆಲುವಾಗಿದೆ ಎಂದು ತಿಳಿಸಿದರು.

ವಿಪಕ್ಷಗಳು ಮುಡಾ, ವಕ್ಫ್‌ ಎಂದು ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮಾಡಿದ್ದರು, ಆದರೆ ಮತದಾರ ಬಾಂಧವರು ಅವುಗಳನ್ನೆಲ್ಲ ಅಲಕ್ಷಿಸಿ ಕೈ ಹಿಡಿದಿದ್ದಾರೆ. ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಂಡಿರುವ ಪಂಚ ಗ್ಯಾರಂಟಿಗಳಿಂದಾಗಿಯೂ ಮತದಾರರು ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದಾರೆಂದು ಎಂದು ಜೇವರ್ಗಿ ಕಾಂಗ್ರೆಸ್‌ ಶಾಸಕ ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತೊಮ್ಮೆ ವಿಫಲ ನಾಯಕ ಎಂಬುದು ಸಾಬೀತು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಬಿಜೆಪಿ ಜೆಡಿಎಸ್ ಸುಳ್ಳನ್ನ ಸತ್ಯ ಮಾಡಲು ಹೊರಟಿದ್ರು, ಅದು ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ಸದಾ ಜ‌ನರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ರಾಜಕೀಯ ಕುತಂತ್ರಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಈ ಚುನಾವಣೆಯಲ್ಲಿ ಜನರೇ ತಿರಸ್ಕರಿಸಿದ್ದಾರೆ. ವಾಲ್ಮೀಕಿ, ವಕ್ಫ್ ಹಾಗೂ ಮುಡಾ ವಿಚಾರಕ್ಕೆ ಜನರು ಮನ್ನಣೆ ಕೊಟ್ಟಿಲ್ಲ ಎಂದು ಹೇಳಿದ್ದಾರೆ. 

ಮುಡಾ ವಿಚಾರಕ್ಕೆ ಪಾದಯಾತ್ರೆ ಸಹ ಮಾಡಿದ್ರು. ವಕ್ಫ್‌ ವಿಚಾರವಾಗಿ ಧರಣಿ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಚುನಾವಣೆಯ ಫಲಿತಾಂಶ ಉತ್ತರ ಕೊಟ್ಟಿದೆ. ಈ ಸರ್ಕಾರದ ಪರವಾಗಿ ಜನರು ತೀರ್ಪು ಕೊಟ್ಟಿದ್ದಾರೆಂದು ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ. 

Latest Videos
Follow Us:
Download App:
  • android
  • ios