ದೇವರು ಧರ್ಮವನ್ನು ಮುಂದಿಟ್ಟುಕೊಂಡು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಬಿಜೆಪಿ: ಸಚಿವ ಮಹದೇವಪ್ಪ ಆಕ್ರೋಶ
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಅಸ್ಸಾಂ ಮಾರ್ಗವಾಗಿ ಚಲಿಸುತ್ತಿರುವ ಭಾರತ ಐಕ್ಯತಾ ಯಾತ್ರೆಗೆ ಬೆದರಿ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತಿರುವ ಬಿಜೆಪಿಗರು, ಕೆಲವೆಡೆ ದೇವಸ್ಥಾನ ಪ್ರವೇಶಕ್ಕೆ ತಡೆ ಒಡ್ಡಿದರೆ ಇನ್ನೊಂದು ಕಡೆ ಸುಖಾ ಸುಮ್ಮನೇ ಎಫ್ಐರ್ ದಾಖಲಿಸಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು (ಜ.25): ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಅಸ್ಸಾಂ ಮಾರ್ಗವಾಗಿ ಚಲಿಸುತ್ತಿರುವ ಭಾರತ ಐಕ್ಯತಾ ಯಾತ್ರೆಗೆ ಬೆದರಿ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತಿರುವ ಬಿಜೆಪಿಗರು, ಕೆಲವೆಡೆ ದೇವಸ್ಥಾನ ಪ್ರವೇಶಕ್ಕೆ ತಡೆ ಒಡ್ಡಿದರೆ ಇನ್ನೊಂದು ಕಡೆ ಸುಖಾ ಸುಮ್ಮನೇ ಎಫ್ಐರ್ ದಾಖಲಿಸಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಅವಧಿಯ ಭಾರತ ಐಕ್ಯತಾ ಯಾತ್ರೆಯು ತಾವುದೇ ತೊಂದರೆ ಇಲ್ಲದೇ ಮುಗಿದಿದ್ದಾಗಲೂ ಕೂಡಾ ಯಾತ್ರೆಯಲ್ಲಿ ಹಿಂಸೆಗೆ ಪ್ರಚೋದನೆ ನೀಡಲಾಗಿದೆ ಎನ್ನುವ ಅಸ್ಸಾಂ ಮುಖ್ಯಮಂತ್ರಿಗಳ ಹೇಳಿಕೆಯು ಅತ್ಯಂತ ಬಾಲಿಷತನದಿಂದ ಕೂಡಿದೆ.
ಸರ್ಕಾರ ನಮ್ಮದಿರಲಿ, ಯಾರದ್ದೇ ಇರಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಅಭಿಪ್ರಾಯ ಹೇಳುವುದು, ಸಮಾವೇಶ ನಡೆಸುವುದು ಮತ್ತು ಆರೋಗ್ಯಕರವಾಗಿ ಪ್ರತಿರೋಧ ವ್ಯಕ್ತಪಡಿಸುವುದು ಸಂವಿಧಾನ ನಮಗೆ ನೀಡಿದ ಹಕ್ಕಾಗಿದೆ. ಆದರೆ ದೇವರು ಧರ್ಮವನ್ನು ಮುಂದಿಟ್ಟುಕೊಂಡು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಬಿಜೆಪಿಗರ ಈ ನಡೆಯನ್ನು ಒಪ್ಪಲು ಸಾಧ್ಯವಿಲ್ಲ. ಈ ಹಿನ್ನೆಲೆ ಪ್ರಜಾಪ್ರಭುತ್ವ ವ್ಯವಸ್ಥೆಯ ಒಳಗೆ ಆಡಳಿತ ನಡೆಸುತ್ತಿರುವ ಪ್ರಧಾನಿಗಳು ಮತ್ತು ಗೃಹ ಸಚಿವರು ಕೂಡಲೇ ಮಧ್ಯ ಪ್ರವೇಶಿಸಿ ಭಾರತ ಐಕ್ಯತಾ ಯಾತ್ರೆಯು ಸುಗಮವಾಗಿ ಜರುಗಲು ಅವಕಾಶ ಮಾಡಿಕೊಡಬೇಕು ಮತ್ತು ಈ ಯಾತ್ರೆಗೆ ಅಗತ್ಯ ರಕ್ಷಣೆ ಒದಗಿಸಬೇಕು ಅವರು ಆಗ್ರಹಿಸಿದ್ದಾರೆ.
ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆ: ಸಿದ್ದರಾಮಯ್ಯ ಹೇಳಿದ್ದೇನು?
ಅಂಬೇಡ್ಕರ್ ಆಶಯ ಪ್ರಕಾರ ಸಂವಿಧಾನ ರಕ್ಷಣೆ ಅಗತ್ಯ: ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ಪೂರಕವಾಗಿ ಸಂವಿಧಾನವನ್ನು ರಕ್ಷಣೆ ಮಾಡುವ ಕಾರ್ಯ ಇಂದು ನಡೆಯಬೇಕಾಗಿದ್ದು, ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಅಂಬೇಡ್ಕರ್ ಆಶಯದ ಪ್ರಕಾರ ನಡೆದುಕೊಳ್ಳುವ ಕೆಲಸವಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ ಮಹದೇವಪ್ಪ ಹೇಳಿದರು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ತಾಲೂಕು ಮಟ್ಟದ ಡಾ. ಬಿ.ಆರ್.ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ನಮ್ಮ ಪ್ರೇರಣಾ ಶಕ್ತಿಯಾಗಿದ್ದು, ಅವರನ್ನು ಪೂಜಿಸುವುದಷ್ಟೇ ಅಲ್ಲ, ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ ಅವರು, ವೈಜ್ಞಾನಿಕ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು, ಧಾರ್ಮಿಕ ವಿಚಾರಗಳು ವೈಯಕ್ತಿಕವಾಗಿದ್ದು, ಸರ್ಕಾರದ ಆಯ್ಕೆಯಾಗಿರುವುದಿಲ್ಲ. ಸೌಹಾರ್ದತೆಯನ್ನು ಕಾಪಾಡುವುದು ನಮ್ಮ ಆಶಯವಾಗಿದ್ದು, ಸಂವಿಧಾನ ಪೀಠಿಕೆಯನ್ನು ಈ ಕಾರಣಕ್ಕಾಗಿಯೇ ಶಾಲೆಗಳಲ್ಲಿ ಓದಲು ಹೇಳಿದ್ದು, ಅದರ ಅರ್ಥವನ್ನೂ ಗ್ರಹಿಸುವ ಕೆಲಸ ಮಾಡಬೇಕು ಎಂದರು. ಜಿಂದಾಬಾದ್, ಜೈಕಾರಗಳು ಸರ್ವಾಧಿಕಾರವನ್ನು ಸೃಷ್ಟಿಸುತ್ತಿದ್ದು, ಇದು ಸಂವಿಧಾನಕ್ಕೆ ಅಪಾಯ ತಂದೊಡ್ಡುತ್ತದೆ.
ರಾಜ್ಯದಲ್ಲಿ ಪಶು ವೈದ್ಯರ ಕೊರತೆ ನೀಗಿಸಲು ಕ್ರಮ: ಸಚಿವ ದಿನೇಶ್ ಗುಂಡೂರಾವ್
ಭಾರತ ಬಹುತ್ವದ ದೇಶ ಎಂಬುದು ಎಲ್ಲರಿಗೂ ಅರ್ಥವಾಗಬೇಕು, ಮೂಢನಂಬಿಕೆ ವಿರುದ್ಧ ಹೋರಾಟ, ಮಹಿಳೆಯರು, ದಲಿತರು ಹಿಂದುಳಿದವರ ಏಳಿಗೆಯ ಕುರಿತು ಗಮನಹರಿಸಬೇಕು ಎಂದರು. ಸಂವಿಧಾನವನ್ನು ನಾವು ರಕ್ಷಣೆ ಮಾಡಿದರೆ, ಅದು ನಮ್ಮನ್ನು ರಕ್ಷಣೆ ಮಾಡುತ್ತದೆ ಎಂದವರು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಇಂದು ಅಂಬೇಡ್ಕರ್ ಭವನ ಸಹಿತ ಸರ್ಕಾರಿ ಕಟ್ಟಡಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಗಳು ಇಲ್ಲದ ಕಾರಣ ಸಮಸ್ಯೆಗಳು ಉಂಟಾಗುತ್ತಿದ್ದು, ಎಲ್ಲ ಸರ್ಕಾರಿ ಕಚೇರಿಗಳು ಒಂದೇ ಸೂರಿನಲ್ಲಿ ನಿರ್ಮಾಣವಾಗುವಂಥ ವ್ಯವಸ್ಥೆ ಕಲ್ಪಿಸಿದರೆ, ಪಾರ್ಕಿಂಗ್ ವ್ಯವಸ್ಥೆಗೂ ಸರಿಯಾದ ಯೋಜನೆ ರೂಪಿಸಿದರೆ ಅನುಕೂಲವಾಗುತ್ತದೆ ಎಂದರು.