Asianet Suvarna News Asianet Suvarna News

ಯಡಿಯೂರಪ್ಪನವರೇ ಎಚ್ಚರಿಕೆಯಿಂದ ಮಾತನಾಡಿ: ಸಚಿವ ಎಚ್‌.ಕೆ.ಪಾಟೀಲ್‌

3 ಸಾವಿರ ಕೋಟಿ ರು. ನೆರವು ನೀಡುವಂತೆ ಕೇಂದ್ರಕ್ಕೆ ನಾವು (ರಾಜ್ಯ ಸರ್ಕಾರ) ಕೋರಿದ್ದರೂ ಕೇಂದ್ರ ಸ್ಪಂದಿಸುತ್ತಿಲ್ಲ ಎಂದು ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಖಾತೆ ಸಚಿವರಾದ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Minister HK Patil Slams On BS Yediyurappa At Yadgir gvd
Author
First Published Nov 9, 2023, 4:23 AM IST

ಶಹಾಪುರ (ನ.09): ಬರದಿಂದ ರಾಜ್ಯ ತತ್ತರಿಸಿದೆ, 37 ಸಾವಿರ ಕೋಟಿ ರು. ಕೃಷಿ ಹಾನಿಯಾಗಿದೆ. ತಕ್ಷಣವೇ 3 ಸಾವಿರ ಕೋಟಿ ರು. ನೆರವು ನೀಡುವಂತೆ ಕೇಂದ್ರಕ್ಕೆ ನಾವು (ರಾಜ್ಯ ಸರ್ಕಾರ) ಕೋರಿದ್ದರೂ ಕೇಂದ್ರ ಸ್ಪಂದಿಸುತ್ತಿಲ್ಲ ಎಂದು ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಖಾತೆ ಸಚಿವರಾದ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಐತಿಹಾಸಿ ಪ್ರದೇಶದ ವೀಕ್ಷಣೆಗೆಂದು ಬುಧವಾರ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಶಿರವಾಳಕ್ಕೆ ಆಗಮಿಸಿದ್ದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು.

ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಮಾಜಿ ಸಿಎಂ ಬಿಎಸ್‌ವೈ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಬರದಿಂದ ತತ್ತರಿಸಿದ ನಮ್ಮ ರಾಜ್ಯಕ್ಕೆ ತಕ್ಷಣಕ್ಕೆ 3 ಸಾವಿರ ಕೋಟಿ ರು. ತಕ್ಷಣ ನೀಡುವಂತೆ ಕೇಂದ್ರಕ್ಕೆ ಕೋರಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲೇ ಬೀಡು ಬಿಟ್ಟು ನಾಲ್ಕು ಬಾರಿ ಪ್ರಧಾನಿ ಭೇಟಿಗೆ ಅವಕಾಶ ಕೋರಿದರೂ ಸಿಗುತ್ತಿಲ್ಲ, ಸಚಿವ ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ ತಂಡವು ಪ್ರಧಾನಿ ಮೋದಿ ಸೇರಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಕೃಷಿ ಮಂತ್ರಿ ಭೇಟಿಗೆ ಪ್ರಯತ್ನಿಸಿದರೂ ಭೇಟಿ ಆಗಲಿಲ್ಲ ಎಂದು ಸಚಿವ ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಿ: ಸಚಿವ ಎಂ.ಸಿ.ಸುಧಾಕರ್

ನೈಯಾಪೈಸೆ ಬಿಡುಗಡೆ ಆಗಿಲ್ಲ: ಮುಂಗಾರು ಸಂಪೂರ್ಣ ಹಾಳಾಗಿದ್ದರೂ ನೈಯಾಪೈಸೆ ಪರಿಹಾರ ಕೇಂದ್ರದಿಂದ ಬಿಡುಗಡೆ ಮಾಡಿಲ್ಲ. ಆರ್ಥಿಕ ಅಡಚಣೆ ನಡುವೆಯೂ ನಮ್ಮ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಮೂಲಕ ಶೇ.92-93 ರಷ್ಟು ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಲ್ಲಿ ಹಣ ನೀಡಿದೆ ಎಂದ ಸಚಿವ ಎಚ್‌.ಕೆ. ಪಾಟೀಲ್‌, ನಮ್ಮ ರಾಜ್ಯದ್ದಲ್ಲ, ನಿಮ್ಮ (ಬಿಜೆಪಿ) ಕೇಂದ್ರ ಸರ್ಕಾರದ ಖಜಾನೆ ಖಾಲಿಯಾಗಿದೆ. ಯಡಿಯೂರಪ್ಪನವರೇ ಈ ಬಗ್ಗೆ ಎಚ್ಚರಿಕೆಯಿಂದ ಮಾತನಾಡಿ ಎಂದು ತಾಕೀತು ಮಾಡಿದರು. ಆರ್ಥಿಕ ಅಡಚಣೆ ಆಗಿದ್ದರೂ ಸೂಕ್ತ ವ್ಯವಸ್ಥೆ ಮಾಡಿಕೊಂಡು, ಜನರಿಗೆ ಕೊಟ್ಟ ಭರವಸೆಯನ್ನು ನಮ್ಮ ರಾಜ್ಯ ಸರ್ಕಾರ ಪೂರ್ಣಗೊಳಿಸುತ್ತದೆ, ಕೇಂದ್ರದಂತೆ ಮಲತಾಯಿ ಧೋರಣೆ ಮಾಡುವುದಿಲ್ಲ ಎಂದರು.

ಬಿಜೆಪಿ ಅಧಿಕಾರಕ್ಕಾಗಿ ಯಾವ ಮಟ್ಟಕ್ಕಾದ್ರೂ ಇಳಿಬೋದು: ಸಚಿವ ಸಂತೋಷ್‌ ಲಾಡ್‌

ಎಂಪಿಗಳಿಗೆ ನಾಚಿಕೆಯಾಗಬೇಕು: ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿದೆ. ಈ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ. ಬರ ಇಲ್ಲವೆಂದು ವರದಿ ಕೊಡುತ್ತೀರೇನು? ಎಂದು ಕೇಂದ್ರಕ್ಕೆ ಟೀಕಿಸಿದ ಪಾಟೀಲ್‌, ದೆಹಲಿಗೆ ಹೋಗಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಹೇಳಲು ಸಂಸದರಿಗೆ ಆಗುವುದಿಲ್ಲವೇ, ನಾಚಿಕೆಯಾಗಬೇಕು ಎಂದರು. ರಾಜ್ಯ ಬಿಜೆಪಿ ಈಗ ಬರ ಅಧ್ಯಯನ ನಡೆಸುತ್ತದೆ ಎನ್ನುತ್ತಿರುವುದು ಹಾಸ್ಯಾಸ್ಪದ. ಬರ ಅಧ್ಯಯನ ಹೆಸರಲ್ಲಿ ಅನುದಾನ ಬಿಡುಗಡೆ ವಿಳಂಬ ಪ್ರಯತ್ನದ ಭಾಗವಿದು ಎಂದು ಷಚಿವ ಎಚ್‌.ಕೆ. ಪಾಟೀಲ್‌ ತರಾಟೆಗೆ ತೆಗೆದುಕೊಂಡರು.

Follow Us:
Download App:
  • android
  • ios