ಎನ್‌ಕೌಂಟರ್‌ ಹೇಳಿಕೆ ಜೋಶಿಗೆ ಶೋಭೆ ತರದು: ಸಚಿವ ಎಚ್‌.ಕೆ.ಪಾಟೀಲ್‌

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರನ್ನು ಬೆಳಗಾವಿ ಪೊಲೀಸರು ಎನ್‌ಕೌಂಟರ್‌ ಮಾಡುತ್ತಿದ್ದರಯ ಎನಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೀಡಿರುವ ಹೇಳಿಕೆ ಅವರಿಗೆ ಶೋಭೆ ತರದು ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು. 

Minister HK Patil Slams On Pralhad Joshi At Belagavi gvd

ಬೆಳಗಾವಿ (ಡಿ.24): ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರನ್ನು ಬೆಳಗಾವಿ ಪೊಲೀಸರು ಎನ್‌ಕೌಂಟರ್‌ ಮಾಡುತ್ತಿದ್ದರಯ ಎನಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೀಡಿರುವ ಹೇಳಿಕೆ ಅವರಿಗೆ ಶೋಭೆ ತರದು ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ಕೊನೆಯ ದಿನ ಪರಿಷತ್ತಿನಲ್ಲಿ ಆಗಿರುವ ಘಟನೆ ನಾವೆಲ್ಲರೂ ತಲೆತಗ್ಗಿಸುವಂತಹದ್ದು. ಅದಾದ ಬಳಿಕ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿದರು. ಅದರ ಬಗ್ಗೆ ಏಗ ಏನೇನೂ ಆರೋಪ ಮಾಡುತ್ತಿದ್ದಾರೆ. 

ಈ ಸಂದರ್ಭದಲ್ಲಿ ನಾನು ಏನೂ ಪ್ರತಿಕ್ರಿಯೆ ನೀಡಲ್ಲ. ಈಗಾಗಲೇ ಪೊಲೀಸರು ವಿವರಣೆ ಕೊಟ್ಟಿದ್ದಾರೆ ಎಂದು ಹೇಳಿದರು. ಒಂದು ಸ್ಥಳಕ್ಕೆ ಯಾಕೆ ಕರೆದುಕೊಂಡು ಹೋಗಿದ್ದರು ಎನ್ನುವುದಕ್ಕೆ ಪೊಲೀಸರು ವಿವರಣೆ ಕೊಟ್ಟಿದ್ದಾರೆ. ಎನ್ಕೌಂಟರ್‌ ಶಬ್ಧ ಬಳಕೆ ಮಾಡುವುದು ಪ್ರಹ್ಲಾದ ಜೋಶಿಗೆ ಶೋಭೆ ತರಲ್ಲ ಎಂದರು. ಸಿಟಿ ರವಿ ಹಲ್ಲೆಗೆ ಯತ್ನಿಸಿದ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳದಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಚಿವರು, ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಷ್ಟೇ ಹೇಳಿದರು.

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಸಿದ್ಧತೆ: ‘ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಯೋಜಿಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ಕಾರ್ಯಕ್ರಮದ ಸಿದ್ಧತೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 1924ರಲ್ಲಿ ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷಸ್ಥಾನ ವಹಿಸಿ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. 

ಉಪೇಂದ್ರ 'ಯುಐ' ವರ್ಲ್ಡ್ ನೋಡಲು ಎಂಟ್ರಿ ಕೊಟ್ರು ಕಿಚ್ಚ ಸುದೀಪ್- ಯಶ್: ತಬ್ಬಿಕೊಂಡ ಫೋಟೋ ವೈರಲ್

ಈ ಹೆಮ್ಮೆಯ ಕ್ಷಣವನ್ನು ಆಚರಿಸುವ ಅವಕಾಶ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸಿಗರಿಗೆ ಮಾತ್ರ ಸಿಕ್ಕಿದೆ. ಹೀಗಾಗಿ ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾದ ಸ್ಥಳದಿಂದಲೇ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರಜಾಧ್ವನಿಯಾತ್ರೆ ಆರಂಭಿಸಿದೆ. ಗಾಂಧಿ ಬಾವಿಯಿಂದ ನೀರು ತೆಗೆದು ರಸ್ತೆ ತೊಳೆದು ಸ್ವಚ್ಛ ಮಾಡಿದೆ. ಗೃಹಜ್ಯೋತಿ ಗ್ಯಾರಂಟಿ ಯೋಜನೆಯನ್ನು ಅಲ್ಲಿಂದಲೇ ಘೋಷಣೆ ಮಾಡಿ ನಮ್ಮ ಹೋರಾಟ ಆರಂಭಿಸಿದೆ. ಆ ಮೂಲಕ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತರಲು ಯಶಸ್ವಿಯಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಶತಮಾನೋತ್ಸವ ಕ್ಷಣದಲ್ಲಿ ಇತಿಹಾಸವನ್ನು ಮೆಲುಕು ಹಾಕುವ ಅದೃಷ್ಟ ನಮ್ಮದಾಗಿದೆ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಂಭ್ರಮ ಆಚರಿಸುತ್ತಿದ್ದೇವೆ. ಗಾಂಧೀಜಿ ಅವರು ಅಂದು ಕುಳಿತ ಸ್ಥಾನದಲ್ಲಿ ಇಂದು ನಮ್ಮವರೇ ಆದ ಖರ್ಗೆ ಅವರು ಕೂತಿದ್ದಾರೆ. ನಾವು ಯಾವ ರೀತಿ ಪಕ್ಷ ಕಟ್ಟಬೇಕು ಎಂದು ಹೊಸ ಅಧ್ಯಾಯ ಆರಂಭಿಸಿ 2028ರ ಚುನಾವಣೆಯಲ್ಲಿ ಪುನಃ ಪಕ್ಷ ಜಯಗಳಿಸುವಂತೆ ಮುನ್ನುಡಿ ಬರೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.

Latest Videos
Follow Us:
Download App:
  • android
  • ios