Asianet Suvarna News Asianet Suvarna News

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಿದೆ: ಹೆಚ್‌ಡಿಕೆಗೆ ಸುಧಾಕರ್‌ ಟಾಂಗ್‌

ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25 ರಷ್ಟು ಹೆಚ್ಚು ಬಿತ್ತನೆ ಆಗಿದೆ| ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ| ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ ಹೆಚ್‌ಡಿಕೆ

Minister K Sudhakar Reacts On Former CM H D Kumaraswamy Statement
Author
Bengaluru, First Published Aug 20, 2020, 4:04 PM IST

ಬೆಂಗಳೂರು(ಆ.20): ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಟ್ವೀಟ್‌ ಮೂಲಕ ರಾಜ್ಯ ಸರ್ಕಾರಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಗ್ರಹಿಸಿದ್ದಾರೆ. 

 

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದ್ದಾರೆ. 

ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದೇನಿದ್ರು ಏಕ್ ಮಾರ್ ದೋ ತುಕ್ಡ ಕ್ರಮ: ಸಿ.ಟಿ.ರವಿ

ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25 ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. 

ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ. 

 

ಕುಮಾರಸ್ವಾಮಿ ಟ್ವೀಟ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು ಬಿಟ್ಟ ಬಾಣ ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು ಎಂದು ಹೇಳುವ ಮೂಲಕ ಹೆಚ್‌ಡಿಕೆ ಟಾಂಗ್‌ ಕೊಟ್ಟಿದ್ದಾರೆ. 
 

Follow Us:
Download App:
  • android
  • ios