* ರಾಜೀನಾಮೆ ನೀಡುವುದಿಲ್ಲ ಎಂದು ಜಾರಕಿಹೊಳಿ ಸ್ಪಷ್ಪಪಡಿಸಿದ್ದಾರೆ * ರಮೇಶ ಸ್ಥಾನದಲ್ಲಿ ಯಾರೇ ಇದ್ದರೂ ಇದೇ ಪರಿಸ್ಥಿತಿ ಉದ್ಭವವಾಗುತ್ತಿತ್ತು * ಇದಕ್ಕೆಲ್ಲ ವಿಶೇಷ ಅರ್ಥ ಕಲ್ಪಿಸುವುದು ಬೇಡ  

ಬೆಂಗಳೂರು(ಜೂ.27):ರಮೇಶ್‌ ಜಾರಕಿಹೊಳಿಗೆ ಕೆಲ ಬೆಳವಣಿಗೆಗಳಿಂದ ನೋವಾಗಿದೆ. ಅವರ ಸ್ಥಾನದಲ್ಲಿ ಯಾರೇ ಇದ್ದರೂ ಇದೇ ಪರಿಸ್ಥಿತಿ ಉದ್ಭವವಾಗುತ್ತಿತ್ತು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವ ಸುಧಾಕರ್‌ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಜಾರಕಿಹೊಳಿ ಹೇಳಿಕೆ ನೀಡಿದ್ದಾರಲ್ಲಾ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ರಾಜೀನಾಮೆ ನೀಡುವುದಿಲ್ಲ ಎಂದು ಜಾರಕಿಹೊಳಿ ಸ್ಪಷ್ಪಪಡಿಸಿದ್ದಾರೆ ಎಂದು ತಿಳಿಸಿದರು.

ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ: ಸುಧಾಕರ್‌ ಹೇಳಿದ್ದಿಷ್ಟು

ರಮೇಶ ಜಾರಕಿಹೊಳಿ ಶನಿವಾರ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಆರ್‌ಎಸ್‌ಎಸ್ ಮುಖಂಡರನ್ನು ಭೇಟಿಯಾಗಿದ್ದು, ಜಾರಕಿಹೊಳಿ ಈ ನಡೆ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.