ಯಡಿಯೂರಪ್ಪ ನನ್ನ ತಂದೆ ಸಮಾನ, ನಮ್ಮ ಮೇಲೆ ಅವರಿಗೆ ಬಹಳ ಪ್ರೀತಿ: ಸಚಿವ ನಾರಾಯಣಗೌಡ
ಕ್ಷೇತ್ರದಲ್ಲಿ ಭಯದ ವಾತಾವರಣದಲ್ಲಿ ನಾನಿಲ್ಲ. ನಿಮ್ಮೆಲ್ಲರ ಆಶೀರ್ವಾದ ಮತ್ತು ಬೆಂಬಲ ನನಗಿರುವಾಗ ನಾನು ಚುನಾವಣೆಗೆ ನಿಲ್ಲಲು ಭಯಪಡುವ ಅಗತ್ಯವಿಲ್ಲ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ಕೆ.ಆರ್.ಪೇಟೆ (ಏ.02): ಕ್ಷೇತ್ರದಲ್ಲಿ ಭಯದ ವಾತಾವರಣದಲ್ಲಿ ನಾನಿಲ್ಲ. ನಿಮ್ಮೆಲ್ಲರ ಆಶೀರ್ವಾದ ಮತ್ತು ಬೆಂಬಲ ನನಗಿರುವಾಗ ನಾನು ಚುನಾವಣೆಗೆ ನಿಲ್ಲಲು ಭಯಪಡುವ ಅಗತ್ಯವಿಲ್ಲ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ಪಟ್ಟಣದ ಬಸವೇಶ್ವರ ನಗರದ ತಮ್ಮ ನಿವಾಸದ ಆವರಣದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವುದನ್ನು ನಿಮ್ಮ ತೀರ್ಮಾನಕ್ಕೆ ಬಿಡುತ್ತಿದ್ದೇನೆ. ಕ್ಷೇತ್ರದ ಶಾಸಕನಾಗಿ ಮತ್ತು ಸಚಿವನಾಗಿ ಜನಪರ ಕೆಲಸ ಮಾಡಿದ ತೃಪ್ತಿ ನನಗಿದೆ ಎಂದರು.
ಕ್ಷೇತ್ರಕ್ಕೆ 1800 ಕೋಟಿ ಅನುದಾನ ತಂದು ಶಾಶ್ವತ ನೀರಾವರಿ ಯೋಜನೆಗಳನ್ನು ರೂಪಿಸಿ ರೈತರು ಮತ್ತು ಜನಸಾಮಾನ್ಯರು ನೆಮ್ಮದಿಯ ಜೀವನ ನಡೆಸಲು ಶ್ರಮಿಸಿದ್ದೇನೆ. ನೀವೆಲ್ಲ ಇರುವಾಗ ನನಗೆ ಚುನಾವಣಾ ಭಯವಿಲ್ಲ. ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ನೀವೆಲ್ಲಾ ಮತ್ತೊಮ್ಮೆ ಕೈ ಜೋಡಿಸಿದರೆ ಚುನಾವಣೆ ಗೆಲ್ಲುವುದು ದೊಡ್ಡದಲ್ಲ ಎಂದು ಹೇಳಿದರು. ಮಂಡ್ಯ ಜಿಲ್ಲೆಯನ್ನು ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು. ಬಿಜೆಪಿ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಯಡಿಯೂರಪ್ಪ ನನ್ನ ತಂದೆ ಸಮಾನ. ನಮ್ಮ ಮೇಲೆ ಅವರು ಬಹಳ ಪ್ರೀತಿ ಇಟ್ಟುಕೊಂಡಿದ್ದಾರೆ.
ನನ್ನ ಅಭಿವೃದ್ಧಿ ನೋಡಿ ಮತ್ತೊಮ್ಮೆ ನನಗೆ ಆಶೀರ್ವದಿಸಿ: ಶಾಸಕ ಹರ್ಷವರ್ಧನ್
ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಕೆ.ಆರ್. ಪೇಟೆ ಕ್ಷೇತ್ರದ ಪ್ರಚಾರಕ್ಕೆ ವಿಜಯೇಂದ್ರ, ಯಡಿಯೂರಪ್ಪ ಬರ್ತಾರೆ. ಕರ್ನಾಟಕವನ್ನೆ ಸುತ್ತುತ್ತಾರೆ, ಕೆ.ಆರ್. ಪೇಟೆ ಬಿಡ್ತಾರಾ.? ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವವರೆಗೂ ಯಡಿಯೂರಪ್ಪನವರು ಸುಮ್ಮನೆ ಕೂರಲ್ಲ. ಯಡಿಯೂರಪ್ಪನವರಿಗೆ ವಯಸ್ಸಾಗಿದೆ ಎಂದು ಕೊಂಡ್ರೆ ಅದು ತಪ್ಪು ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು. ಮಂಡ್ಯ ಜಿಲ್ಲೆಯಲ್ಲಿ ಕನಿಷ್ಠ 3 ರಿಂದ 4 ಸ್ಥಾನಗಳನ್ನು ಬಿಜೆಪಿ ಪಕ್ಷವು ಪಡೆಯುತ್ತದೆ. ಮುಂದೆಯೂ ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಆಗ ಮಂಡ್ಯ ಜಿಲ್ಲೆಯನ್ನು ಸಮಗ್ರ ಅಭಿವೃದ್ದಿಪಡಿಸಲು ನಾವೆಲ್ಲರೂ ದುಡಿಯುತ್ತೇವೆ ಎಂದು ನಾರಾಯಣಗೌಡ ತಿಳಿಸಿದರು.
ಅಭ್ಯರ್ಥಿಗಳ ಆಯ್ಕೆ ಬಿಜೆಪಿ ಸಂಸದೀಯ ಸಭೆಯಲ್ಲಿ ಅಂತಿಮ: ಶಾಸಕ ಬಸನಗೌಡ ಯತ್ನಾಳ
ಸಭೆಯಲ್ಲಿ ಮುಡಾ ಅಧ್ಯಕ್ಷ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಪಂ ಮಾಜಿ ಉಪಾಧ್ಯಕ್ಷರಾದ ಎಸ್. ಅಂಬರೀಶ್, ಬೇಲದಕೆರೆ ಪಾಪೇಗೌಡ, ಹಾಪ್‌ಕಾಮ್ಸ್ ಅಧ್ಯಕ್ಷ ಕೆ.ಜಿ.ತಮಣ್ಣ, ಗೂಡೆಹೊಸಹಳ್ಳಿ ಜವರಾಯಿಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರಾದ ಕೊಡಗಹಳ್ಳಿ ಜಯರಾಮೇಗೌಡ, ಅಘಲಯ ಶ್ರೀಧರ್, ತಾಪಂ ಮಾಜಿ ಅಧ್ಯಕ್ಷ ಬಿ.ಜವರಾಯಿಗೌಡ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶಿವರಾಮೇಗೌಡ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.