Asianet Suvarna News Asianet Suvarna News

ಎಣ್ಣೆ, ನೀರಂತೆ ಬಿಜೆಪಿ-ಜೆಡಿಎಸ್ ಒಂದಾಗಲ್ಲ: ಸಚಿವ ಕೆ.ಎಸ್.ಮುನಿಯಪ್ಪ

ದೇವೇಗೌಡರನ್ನು ಪ್ರಧಾನಿ, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಇದಕ್ಕೆ ಕನಿಷ್ಠ ಕೃತಜ್ಞತೆಯೂ ಇಲ್ಲದ ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಪಾದಯಾತ್ರೆ ನಡೆಸುತ್ತಿದೆ ಎಂದು ಟೀಕಿಸಿದ ಆಹಾರ ಸಚಿವ ಕೆ.ಎಸ್.ಮುನಿಯಪ್ಪ 

minister kh muniyappa slams karnataka bjp jds grg
Author
First Published Aug 4, 2024, 5:00 AM IST | Last Updated Aug 5, 2024, 12:11 PM IST

ರಾಮನಗರ(ಆ.04):  ಎಣ್ಣೆ-ನೀರು ಬೆರೆಯುವುದಿಲ್ಲ. ಅದೇ ರೀತಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಲು ಸಾಧ್ಯವಿಲ್ಲ. ನಿಮ್ಮಿಬ್ಬರ ಅನೈತಿಕ ಸಂಬಂಧ, ಹೆಚ್ಚು ದಿನ ಇರುವುದಿಲ್ಲ. ಬಿಜೆಪಿ ಸಿದ್ಧಾಂತಕ್ಕೂ ದೇವೇಗೌಡರ ತತ್ವ ಸಿದ್ಧಾಂತಕ್ಕೂ ವ್ಯತ್ಯಾಸ ಇದೆ ಎಂದು ಆಹಾರ ಸಚಿವ ಕೆ.ಎಸ್.ಮುನಿಯಪ್ಪ ಭವಿಷ್ಯ ನುಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಬಿಜಿಪಿಯ 21 ಭ್ರಷ್ಟ ಹಗರಣಗಳ ವಿರುದ್ಧ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿ, ದೇವೇಗೌಡರನ್ನು ಪ್ರಧಾನಿ, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಇದಕ್ಕೆ ಕನಿಷ್ಠ ಕೃತಜ್ಞತೆಯೂ ಇಲ್ಲದ ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಪಾದಯಾತ್ರೆ ನಡೆಸುತ್ತಿದೆ ಎಂದು ಟೀಕಿಸಿದರು.

ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇಲ್ಲ: ಸಚಿವ ಮುನಿಯಪ್ಪ

ಮೇಕೆದಾಟು ಯೋಜನೆ, ಪಶ್ಚಿಮ ಘಟ್ಟಗಳಿಂದ ನೀರು ತರುವ ಯೋಜನೆ ಅಥವಾ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಪಾದಯಾತ್ರೆ ಮಾಡಿದ್ದರೆ ಪಾದಯಾತ್ರೆಯನ್ನು ನಾವು ಸ್ವಾಗತಿಸುತ್ತಿದ್ದೆವು. ಆದರೆ, ಕೇಂದ್ರ ಸರ್ಕಾರದಿಂದ ಒತ್ತಡ ಹೇರಿ ರಾಜ್ಯಪಾಲರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿರುವುದು ಖಂಡನೀಯ ಎಂದರು.

ಎಲ್ಲ ಸರ್ಕಾರಗಳ ಅವಧಿಯಲ್ಲಿ ಮುಡಾದಲ್ಲಿ ಅರ್ಹರಿಗೆ ಸೈಟು ಕೊಡಲಾಗಿದೆ. ಆ ಸೈಟಿನ ವಿಚಾರ ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಹೋರಾಟ ಮಾಡುತ್ತಿರುವುದು ಬೆಟ್ಟ ಅಗೆದು ಇಲಿ ಹಿಡಿಯುವಂತಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡಿ, ಇಲ್ಲದಿದ್ದರೆ ಜನರ ಮುಂದೆ ನೀವು ದುರ್ಬಲ ಆಗುತ್ತೀರಾ ಎಂದು ಎಚ್ಚರಿಸಿದರು.

Latest Videos
Follow Us:
Download App:
  • android
  • ios