ಕೇಂದ್ರದ ಬಳಿ ಅಗತ್ಯಕ್ಕಿಂತ 2 ಪಟ್ಟು ಅಕ್ಕಿ ದಾಸ್ತಾನಿದ್ದರೂ ಕೊಡ್ತಿಲ್ಲ: ಸಚಿವ ಮುನಿಯಪ್ಪ ಕಿಡಿ

ಕಾಂಗ್ರೆಸ್‌ ಪಕ್ಷ ನೀಡಿರುವ ಎಲ್ಲ ಐದು ಗ್ಯಾರೆಂಟಿಗಳನ್ನೂ ಜನತೆಗೆ ನೀಡುವುದು ನಿಶ್ಚಿತ. ಅನುಷ್ಠಾನದ ವೇಳೆ ಅಲ್ಪ ವಿಳಂಬವಾಗಬಹುದೇ ಹೊರತು, ಭರವಸೆ ಈಡೇರಿಕೆಯಲ್ಲಿ ಯಾವುದೇ ಲೋಪವಾಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು. 

Minister KH Muniyappa Slams On Central Govt Over Rice Issue gvd

ದೊಡ್ಡಬಳ್ಳಾಪುರ (ಜೂ.26): ಕಾಂಗ್ರೆಸ್‌ ಪಕ್ಷ ನೀಡಿರುವ ಎಲ್ಲ ಐದು ಗ್ಯಾರೆಂಟಿಗಳನ್ನೂ ಜನತೆಗೆ ನೀಡುವುದು ನಿಶ್ಚಿತ. ಅನುಷ್ಠಾನದ ವೇಳೆ ಅಲ್ಪ ವಿಳಂಬವಾಗಬಹುದೇ ಹೊರತು, ಭರವಸೆ ಈಡೇರಿಕೆಯಲ್ಲಿ ಯಾವುದೇ ಲೋಪವಾಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು. ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ಹೊಂದಿಸುವ ಕೆಲಸದಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಬಳಿ ಅಗತ್ಯಕ್ಕಿಂತ 2 ಪಟ್ಟು ಅಕ್ಕಿ ದಾಸ್ತಾನಿದೆ. ನಾವು ಹಣ ಕೊಟ್ಟು ಖರೀದಿಸಲು ಸಿದ್ಧರಿದ್ದೇವೆ ಎಂದು ಪರಿಪರಿಯಾಗಿ ಕೇಳಿಕೊಂಡರೂ ಅವರು ನೀಡಲು ಸಿದ್ಧರಿಲ್ಲ ಎಂದು ಕಿಡಿಕಾರಿದರು. ರಾಜ್ಯ ಬಿಜೆಪಿಯವರಿಗೆ ಜನರ ಹಸಿವು ನೀಗಿಸುವ ಕಾಳಜಿ ಇದ್ದರೆ ಅವರ ಪಕ್ಷದ ಕೇಂದ್ರ ಮುಖಂಡರಿಗೆ ಮನವಿ ಮಾಡಿ ರಾಜ್ಯಕ್ಕೆ ಅಕ್ಕಿ ಒದಗಿಸಲಿ. ಹಣ ಕೊಟ್ಟು ಖರೀದಿಸುತ್ತೇವೆ. ಬಡವರ ಹಸಿವು ನೀಗಿಸುವ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದರು.

ಅನ್ನಭಾಗ್ಯ ಜಾರಿ ಮತ್ತೊಂದು ತಿಂಗಳು ವಿಳಂಬ: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದ ಜಾರಿಯಾಗಿರುವುದಿಲ್ಲ. ಆದರೆ, ಆಗಸ್ಟ್‌ ಮಾಸ ಆರಂಭಕ್ಕೂ ಮೊದಲೇ ಯೋಜನೆ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 1ರಿಂದಲೇ ಅನ್ನಭಾಗ್ಯ ಯೋಜನೆ ಪ್ರಾರಂಭಿಸುವುದಾಗಿ ಹೇಳಿದ್ದೆವು. ಆದರೆ, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಭಾರತೀಯ ಆಹಾರ ನಿಗಮ (ಎಫ್‌ಸಿಐ) ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ಪೂರೈಕೆ ಮಾಡುತ್ತಿಲ್ಲ. 

ಇನ್ನೆರೆಡು ತಿಂಗಳಲ್ಲಿ ಡಿಸೇಲ್‌ ಇಲ್ಲದೆ ಬಸ್‌ಗಳು ಸಂಚಾರ ನಿಲ್ಲಿಸಲಿವೆ: ಬೊಮ್ಮಾಯಿ

ಆದ್ದರಿಂದ ನಿಗದಿಯಂತೆ ಅನ್ನಭಾಗ್ಯ ಯೋಜನೆ ವಿಳಂಬವಾಗುತ್ತಿದೆ. ಆದರೆ, ಆಗಸ್ಟ್‌ ಮಾಸಕ್ಕೂ ಮೊದಲೇ ಯೋಜನೆ ಆರಂಭಿಸಲು ಪ್ರಯತ್ನ ನಡೆದಿದೆ ಎಂದು ಹೇಳಿದರು. ಅನ್ನಭಾಗ್ಯ ಯೋಜನೆ ಜಾರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಅಕ್ಕಿ ಕೊಡುವುದಾಗಿ ಹೇಳಿದ್ದ ಎಫ್‌ಸಿಐ ಈಗ ಅಕ್ಕಿ ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ. ಹೀಗಾಗಿ ಅಕ್ಕಿಗಾಗಿ ಬೇರೆ ರಾಜ್ಯಗಳಿಗೆ ಮನವಿ ಮಾಡುವಂತಾಗಿದೆ. ಈಗಾಗಲೇ ಛತ್ತೀಸ್‌ಗಢ ಮತ್ತು ಪಂಜಾಬ್‌ ಸರ್ಕಾರಗಳು ಅಕ್ಕಿ ಕೊಡಲು ಮುಂದೆ ಬಂದಿವೆ. ಈ ಕುರಿತು ಮಾತುಕತೆಯೂ ನಡೆಯುತ್ತಿದೆ ಎಂದು ತಿಳಿಸಿದರು.

ಛತ್ತೀಸ್‌ಗಢ ಸರ್ಕಾರ ಕೇವಲ ಒಂದು ತಿಂಗಳಿಗೆ ಆಗುವಷ್ಟು ಅಕ್ಕಿ ಕೊಡಲು ಮುಂದೆ ಬಂದಿದೆ. ಕೇವಲ 1.5 ಮೆಟ್ರಿಕ್‌ ಟನ್‌ ಮಾತ್ರ ಕೊಡಲಿದೆ. ಬೇರೆ ರಾಜ್ಯಗಳ ಆಹಾರ ಸಚಿವರ ಜೊತೆಗೆ ಈ ಕುರಿತು ಸಭೆ ನಡೆಸಲಾಗುತ್ತಿದೆ. ಈ ಸಭೆಗಳು ಯಶಸ್ವಿಯಾಗಿ ನಮ್ಮಿಂದ ಅವರಿಗೆ ಹಣ ಸಂದಾಯವಾಗಿ ಅಕ್ಕಿ ಬರಲು ವಿಳಂಬವಾಗಲಿದೆ. ಹೀಗಾಗಿ ನಾವು ಆಗಸ್ಟ್‌ ತಿಂಗಳೊಳಗೆ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ ಎಂದರು.

ಕಾರವಾರದ ಬೈತ್ಕೋಲ್​ನಲ್ಲಿ ಗುಡ್ಡ ಕುಸಿತದ ಭೀತಿ: ಜನವಸತಿ ಪ್ರದೇಶದತ್ತ ಮಳೆ ನೀರು

ಕೇಂದ್ರದ ಅಸಹಕಾರ: ಕೇಂದ್ರ ಸಚಿವ ಪಿಯೂಶ್‌ ಗೋಯಲ್‌ ಅವರ ಭೇಟಿ ಮಾಡಲು ಹೋಗಿದ್ದೆವು. ಆದರೆ, ಅವರು ಸಮಯ ಕೊಡಲಿಲ್ಲ. ರಾಜ್ಯಖಾತೆ ಸಚಿವರನ್ನು ಭೇಟಿಯಾಗಲು ಸಮಯ ಕೇಳಿದ್ದೆವು. ಗುರುವಾರ ಬೆಳಗ್ಗೆ 10 ಗಂಟೆಗೆ ಸಮಯ ನಿಗದಿ ಮಾಡಿದ್ದರು. ಅದನ್ನು ಕೂಡ ಮುಂದಕ್ಕೆ ಹಾಕಿದರು. ಅವರ ಉದ್ದೇಶ ಬಹಳ ಸ್ಪಷ್ಟವಾಗಿದೆ. ಬಡವರಿಗೆ ಅಕ್ಕಿ ಕೊಡಲು ಅವರು ಸಹಕಾರ ಕೊಡುತ್ತಿಲ್ಲ. ಅಕ್ಕಿ ವಿಚಾರವನ್ನು ಅವರು ರಾಜಕೀಯವಾಗಿ ತೆಗೆದುಕೊಂಡಿದ್ದಾರೆ. ಬಡವರಿಗೆ ಕೊಡುವ ಅನ್ನದಲ್ಲಿ ಆಟವಾಡುತ್ತಿದ್ದಾರೆ ಎಂದು ಆರೋಪಿಸಿದರು.

Latest Videos
Follow Us:
Download App:
  • android
  • ios