ನಮ್ಮ ಸರ್ಕಾರ ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತಿದೆ. ಆದರೆ ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಹತಾಶರಾಗಿದ್ದಾರೆ. ತಮ್ಮ ಮನೆ ಹುಳುಕು ಸರಿಪಡಿಸಿಕೊಳ್ಳಲಾಗದೆ ಇತರರ ವಿಚಾರದಲ್ಲಿ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಕಿಡಿಕಾರಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ 

ಕಲಬುರಗಿ(ಆ.02): ಬಿಜೆಪಿಯವರು ತಮ್ಮ ಮನೆಯ ಹುಳುಕು ಮುಚ್ಚಿಕೊಳ್ಳಲು ಪ್ರತಿಯೊಂದರಲ್ಲೂ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಸರ್ಕಾರ ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತಿದೆ. ಆದರೆ ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಹತಾಶರಾಗಿದ್ದಾರೆ. ತಮ್ಮ ಮನೆ ಹುಳುಕು ಸರಿಪಡಿಸಿಕೊಳ್ಳಲಾಗದೆ ಇತರರ ವಿಚಾರದಲ್ಲಿ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಕಿಡಿಕಾರಿದರು. ಅತಿವೃಷ್ಟಿವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಸರ್ಕಾರ ಜನಪರವಾಗಿ ಕಾರ್ಯನಿರ್ವಹಿಸುತ್ತಿದೆ. ಆದಾಗ್ಯೂ ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಿಕೊಳ್ಳಲು ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ಆರೋಪ ಮಾಡುತ್ತಿದೆ ಎಂದು ದೂರಿದರು.

ಹೊಸ ತಾಲೂಕುಗಳಿಗೆ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸಲು ಬದ್ಧ: ಸಚಿವ ಕೃಷ್ಣ ಬೈರೇಗೌಡ

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಎರಡೂವರೆ ತಿಂಗಳಾದರೂ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಪ್ರತಿ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಅವರ ಮನೆ ಹುಳುಕು ಮುಚ್ಚಿಕೊಳ್ಳಲು ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರತಿ ಪಕ್ಷ ನಾಯಕ ಯಾರೆಂಬುದು ಜನ ಕೇಳಲು ಮುಂದಾಗಿದ್ದಾರೆ. ಬಜೆಟ್‌ ಪಾಸ್‌ ಆದರೂ ಪ್ರತಿ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ ಎಂದು ಲೇವಡಿ ಮಾಡಿದರು.

ಇಡೀ ಭಾರತದಲ್ಲೇ ಕರ್ನಾಟಕ ವಿಧಾನಮಂಡಲಕ್ಕೆ ಒಳ್ಳೆಯ ಹೆಸರಿದೆ. ಆದರೂ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಹಾಗೂ ರಾಜ್ಯಪಾಲರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚಿಸುವುದಕ್ಕೂ ಉಭಯ ಸದನಗಳಲ್ಲಿ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗದಷ್ಟುಬಿಜೆಪಿ ಅಯೋಗ್ಯವಾಗಿದೆ ಎಂದರು.