ಬೆಂಗಳೂರು, (ಅ.11): ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಕುರುಬ ಸಮುದಾಯಕ್ಕೆ ST ಮೀಸಲಾತಿ ಹೋರಾಟಕ್ಕಾಗಿ ರೂಪರೇಷಗಳು ನಡೆಯುತ್ತಿದ್ದು,  ಇಂದು (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕುರುಬ ಸಮುದಾಯದ ಸಭೆಯಲ್ಲಿ ಈ ಮಾತು ಹೇಳಿದ್ದು ಅಚ್ಚರಿಗೆ ಕಾರಣವಾಗಿದೆ.

"

'ಕೇಂದ್ರ ಸಚಿವರು, ಸಂಸದರು ನಿಧನರಾದ್ರು ಅಂಥ ಲೋಕಸಭೆ ಮುಚ್ಚೋಕಾಗುತ್ತಾ?'

ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಹೇಳಿದರು.

ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.