ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ವಿಘ್ನ ಎದುರಾಗಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ
ಬೆಂಗಳೂರು, (ಏ.19): ಹಳ್ಳಿ ಫೈಟ್ ಎಂದೇ ಕರೆಯಲ್ಪಡುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಥಳೀಯ ನಾಯಕರು ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೇ ಈಗಾಗಲೇ ಕ್ಷೇತ್ರ ವಿಂಗಡಣೆ ಕಾರ್ಯ ಸಹ ಮುಗಿದಿದ್ದು, ನಾಯರುಗಳು ಚುನಾವಣೆಗೆ ಸಜ್ಜಾಗಿ ನಿಂತಿದ್ದಾರೆ.
ಆದ್ರೆ, ಸದ್ಯ ರಾಜ್ಯದಲ್ಲಿ ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಮುಂದೂಡಲು ಸರ್ಕಾರ ನಿರ್ಧರಿಸಿದೆ.
ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ ಪ್ರಕಟಿಸಿದ ಚುನಾವಣಾ ಆಯೋಗ
ಈ ಬಗ್ಗೆ ಇಂದು (ಸೋಮವಾರ) ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯ ಬಗ್ಗೆ ಚರ್ಚೆ ಆಗುತ್ತಿದೆ. ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದು ಚುನಾವಣೆ ಮುಂದೂಡಿಕೆಗೆ ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ವಿಡ್ ಉಲ್ಬಣ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆ ಮುಂದೂಡುವ ಬಗ್ಗೆ ಸಚಿವ ಸಂಪುಟದಲ್ಲಿ ಮಂಡಿಸಿ ನಂತರ ನಿರ್ಧಾರವನ್ನು ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದರು.
ಮೂರುವರೆ ಕೋಟಿ ಗ್ರಾಮೀಣ ಪ್ರದೇಶದ ಜನ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಭಾಗಿಯಾಗಲಿದ್ದಾರೆ . ಅವಧಿ ಮುಗಿದಿರುವ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನಿಯೋಜಿಸಲು ಚಿಂತನೆ ನಡೆದಿದೆ ಎಂದು ಹೇಳಿದರು.
